ಡಿ.17 ಅದಿತಿ ಪ್ರಭುದೇವರ ‘ಆನ’ ರಿಲೀಸ್‌

Team Udayavani, Dec 16, 2021, 12:07 PM IST

ಡಿ.17 ಅದಿತಿ ಪ್ರಭುದೇವರ ‘ಆನ’ ರಿಲೀಸ್‌

ಸಿನಿಮಾ ಮೇಲೆ ಸಿನಿಮಾ ಒಪ್ಪಿಕೊಳ್ಳುತ್ತಾ, ಸದಾ ಬಿಝಿಯಾಗಿರುವ ಅದಿತಿ ನಟನೆಯ ಸಿನಿಮಾವೊಂದು ಈ ವಾರ ತೆರೆಕಾಣುತ್ತಿದೆ. ಅದು “ಆನ’. ವಿಶೇಷವೆಂದರೆ ಇದು ನಾಯಕಿ ಪ್ರಧಾನ ಚಿತ್ರ. ಹಾಗಾಗಿ, ಸಿನಿಮಾದ ಸೋಲು-ಗೆಲುವು ಎರಡೂ ಅದಿತಿ ಹೆಗಲ ಮೇಲಿದೆ ಎಂದರೆ ತಪ್ಪಾಗಲ್ಲ. ಈ ಚಿತ್ರದಲ್ಲಿ ಅದಿತಿಗೆ ವಿಭಿನ್ನ ಪಾತ್ರ ಹಾಗೂ ಗೆಟಪ್‌ ಸಿಕ್ಕಿದೆಯಂತೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಮನೋಜ್‌ ಪಿ ನಡಲುಮನೆ, “ಕಳೆದ ವಾರ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್‌ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಇದೇ 17ರಂದು ಚಿತ್ರ ತೆರೆಗೆ ಬರಲಿದೆ. ಇದೇ ಮೊದಲ ಬಾರಿಗೆ ಅದಿತಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸುನೀಲ್‌ ಪುರಾಣಿಕ್‌ ಅವರ ಪಾತ್ರ ಸಹ ಎಲ್ಲರ ನೆನಪಿನಲ್ಲಿ ಉಳಿಯುತ್ತದೆ. ಚಿತ್ರ ಉತ್ತಮವಾಗಿ ಮೂಡಿಬಂದಿದೆಯಾದರೂ ತೆಲುಗಿನ ದೊಡ್ಡ ಚಿತ್ರವೊಂದು ಬಿಡುಗಡೆಯಾಗುತ್ತಿರುವಕಾರಣ ನನ್ನ ಊರಾದ ದಾವಣಗೆರೆಯಲ್ಲೇ ನಮ್ಮ ಚಿತ್ರಕ್ಕೆ ಚಿತ್ರಮಂದಿರ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನಾಯಕಿ ಅದಿತಿ ಕೂಡಾ “ಆನ’ ಮೇಲೆ  ನಿರೀಕ್ಷೆ ಇಟ್ಟಿದ್ದಾರೆ. “ನಾನು ಈವರೆಗೂ ಈ ರೀತಿಯ ಪಾತ್ರ ಮಾಡಿಲ್ಲ. ನನಗೂ ಚಿತ್ರ ಒಪ್ಪಿಕೊಂಡಾಗ ಹೇಗೆಕಾಣುತ್ತೇನೋ ಎಂಬ ಭಯವಿತ್ತು. ಈಗ ಆ ಭಯ ಹೋಗಿದೆ. ಚಿತ್ರ ಗೆಲ್ಲುತ್ತದೆ ಎಂಬ ನಂಬಿಕೆ ಇದೆ’ ಎಂದರು.

ಪೂಜಾ ವಸಂತಕುಮಾರ್‌ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಉದಯ್‌ ಲೀಲಾ ಛಾಯಾಗ್ರಹಣ, ರಿತ್ವಿಕ್‌ ಮುರಳೀಧರ್‌ ಅವರ ಸಂಗೀತ ನಿರ್ದೇಶನವಿರುವ “ಆನ’ಗೆ ವಿಜೇತ್‌ ಚಂದ್ರ ಅವರ ಸಂಕಲನವಿದೆ.

ಚಿತ್ರದಲ್ಲಿ ಅದಿತಿ ಪ್ರಭುದೇವ, ಸುನೀಲ್‌ ಪುರಾಣಿಕ್‌, ಚೇತನ್‌ ಗಂಧರ್ವ, ರನ್ವಿತ್‌ ಶಿವಕುಮಾರ್‌, ವಿಕಾಶ್‌ ಉತ್ತಯ್ಯ ಪ್ರೇರಣಾಕಂಬಮ್, ವರುಣ್‌ ಅಮರವಾತಿ, ಸಮರ್ಥ್ ನರಸಿಂಹರಾಜು, ಕಾರ್ತಿಕ್‌ ನಾಗಾರಾಜನ್‌, ಶಿವಮಂಜು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಟಾಪ್ ನ್ಯೂಸ್

MM-Singh

ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಡಾ. ಮನಮೋಹನ್‌ ಸಿಂಗ್‌

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh

ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಡಾ. ಮನಮೋಹನ್‌ ಸಿಂಗ್‌

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.