ಶಿವಣ್ಣನ ನಂತರ “ನಾಗರಹಾವು’ ನೋಡಿದ ಜಗ್ಗೇಶ್
Team Udayavani, Jul 25, 2018, 3:24 PM IST
ಸಾಹಸಸಿಂಹ ಡಾ.ವಿಷ್ಣುವರ್ಧನ್ ಅಭಿನಯದ ಕ್ಲಾಸಿಕ್ ಸಿನಿಮಾ “ನಾಗರಹಾವು’ ಈಗಾಗಲೇ ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸುತ್ತಿದ್ದು, ಅಭಿಮಾನಿಗಳು ಥಿಯೇಟರ್‌ನತ್ತ ಮುಖ ಮಾಡುತ್ತಿದ್ದಾರೆ. ಡಿಜಿಟಲ್ ಟಚ್‌ನಲ್ಲಿ ಮೂಡಿಬಂದಿರುವ ಈ ಸಿನಿಮಾವನ್ನು ಥಿಯೇಟರ್‌ನಲ್ಲೇ ನೋಡೋದಾಗಿ ಚಿತ್ರೋದ್ಯಮದ ಹಲವರು ಹೇಳಿದ್ದರು.
ಇತ್ತಿಚೆಗಷ್ಟೇ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ನರ್ತಕಿ ಚಿತ್ರಮಂದಿರದಲ್ಲಿ ಅಭಿಮಾನಿಗಳ ಜೊತೆ ಕುಳಿತು ಚಿತ್ರ ನೋಡಿ ಅದರ ಬಗ್ಗೆ ಅನೇಕ ನೆನಪುಗಳನ್ನು ಹಂಚಿಕೊಂಡಿದ್ದರು. ಅಲ್ಲದೇ ಈಶ್ವರಿ ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ವಿಷ್ಣುವರ್ಧನ್ ಸ್ಮಾರಕ ಆಗಬೇಕು. ಆಗುತ್ತೆ. ಈ ಕುರಿತು ಎಲ್ಲ ಪ್ರಯತ್ನವನ್ನೂ ಮಾಡುತ್ತೇವೆ ಎಂದಿದ್ದರು. ಶಿವಣ್ಣನ ಜೊತೆ ರವಿಚಂದ್ರನ್ ಸೋದರ ಬಾಲಾಜಿ ಕೂಡಾ ಸಿನಿಮಾ ವೀಕ್ಷಿಸಿದರು.
ಇದೀಗ ನವರಸ ನಾಯಕ ಜಗ್ಗೇಶ್, ಹೊಸ ತಂತ್ರಜ್ಞಾನದಲ್ಲಿ ಮೂಡಿಬಂದಿರುವ ಹೊಸ ನಾಗರಹಾವನ್ನು ನೋಡಿ ಅದ್ಭುತವಾಗಿದೆ ಎಂದಿದ್ದಾರೆ. ಅಲ್ಲದೇ ತಮ್ಮ ಟ್ವಿಟರ್ ಖಾತೆಯಲ್ಲಿ ಚಿತ್ರದ ಬಗ್ಗೆ “ಬಾಲ್ಯದಲ್ಲಿ ನೋಡಿದ “ನಾಗರಹಾವು” ರಾಮಾಚಾರಿ ಇಂದು ಚಿತ್ರಮಂದಿರದಲ್ಲಿ ನೋಡಿ ಕಣ್ತುಂಬಿಸಿಕೊಂಡೆ..ಸೂಪರ್ ದಾದ love you..’ ಎಂದು ಬರೆದುಕೊಂಡಿದ್ದಾರೆ.
ಅಂದ ಹಾಗೆ “ನಾಗರಹಾವು’ ಬಿಡುಗಡೆಯಾದಾಗಿನಿಂದ ಇಲ್ಲಿಯವರೆಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಸಖತ್ ಕಲೆಕ್ಷನ್ ಮಾಡಿದೆ. ಅಲ್ಲದೇ ಸಿನಿಮಾವನ್ನು ಹೊರರಾಜ್ಯಗಳಲ್ಲೂ ರಿಲೀಸ್ ಮಾಡೋಕೆ ವಿತರಕರು ಮುಂದಾಗಿದ್ದಾರೆ. ಕೆಲವೇ ದಿನಗಳಲ್ಲಿ ಅಲಹಾಬಾದ್, ಹೈದರಾಬಾದ್ಗಳಲ್ಲೂ “ನಾಗರಹಾವು’ ತೆರೆ ಕಾಣಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.