‘ಅಲೆಗಳಿಲ್ಲದ ಸಾಗರ…’ ಹೊಸಬರ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ
Team Udayavani, Nov 3, 2022, 1:21 PM IST
ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ “ಅಲೆಗಳಿಲ್ಲದ ಸಾಗರ’ ಚಿತ್ರದ ಮುಹೂರ್ತ ಇತ್ತೀಚೆಗೆ ನೆರೆವೇರಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ. ಮ ಹರೀಶ್ ಸೇರಿದಂತೆ ಚಿತ್ರರಂಗದ ಅನೇಕರು ಮುಹೂರ್ತ ಸಮಾರಂಭದಲ್ಲಿ ಹಾಜರಿದ್ದು, “ಅಲೆಗಳಿಲ್ಲದ ಸಾಗರ’ ಚಿತ್ರದ ಚಿತ್ರೀಕರಣಕ್ಕೆ ಚಾಲನೆ ನೀಡಿದರು.
“ಸಾಗರ್ ಸಿನಿ ಕ್ರಿಯೇಶನ್ಸ್’ ಬ್ಯಾನರ್‌ನಲ್ಲಿ ಕರುಣಾಕರ್ ರಾವಣ್ ಮತ್ತು ನಿರಂಜನ ಮೂರ್ತಿ ಟಿ. ಎಸ್ ಜಂಟಿಯಾಗಿ ಬಂಡವಾಳ ಹೂಡುತ್ತಿದ್ದಾರೆ. ನವ ಪ್ರತಿಭೆ ಸಾಗರ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ನವ ನಟ ಮೋಹನ್ “ಅಲೆಗಳಿಲ್ಲದ ಸಾಗರ’ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಸಿನಿಮಾದಲ್ಲಿ ಮೋಹನ್ ಕಂಪೆನಿಯೊಂದರ ಎಂ. ಡಿ ಪಾತ್ರದಲ್ಲಿ ಕಾಣಿಸಿಕೊಂಡರೆ, ಶಾನ್ವಿ ಗೌಡ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಸಾಗರ್, ಅಶ್ವಿನಿ ಶೆಟ್ಟಿ, ರಂಗ ಯಾದವ್ ಮಂಡ್ಯ ಮತ್ತಿತರರು “ಅಲೆಗಳಿಲ್ಲದ ಸಾಗರ’ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
“ಗಂಡ-ಹೆಂಡತಿ ನಡುವಿನ ಬಾಂಧವ್ಯ ಹಾಗೂ ಸಮಾಜದಲ್ಲಿ ನಡೆಯುತ್ತಿರುವ ಒಂದಷ್ಟು ನೈಜ ಘಟನೆಗಳನ್ನು ಇಟ್ಟುಕೊಂಡು ಈ ಸಿನಿಮಾವನ್ನು ತೆರೆಗೆ ತರಲಾಗುತ್ತಿದೆ. ಇವೆಲ್ಲವನ್ನೂ ಸಸ್ಪೆನ್ಸ್ – ಥ್ರಿಲ್ಲರ್ ಶೈಲಿಯಲ್ಲಿ ತೆರೆಗೆ ತರಲಾಗುತ್ತಿದೆ. ಐದು ಪ್ರಮುಖ ಪಾತ್ರಗಳ ಸುತ್ತ ಇಡೀ ಸಿನಿಮಾದ ಕಥೆ ಸಾಗುತ್ತದೆ’ ಎಂಬುದು ಚಿತ್ರತಂಡದ ಮಾತು.
ಸಿನಿಮಾದ ನಾಲ್ಕು ಹಾಡುಗಳಿಗೆ ಸಂಜೀವ್ ರಾವ್ ಸಾಹಿತ್ಯ-ಸಂಗೀತ ಒದಗಿಸುತ್ತಿದ್ದಾರೆ. ಸಿನಿಮಾಕ್ಕೆ ರಾಘು ಎ. ರೂಗಿ ಛಾಯಾಗ್ರಹಣ, ನವೀನ್ ಸಂಕಲನವಿದೆ. ಚಿತ್ರದ ಹಾಡುಗಳಿಗೆ ಸ್ಟಾರ್ ನಾಗಿ ನೃತ್ಯ ಸಂಯೋಜನೆ ಮತ್ತು ಅಶೋಕ್ ಸಾಹಸ ಸಂಯೋಜನೆಯಿದೆ.
ಮೊದಲ ಹಂತದಲ್ಲಿ ನೆಲಮಂಗಲ ಸುತ್ತಮುತ್ತ “ಅಲೆಗಳಿಲ್ಲದ ಸಾಗರ’ ಚಿತ್ರದ ಚಿತ್ರೀಕರಣ ನಡೆಸಲಿರುವ ಚಿತ್ರತಂಡ, ಹಾಡುಗಳ ಚಿತ್ರೀಕರಣಕ್ಕೆ ವಿದೇಶಕ್ಕೆ ಹೋಗುವ ಯೋಚನೆಯಲ್ಲಿದೆ. ಕನ್ನಡದ ಜೊತೆಗೆ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಯಲ್ಲೂ “ಅಲೆಗಳಿಲ್ಲದ ಸಾಗರ’ ಸಿನಿಮಾವನ್ನು ತೆರೆಗೆ ತರುವ ಯೋಜನೆಯಲ್ಲಿದೆ ಚಿತ್ರತಂಡ.
ಸದ್ಯ ಮುಹೂರ್ತವನ್ನು ಆಚರಿಸಿಕೊಂಡು ಚಿತ್ರೀಕರಣಕ್ಕೆ “ಅಲೆಗಳಿಲ್ಲದ ಸಾಗರ’ ಚಿತ್ರ, ಎಲ್ಲ ಅಂದುಕೊಂಡಂತೆ ನಡೆದರೆ ಮುಂದಿನ ವರ್ಷದ ಮಧ್ಯಭಾಗದಲ್ಲಿ ತೆರೆಗೆ ಬರುವ ಸಾಧ್ಯತೆಯಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.