‘ಯುದ್ಧಕಾಂಡ’ ಶುರು ಮಾಡಿದ ಅಜೇಯ್ ರಾವ್
Team Udayavani, Nov 28, 2022, 11:20 AM IST
“ಕೃಷ್ಣಲೀಲಾ’ ಸಿನಿಮಾದ ನಂತರ ನಟ ಅಜೇಯ್ ರಾವ್ ತಮ್ಮ “ಅಜೇಯ್ ರಾವ್ ಪ್ರೊಡಕ್ಷನ್ಸ್’ ಬ್ಯಾನರ್‌ನಲ್ಲಿ ಹೊಸ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ತಮ್ಮ ಬ್ಯಾನರ್‌ನಲ್ಲಿ ಎರಡನೇ ಸಿನಿಮಾ ನಿರ್ಮಿಸುವ ಘೋಷಣೆ ಮಾಡಿದ್ದ ಅಜೇಯ್ ರಾವ್, ಇದೀಗ ತಮ್ಮ ಹೊಸ ಸಿನಿಮಾದ ಟೈಟಲ್ ರಿವೀಲ್ ಮಾಡಿದ್ದಾರೆ. ಅಂದಹಾಗೆ, ಅಜೇಯ್ ರಾವ್ ನಿರ್ಮಿಸಿ ಜೊತೆಗೆ ನಾಯಕ ನಟನಾಗಿ ಅಭಿನಯಿಸುತ್ತಿರುವ ಹೊಸ ಸಿನಿಮಾಕ್ಕೆ “ಯುದ್ಧಕಾಂಡ’ ಎಂದು ಟೈಟಲ್ ಇಡಲಾಗಿದೆ.
ಇತ್ತೀಚೆಗಷ್ಟೇ ನಡೆದ ಸಮಾರಂಭದಲ್ಲಿ ನಟ ಅಜೇಯ್ ರಾವ್ ಮತ್ತು ಚಿತ್ರತಂಡ ತಮ್ಮ ಸಿನಿಮಾದ ಹೊಸ ಟೈಟಲ್ ಅನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಿತು. ಈ ಸಿನಿಮಾದಲ್ಲಿ ನಟ ಅಜೇಯ್ ರಾವ್ ವಕೀಲರಾಗಿ ಕಾಣಿಸಿಕೊಳ್ಳುತ್ತಿ ರುವುದರಿಂದ, ಈ ಸಿನಿಮಾದ ಟೈಟಲ್ ಅನ್ನು ವಕೀಲರಿಂದಲೇ ಬಿಡುಗಡೆ ಮಾಡಿಸಿದ್ದು ವಿಶೇಷವಾಗಿತ್ತು.
ಇದೇ ವೇಳೆ ಮಾತನಾಡಿದ ನಟ ಅಜೇಯ್ ರಾವ್, “”ಯುದ್ಧಕಾಂಡ’ ಎಂದಾಗ ಎಲ್ಲರಿಗೂ ಲೆಜೆಂಡರಿ ರವಿಚಂದ್ರನ್ ಅವರ ಸಿನಿಮಾ ನೆನಪಾಗುತ್ತದೆ. ಆ ಸಿನಿಮಾದ ನಿರ್ದೇಶಕರಾದ ಕೆ. ವಿ ರಾಜು ಅವರ ಜೊತೆ ನಾನು ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದೇನೆ. ಈ ಸಿನಿಮಾ ಲಾಂಚ್ ಮಾಡೋವಾಗ ಮೊದಲು ರವಿ ಚಂದ್ರನ್ ಅವರನ್ನು ಭೇಟಿ ಮಾಡಿ ಆಶೀರ್ವಾದ ತೆಗೆದುಕೊಂಡು ಬಂದೆ. ಹಾಗಂತಟ, ಆಗ ಬಂದ “ಯುದ್ಧಕಾಂಡ’ಕ್ಕೂ ಈಗ ಬರುತ್ತಿರುವ “ಯುದ್ಧಕಾಂಡ’ ಸಿನಿಮಾಕ್ಕೂ ಯಾವುದೇ ಸಂಬಂಧ ಇಲ್ಲ. ಇದು ಯಾವುದೇ ಸಿನಿಮಾದ ರಿಮೇಕ್ ಕೂಡ ಅಲ್ಲ’ ಎಂದರು.
“ಚಿತ್ರರಂಗಕ್ಕೆ ಬಂದು ಸುಮಾರು 20 ವರ್ಷವಾಯ್ತು. ನಟನಾಗಿ ಗೆಲುವು-ಸೋಲು ಎರಡನ್ನು ನೋಡಿದ್ದೇನೆ. ಕೇವಲ ನಟನಾಗಿ ಉಳಿಯದೇ ಸಿನಿಮಾದ ಎಲ್ಲಾ ಕ್ಷೇತ್ರದಲ್ಲಿ ಪ್ರಯೋಗ ಮಾಡಬೇಕು ಎಂದುಕೊಂಡು ಬೆಂಗಳೂರಿಗೆ ಬಂದವನು ನಾನು. ಹೀರೋ, ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿಯೂ ಮಾಡಿದ್ದೇನೆ. “ಕೃಷ್ಣ ಲೀಲಾ’ ಸಿನಿಮಾ ಮೂಲಕ ನಿರ್ಮಾಪಕನೂ ಆಗಿದ್ದೇನೆ. ಇದೀಗ ಏಳು ವರ್ಷದ ನಂತರ ಎರಡನೇ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದೇನೆ’ ಎಂದು ಚಿತ್ರರಂಗದ ಜರ್ನಿಯನ್ನು ಮೆಲುಕು ಹಾಕಿದರು ಅಜೇಯ್ ರಾವ್.
ಈ ಹಿಂದೆ “ಕಟಿಂಗ್ ಶಾಪ್’ ಸಿನಿಮಾವನ್ನು ನಿರ್ದೇಶಿಸಿದ್ದ ಪವನ್ ಭಟ್ “ಯುದ್ಧಕಾಂಡ’ ಸಿನಿಮಾಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. “ಶ್ರೀಕೃಷ್ಣ ಆರ್ಟ್ಸ್ ಅಂಡ್ ಕ್ರಿಯೇಷನ್ಸ್’ ಮತ್ತು “ಅಜಯ್ ರಾವ್ ಪ್ರೊಡಕ್ಷನ್ಸ್’ ನಡಿ ನಿರ್ಮಾಣವಾಗುತ್ತಿರುವ “ಯುದ್ಧಕಾಂಡ’ ಸಿನಿಮಾಕ್ಕೆ ಕಾರ್ತಿಕ್ ಶರ್ಮಾ ಛಾಯಾಗ್ರಹಣ, ಕೆ. ಬಿ. ಪ್ರವೀಣ್ ಸಂಗೀತ ನಿರ್ದೇಶನವಿದೆ.
ಸದ್ಯ ಸಿನಿಮಾದ ಟೈಟಲ್ ಬಿಡುಗಡೆ ಮಾಡಿರುವ ಚಿತ್ರತಂಡ, ಇದೇ ಡಿಸೆಂಬರ್ ನಿಂದ ಚಿತ್ರೀಕರಣ ಆರಂಭಿಸುವ ಯೋಜನೆಯಲ್ಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.