ಆನ ಆದ ಅದಿತಿ : ಹೊಸ ಚಿತ್ರಕ್ಕೆ ಟೈಟಲ್‌ ಫಿಕ್ಸ್‌


Team Udayavani, Oct 26, 2020, 9:20 AM IST

cinema-tdy-1

ನಟಿ ಅದಿತಿ ಪ್ರಭುದೇವ ನಾಯಕಿಯಾಗಿ ಭಾನುವಾರ, ಅಕ್ಟೋಬರ್‌ 25, 2020 ಅಭಿನಯಿಸುತ್ತಿರುವ ಹೊಸಚಿತ್ರದ ಟೈಟಲ್‌ ಅನೌನ್ಸ್‌ ಆಗಿದೆ. ಮನೋಜ್‌ ಪಿ. ನಡಲುಮನೆ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ “ಆನ’ ಎಂದು ಹೆಸರಿಡಲಾಗಿದೆ.

ದಸರಾ ಹಬ್ಬದ ಸಂದರ್ಭದಲ್ಲಿ ಚಿತ್ರದ ಫ‌ಸ್ಟ್‌ಲುಕ್‌ ಪೋಸ್ಟರ್‌ ಬಿಡುಗಡೆಯಾಗಿದ್ದು, ಚಿತ್ರದಲ್ಲಿ ಅದಿತಿ ಸೂಪರ್‌ ವುಮೆನ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. “ಯುಕೆ ಪ್ರೋಡಕ್ಷನ್ಸ್‌’ ಲಾಂಛನದಲ್ಲಿ ಶ್ರೀಮತಿ ಪೂಜಾ ವಸಂತಕುಮಾರ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಈ ಹಿಂದೆ ಕೆಲ ಕಿರುಚಿತ್ರ ಮತ್ತು ಟೆಲಿ ಫಿಲಂಗಳನ್ನು ನಿರ್ದೇಶನ ಮಾಡಿದಅನುಭವ ಹೊಂದಿರುವ ನಿರ್ದೇಶಕ ಮನೋಜ್‌ ಪಿ. ನಡಲುಮನೆ ಈ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗುತ್ತಿದ್ದಾರೆ. ತಮ್ಮ ಚೊಚ್ಚಲ ಚಿತ್ರದ ಬಗ್ಗೆ ಮಾತನಾಡುವ ಮನೋಜ್‌, “ಲಾಕ್‌ ಡೌನ್‌ ಸಮಯದಲ್ಲಿ ಹೊಳೆದ ಕಥೆ ಇದು. ಸದ್ಯ ಇಡೀ ಭಾರತದಲ್ಲಿ ಲೇಡಿ ಸೂಪರ್‌ ಹೀರೋ ಪರಿಕಲ್ಪನೆಯಲ್ಲಿ ಯಾವುದೇ ಸಿನಿಮಾ ಬಂದಿಲ್ಲ. ಅದನ್ನೇ ಗಮನದಲ್ಲಿಟ್ಟುಕೊಂಡು ಈ ಕಥೆ ಸಿದ್ಧಪಡಿಸಿಕೊಂಡು, ಸಿನಿಮಾ ಆರಂಭಿಸಿದ್ದೆ. ಇನ್ನೆರಡು ದಿನದ ಕ್ಲೈಮ್ಯಾಕ್ಸ್‌ ಶೂಟಿಂಗ್‌ ಬಾಕಿ ಇದೆ. ಚಿತ್ರದ ಕೊನೆಯ 20 ನಿಮಿಷಗಳು ನೋಡುಗರನ್ನು ಫ್ಯಾಂಟಸಿ ಲೋಕಕ್ಕೆ ಕರೆದೊಯ್ಯುವುದು ಪಕ್ಕಾ. ಹಾರರ್‌ ಶೈಲಿಯ ಅಂಶಗಳೂ ಈ ಸಿನಿಮಾದಲ್ಲಿವೆ.

ತಾಂತ್ರಿಕವಾಗಿ ಇಡೀ ಸಿನಿಮಾ ಶ್ರೀಮಂತವಾಗಿ ಮೂಡಿಬಂದಿದೆ. ಇನ್ನೊಂದು ವಿಶೇಷ ಏನೆಂದರೆ, ಈ ಸಿನಿಮಾ ಮುಂದಿನ ದಿನಗಳಲ್ಲಿ ಚಾಪ್ಟರ್‌ ಗಳಾಗಿಯೂ ಸಿದ್ಧವಾಗಲಿದೆ’ ಎಂದು ಮಾಹಿತಿ ನೀಡಿದರು. ಇನ್ನು ತಮ್ಮ ಪಾತ್ರದ ಬಗ್ಗೆ ಹೇಳಿಕೊಳ್ಳುವ ಅದಿತಿ, “ತುಂಬ ಇಷ್ಟಪಟ್ಟು ಮತ್ತು ತುಂಬ ಕಷ್ಟಪಟ್ಟು ಮಾಡಿದ ಸಿನಿಮಾ  ಇದು. ಇಂಥ ಪಾತ್ರ ಸಿಕ್ಕಿದ್ದು ನನ್ನ ಅದೃಷ್ಟ. ಕಥೆ ಕೇಳಿ ಒಂದೇ ಸಲಕ್ಕೆ ನಟಿಸಲು ಒಪ್ಪಿಕೊಂಡೆ. ಚಿತ್ರದ ಬಹುಪಾಲು ಶೂಟಿಂಗ್‌ ರಾತ್ರಿ ಹೊತ್ತಿನಲ್ಲಿಯೇ ನಡೆದಿದೆ. ಇನ್ನು ಕೆಲ ಭಾಗದ ಚಿತ್ರೀಕರಣ ಬಾಕಿ ಇದೆ. ನನ್ನ ಸಿನಿಮಾ ಕರಿಯರ್‌ ನಲ್ಲಿ ಇಲ್ಲಿಯವರೆಗೂ ಮಾಡಿದ ಪಾತ್ರಗಳಿಗಿಂತ ವಿಭಿನ್ನ ಪಾತ್ರ ಈ ಸಿನಿಮಾದಲ್ಲಿದೆ. ಇಂತಹ ಅವಕಾಶ ನೀಡಿದ ಟೀಮ್‌ಗೆ ಧನ್ಯವಾದ’ ಎಂದರು.

ಇನ್ನು “ಆನ’ ಚಿತ್ರದಲ್ಲಿ ಅದಿತಿ ಜತೆಗೆ ನಾಲ್ಕು ಪ್ರಮುಖ ಪಾತ್ರಗಳು ಇರಲಿವೆ. ಸಮರ್ಥ, ವಿಕಾಸ್‌ ಉತ್ತಯ್ಯ, ವರುಣ್‌ ಅಮರಾವತಿ ಮತ್ತು ಕಾರ್ತಿಕ್‌ ನಾಗರಾಜ್‌ ಚಿತ್ರದ ಇತರೆ ಮುಖ್ಯ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಈ ಹಿಂದೆ “ಚೂರಿಕಟ್ಟೆ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇರಣಾ ಚಿತ್ರದ ಮತ್ತೂಂದು ಪಾತ್ರದಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಉದಯ್‌ ಲೀಲಾ ಛಾಯಾಗ್ರಹಣ, ವಿಜೇತ ಚಂದ್ರ ಸಂಕಲನವಿದೆ. ಚಿತ್ರದ ಹಾಡುಗಳಿಗೆ ರಿತ್ವಿಕ್‌ ಮುರಳೀಧರ್‌ ಸಂಗೀತ ಸಂಯೋಜನೆಯಿದೆ. ಸದ್ಯ ಟೈಟಲ್‌ ಅನಾವರಣ ಮಾಡಿ, ಮೋಷನ್‌ ಪೋಸ್ಟರ್‌ ರಿಲೀಸ್‌ ಮಾಡಿರುವ ಚಿತ್ರತಂಡ, ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಿಗೆ ಚಾಲನೆ ನೀಡಿದೆ. ಚಿತ್ರಮಂದಿರಗಳು ಯಥಾಸ್ಥಿತಿಗೆ ಬರುತ್ತಿದ್ದಂತೆ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದೆ ಚಿತ್ರತಂಡ.

ಟಾಪ್ ನ್ಯೂಸ್

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Australian Open:  ಹಿಂದೆ ಸರಿದ ಸಿಮೋನಾ ಹಾಲೆಪ್‌

Australian Open: ಹಿಂದೆ ಸರಿದ ಸಿಮೋನಾ ಹಾಲೆಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.