Adarsha Raita: ಹಾಡಿನಲ್ಲಿ ಆದರ್ಶ ರೈತ


Team Udayavani, Sep 13, 2023, 1:29 PM IST

Adarsha Raita: ಹಾಡಿನಲ್ಲಿ ಆದರ್ಶ ರೈತ

ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ “ಆದರ್ಶ ರೈತ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈಗಾಗಲೇ “ಆದರ್ಶ ರೈತ’ ಸಿನಿಮಾದ ಬಹುತೇಕ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇತ್ತೀಚೆಗೆ ಸಿನಿಮಾದ ಲಿರಿಕಲ್‌ ವಿಡಿಯೋವನ್ನು ಬಿಡುಗಡೆ ಮಾಡಿದೆ.

“ಕುಮುದ ಆರ್ಟ್ಸ್ ಕ್ರಿಯೇಷನ್ಸ್‌’ ಬ್ಯಾನರಿನಲ್ಲಿ ಡಾ. ಅಮರನಾಥ ರೆಡ್ಡಿ ವಿ. ನಿರ್ಮಿಸಿ ಮತ್ತು ನಾಯಕ ನಟನಾಗಿ ಅಭಿನಯಿಸಿರುವ “ಆದರ್ಶ ರೈತ’ ಸಿನಿಮಾಕ್ಕೆ ರಾಜೇಂದ್ರ ಕೊಣಿದೆಲ ಕಥೆ, ಚಿತ್ರಕಥೆ, ಸಾಹಿತ್ಯ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.

ಇದೇ ವೇಳೆ ಮಾತನಾಡಿದ ನಿರ್ದೇಶಕ ರಾಜೇಂದ್ರ ಕೊಣಿದೆಲ, “ರೈತರ ಸಂಕಷ್ಟ ಮತ್ತು ಸಮಸ್ಯೆಗಳನ್ನು ಇಟ್ಟುಕೊಂಡು ಆರಂಭದಲ್ಲಿ ಒಂದು ಶಾರ್ಟ್‌ ಫಿಲಂ ನಿರ್ಮಿಸಬೇಕು ಎಂದುಕೊಂಡಿದ್ದೆವು. ಆದರೆ ಕಥೆಯ ಎಳೆ ತುಂಬಾ ಚೆನ್ನಾಗಿದ್ದ ಕಾರಣ, ನಿರ್ಮಾಪಕರ ಆಸೆಯಂತೆ ಅದನ್ನೇ ಸಿನಿಮಾ ಮಾಡುವಂತಾಯಿತು. ರೈತರ ಜೀವನದ ಮೇಲೆ ಬೆಳಕು ಚೆಲ್ಲುವಂತಹ, ಸಮಾಜಕ್ಕೆ ಸಂದೇಶ ನೀಡುವಂತಹ ಸಿನಿಮಾ ಇದಾಗಿದೆ’ ಎಂದು ಸಿನಿಮಾದ ಹಿಂದಿನ ಕಥೆ ತೆರೆದಿಟ್ಟರು.

ನಟನೆ ಮತ್ತು ನಿರ್ಮಾಣದ ಬಗ್ಗೆ ಮಾತನಾಡಿದ ಡಾ. ಅಮರನಾಥ ರೆಡ್ಡಿ, “ನಾವು ಮೂಲತಃ ರೈತಾಪಿ ಕುಟುಂಬದಿಂದ ಬಂದವರು. ಆರಂಭದಿಂದಲೂ ಸಿನಿಮಾದ ಕಡೆಗೆ ಒಲವಿತ್ತು. ಆದರೆ ಕಾರಣಾಂತರಗಳಿಂದ ಸಿನಿಮಾ ಮಾಡಲಾಗಿರಲಿಲ್ಲ. ರೈತರ ಜೀವನವನ್ನು ಸಿನಿಮಾ ಮೂಲಕವೇ ಹೇಳಬೇಕು ಎಂಬ ಉದ್ದೇಶದಿಂದ ಈಗ “ಆದರ್ಶ ರೈತ’ ಸಿನಿಮಾವನ್ನು ನಿರ್ಮಿಸಿ, ಅದರಲ್ಲಿ ರೈತನಾಗಿ ಅಬಿನಯಿಸಿದ್ದೇನೆ. ರೈತರ ಸಮಸ್ಯೆಗಳ ಜೊತೆಗೆ ಒಂದಷ್ಟು ಸಂದೇಶ ಕೂಡ ಸಿನಿಮಾದಲ್ಲಿದೆ. ಜೊತೆಗೆ ಆಡಿಯನ್ಸ್‌ಗೆ ಇಷ್ಟವಾಗುವಂಥ ಮನರಂಜನಾತ್ಮಕ ಅಂಶಗಳೂ ಸಿನಿಮಾದಲ್ಲಿದೆ’ ಎಂದು ವಿವರಣೆ ನೀಡಿದರು.

2 ವರ್ಷಗಳ ಹಿಂದೆ ಶುರುವಾದ “ಆದರ್ಶ ರೈತ’ ಸಿನಿಮಾವನ್ನು ಚಿಂತಾಮಣಿ ಸುತ್ತಮುತ್ತ ಚಿತ್ರೀಕರಿಸಲಾಗಿದೆ. ಡಾ. ಅಮರನಾಥ ರೆಡ್ಡಿ ಅವರೊಂದಿಗೆ ರೇಖಾದಾಸ್‌, ಖುಷಿ ಮೆಹ್ತಾ, ಸೂಫಿಯಾ, ಸಿದ್ದಾರ್ಥ, ಸುಜಾತಾ ಮೈಸೂರು ಮೊದಲಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ., ಶೀಘ್ರದಲ್ಲಿಯೇ ಸಿನಿಮಾವನ್ನು ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ.

ಕ್ಲೈಮ್ಯಾಕ್ಸ್‌ಮುಗಿಸಿದ ಕಾಟೇರ: ದರ್ಶನ್‌ ನಾಯಕರಾಗಿರುವ “ಕಾಟೇರ’ ಚಿತ್ರ ಈಗಾಗಲೇ ನೂರು ದಿನಗಳ ಚಿತ್ರೀಕರಣ ಪೂರೈಸಿದೆ. ಇನ್ನು ಚಿತ್ರದ ಮೂರು ಹಾಡುಗಳ ಚಿತ್ರೀಕರಣವಷ್ಟೇ ಬಾಕಿ ಇದೆ. ಈ ಚಿತ್ರವನ್ನು ರಾಕ್‌ಲೈನ್‌ ವೆಂಕಟೇಶ್‌ ನಿರ್ಮಿಸುತ್ತಿದ್ದಾರೆ. ಈ ಸಿನಿಮಾ ಆಗಲು ಕಾರಣ ಕೂಡಾ ದರ್ಶನ್‌ ಅಂತೆ. “ನಾನು ಒಳ್ಳೆಯ ಕಥೆಯ ಹುಡುಕಾಟದಲ್ಲಿದ್ದಾಗ ದರ್ಶನ್‌ ಅವರೇ “ಹೀಗೊಂದು ಕಥೆ ಇದೆ. ಒಮ್ಮೆ ಕೇಳಿ’ ಎಂದರು. ಅದರಂತೆ ತರುಣ್‌ ಸುಧೀರ್‌ ಬಂದು ನರೇಶನ್‌ ಕೊಟ್ಟಾಗ ಖುಷಿಯಾಗಿ ಈ ಸಿನಿಮಾ ಮಾಡಲು ಒಪ್ಪಿಕೊಂಡೆ. ನನಗೆ ಯಾವುದೇ ತೊಂದರೆಯಾಗ ದಂತೆ ಇಡೀ ತಂಡ ಸಿನಿಮಾ ಮಾಡುತ್ತಿದೆ’ ಎಂದರು ರಾಕ್‌ಲೈನ್‌ ವೆಂಕಟೇಶ್‌. ‌

ಟಾಪ್ ನ್ಯೂಸ್

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.