ಪ್ರೇಮಿಗಳ ದಿನಕ್ಕೆ “ಅಮರ್’ ಟೀಸರ್
Team Udayavani, Jan 23, 2019, 5:48 AM IST
ರೆಬೆಲ್‌ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ನಾಯಕರಾಗಿ ನಟಿಸುತ್ತಿರುವ “ಅಮರ್’ ಚಿತ್ರದ ಮೊದಲ ಟೀಸರ್ ಪ್ರೇಮಿಗಳ ದಿನ (ಫೆ. 14)ದಂದು ಬಿಡುಗಡೆಯಾಗಲಿದೆ. “ಅಮರ್’ ಚಿತ್ರದ ಚಿತ್ರೀಕರಣವನ್ನು ಬೆಂಗಳೂರು, ಮೈಸೂರು, ಮಡಿಕೇರಿ, ಮಂಗಳೂರು, ಮಣಿಪಾಲ, ಊಟಿ, ಕೇರಳ, ಕೊಯಮತ್ತೂರು, ಸ್ವಿಟ್ಜರ್‌ಲ್ಯಾಂಡ್ ಮೊದಲಾದ ಕಡೆಗಳಲ್ಲಿ ಚಿತ್ರೀಕರಿಸಲಾಗಿದೆ.
ಫೆಬ್ರವರಿ ರಡನೇ ವಾರದಿಂದ ಬಾಕಿಯಿರುವ ಚಿತ್ರೀಕರಣವನ್ನು ಸಿಂಗಾಪುರದಲ್ಲಿ ನಡೆಸಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ. ಸಂದೇಶ್ ಕಂಬೈನ್ಸ್ ಮೂಲಕ ಸಂದೇಶ್ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ನಾಗಶೇಖರ್ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆಯಿದ್ದು, ಸತ್ಯ ಹೆಗಡೆ ಛಾಯಾಗ್ರಹಣ, ಜೊ.ನಿ ಹರ್ಷ ಸಂಕಲನ ಕಾರ್ಯವಿದೆ.
ಚಿತ್ರದ ಹಾಡುಗಳಿಗೆ ಧನಂಜಯ್, ಇಮ್ರಾನ್, ಕಲೈ ನೃತ್ಯ ಸಂಯೋಜನೆ ಮಾಡುತ್ತಿದ್ದು, ರವಿವರ್ಮ, ಥ್ರಿಲ್ಲರ್ ಮಂಜು, ಅಂಬು ಅರಿವು ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ಅಭಿಷೇಕ್‌ಗೆ ನಾಯಕಿಯಾಗಿ ತಾನ್ಯಾ ಹೋಪ್ ಜೋಡಿಯಾಗಿದ್ದಾರೆ. ಉಳಿದಂತೆ ಸುಧಾರಾಣಿ, ದೇವರಾಜ್, ದೀಪಕ್ ಶೆಟ್ಟಿ, ಅರುಣ್ ಸಾಗರ್, ಚಿಕ್ಕಣ್ಣ, ಸಾಧುಕೋಕಿಲ, ನಿರೂಪ್ ಭಂಡಾರಿ ಮುಂತಾದ ಕಲಾವಿದರ ತಾರಾಗಣವಿದೆ.ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಚಿತ್ರದಲ್ಲಿ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.