ಗಜಾನನ ಬಳಗದಲ್ಲಿ ಅದಿತಿ
Team Udayavani, Aug 24, 2020, 7:08 PM IST
“ರಂಗ ನಾಯಕಿ’ ಚಿತ್ರದ ಬಳಿಕ ನಟಿ ಅದಿತಿ ಪ್ರಭುದೇವ ನಾಯಕಿಯಾಗಿ ಮತ್ತೂಂದು ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ, ಅದಿತಿ ಅಭಿನಯಿಸುತ್ತಿರುವ ಹೊಸಚಿತ್ರದ ಹೆಸರು “ಗಜಾನನ ಗ್ಯಾಂಗ್’.
2014 ರಿಂದ 2021ರ ವರೆಗೆ ಸಮಾಜದಲ್ಲಿ ನಡೆಯುವ ವಿವಿಧ ಘಟನೆಗಳ ಸುತ್ತ ನಡೆಯುವ ಈ ಚಿತ್ರದಲ್ಲಿ ಎಲ್ಲ ಸನ್ನಿವೇಶಗಳೂ 2021ರಿಂದ ಶುರುವಾಗಿ ಫ್ಲ್ಯಾಶ್‌ಬ್ಯಾಕ್‌ದಲ್ಲಿ 2014ರ ವರೆಗೂ ಸಾಗುತ್ತದೆಯಂತೆ. ಅದರೊಂದಿಗೆ ಗೆಳೆತನ, ಮಧ್ಯಮ ವರ್ಗದ ಪ್ರೀತಿ ಮತ್ತಿತರ ಅರ್ಥಪೂರ್ಣ ಅಂಶಗಳು “ಗಜಾನನ ಗ್ಯಾಂಗ್’ ಚಿತ್ರದಲ್ಲಿ ಇರಲಿವೆ ಎನ್ನುತ್ತದೆ ಚಿತ್ರತಂಡ.
ಇನ್ನು ಈ ಚಿತ್ರದಲ್ಲಿ ಅದಿತಿ ಪ್ರಭುದೇವ ಮಧ್ಯಮ ಕುಟುಂಬದ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಈ ಹಿಂದೆ “ಇರುವುದೆಲ್ಲವ ಬಿಟ್ಟು’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ನಟಿಸಿದ್ದ ಶ್ರೀ ಮಹದೇವ್ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದು, ಇವರಿಗೆ ಅದಿತಿ ಪ್ರಭುದೇವ ನಾಯಕಿಯಾಗಿ ಜೋಡಿಯಾಗುತ್ತಿದ್ದಾರೆ. ಇನ್ನು ಕಳೆದ ವರ್ಷ “ನಮ್ ಗಣಿ ಬಿ.ಕಾಂ ಪಾಸ್’ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದ ಅಭಿಷೇಕ್ ಶೆಟ್ಟಿ ಈ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದು, ಜೊತೆಗೊಂದು ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಚಿತ್ರಕ್ಕೆ ಪ್ರದ್ಯುತ್ತನ್ ಸಂಗೀತ, ಉದಯಲೀಲಾ ಛಾಯಾಗ್ರಹಣ, ವಿಜೇತ್‌ಚಂದ್ರ ಸಂಕಲನ ಕಾರ್ಯ ನಿರ್ವಹಿಸುತ್ತಿದ್ದಾರೆ.
“ಬೃಂದಾವನ್ ಎಂಟರ್‌ಪ್ರೈಸಸ್’ ಬ್ಯಾನರ್‌ನಲ್ಲಿ ಯು.ಎಸ್.ನಾಗೇಶ್ ಕುಮಾರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಉಳಿದಂತೆ ಚಿತ್ರದ ಇತರ ಕಲಾವಿದರು, ತಂತ್ರಜ್ಞರ ಆಯ್ಕೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.