Sandalwood; ನಿರ್ದೇಶಕರಿಗೆ ಫಾರ್ಚೂನರ್ ಗಿಫ್ಟ್ ನೀಡಿದ ಅಜಾಗ್ರತ ನಿರ್ಮಾಪಕ
Team Udayavani, Jun 30, 2024, 2:29 PM IST
ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸಿರುವ, ರವಿರಾಜ್ ನಿರ್ಮಾಣದ ಹಾಗೂ ಎಂ.ಶಶಿಧರ್ ನಿರ್ದೇಶನದ “ಅಜಾಗ್ರತ’ ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿದುದೆ. ಈಗಾಗಲೇ ಚಿತ್ರದ ಮೊದಲ ಪ್ರತಿ ನೋಡಿದ ನಿರ್ಮಾಪಕರು ಖುಷಿಯಾಗಿದ್ದಾರೆ. ಇದರ ಪರಿಣಾಮ ಚಿತ್ರದ ನಿರ್ದೇಶಕರಿಗೆ ದುಬಾರಿ ಕಾರು ಉಡುಗೊರೆ ನೀಡಿದ್ದಾರೆ.
ನಿರ್ದೇಶಕರು ಕಥೆ ಹೇಳಿದ ರೀತಿಯಲ್ಲೇ, ಅದಕ್ಕೂ ಹೆಚ್ಚಾಗಿಯೇ ಚಿತ್ರವನ್ನು ಬಹಳ ಚೆನ್ನಾಗಿ ಮಾಡಿ ಮುಗಿಸಿದ್ದಾರೆ. ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಚಿತ್ರ ನೋಡಿ ನನಗೆ ತುಂಬಾ ಖುಷಿಯಾಗಿದೆ.
ಚಿತ್ರವನ್ನು ಉತ್ತಮವಾಗಿ ನಿರ್ದೇಶಿಸಿರುವ ನಿರ್ದೇಶಕರಿಗೆ ಉಡುಗೊರೆ ನೀಡುವ ಮನಸ್ಸಾಯಿತು. ಹಾಗಾಗಿ ಫಾರ್ಚೂನರ್ ಕಾರನ್ನು ಉಡುಗೊರೆಯಾಗಿ ನೀಡುತ್ತೀದ್ದೇನೆ ಎಂದು ನಿರ್ಮಾಪಕ ರವಿರಾಜ್ ತಿಳಿಸಿದ್ದಾರೆ. ಚಿತ್ರ ಬಿಡುಗಡೆಯಾಗಿ ಯಶಸ್ವಿಯಾದ ನಂತರ ನಿರ್ದೇಶಕರಿಗೆ ಉಡುಗೊರೆ ನೀಡುವ ನಿರ್ಮಾಪಕರಿದ್ದಾರೆ. ಆದರೆ ಚಿತ್ರ ಬಿಡುಗಡೆಗೂ ಮುನ್ನ ನಿರ್ದೇಶಕರ ಕಾರ್ಯವನ್ನು ಮೆಚ್ಚಿ, ಕಾರನ್ನು ಉಡುಗೊರೆ ನೀಡಿದ್ದಾರೆ ನಿರ್ಮಾಪಕ ರವಿರಾಜ್.
ಬಾಲಿವುಡ್‌ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ಈ ಚಿತ್ರದ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿಯಾಗಿ ರಾಧಿಕಾ ಕುಮಾರಸ್ವಾಮಿ ಅಭಿನಯಿಸಿದ್ದಾರೆ. ಹೆಸರಾಂತ ನಟ ಬಾಬಿ ಸಿಂಹ ಸಹ ಈಗ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ರಾವ್ ರಮೇಶ್, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ವಿನಯಾಪ್ರಸಾದ್ ಮುಂತಾದವರು ಈ ಚಿತ್ರದಲ್ಲಿದ್ದಾರೆ.
ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.