ಅಂಬರೀಷ್ ಪತ್ರ ಬರದೌರೆ!
Team Udayavani, Dec 9, 2017, 3:54 PM IST
ಅದೆಷ್ಟು ದಿನಗಳಾಗಿತ್ತೋ, ಅಂಬರೀಷ್ ಅವರು ಪತ್ರ ಬರೆದು? ಆದರೆ, ಈಗ ಅವರು ಒಂದು ಪತ್ರ ಬರೆದಿದ್ದಾರೆ. ಈ ಬಾರಿ ಅವರು ತಮ್ಮ ಅಭಿಮಾನಿಗಳಿಗೆ ಒಂದು ಪತ್ರ ಬರೆದಿದ್ದಾರೆ. ಇಷ್ಟಕ್ಕೂ ಪತ್ರ ಬರೆದಿದ್ದಕ್ಕೆ ಕಾರಣವೇನು ಗೊತ್ತಾ? “ಅಂಬಿ ನಿಂಗೆ ವಯಸ್ಸಾಯ್ತೋ’ ಎಂಬ ಅವರ ಹೊಸ ಚಿತ್ರ. ಅಂಬರೀಷ್ ಸದ್ಯದಲ್ಲೇ “ಅಂಬಿ ನಿಂಗೆ ವಯಸ್ಸಾಯ್ತೋ’ ಎಂಬ ತಮ್ಮ ಮಹತ್ವಾಕಾಂಕ್ಷೆಯ ಚಿತ್ರದಲ್ಲಿ ನಟಿಸುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ.
ಈ ಸಂಬಂಧ ಅವರು ತಮ್ಮ ಅಭಿಮಾನಿಗಳಿಗೆ ಒಂದು ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಒಂದೊಳ್ಳೆಯ ಪಾತ್ರವನ್ನು ಮಾಡುವ ತಮ್ಮಲ್ಲಿದ್ದ ಚಡಪಡಿಕೆಯ ಕುರಿತು ಬೆಳಕು ಚೆಲ್ಲಿದ್ದಾರೆ. ವಯಸ್ಸಿಗೊಪ್ಪುವ ಪರಿಪೂರ್ಣವಾದ ಪಾತ್ರಗಳನ್ನು ಮಾಡುವ ಚಡಪಡಿಕೆ ಇರುವುದರಿಂದಲೇ, “ಅಂಬಿ ನಿಂಗೆ ವಯಸ್ಸಾಯ್ತೋ’ದಂತಹ ಚಿತ್ರದಲ್ಲಿ ನಟಿಸಿರುವುದಾಗಿ ಹೇಳಿಕೊಂಡಿದ್ದಾರೆ. ಅಂಬರೀಷ್ ತಮ್ಮ ಪತ್ರದಲ್ಲಿ ಇನ್ನೂ ಏನು ಬರೆದಿದ್ದಾರೆ ಎಂಬ ಕುತೂಹಲವಿದ್ದರೆ, ಮುಂದೆ ಓದಿ …
ಎಲ್ರಿಗೂ ನಮಸ್ಕಾರ,
ಇದೇನಪ್ಪಾ, ಅಂಬರೀಷ್ ಅವ್ರು ನಮಸ್ಕಾರ ಗಿಮಸ್ಕಾರ ಅಂತ ಹೇಳ್ತ ಇದ್ದಾರೆ, ಅವ್ರಿಗೆ ವಯಸ್ಸಾಯ್ತು ಅಂತ ಅಂದ್ಕೋಬೇಡಿ. ತುಂಬಾ ವರ್ಷಗಳ ನಂತರ ನಿಮ್ಮನ್ನೆಲ್ಲಾ ಈ ಪತ್ರದ ಮುಖಾಂತರ ಮಾತಾಡ್ಬೇಕು ಅನ್ನುಸ್ತು. ಅದಕ್ಕೆ ಒಂದು ಕಾರಣಾನೂ ಇದೆ. ಹುಟ್ಟಿದ್ದು ಮಂಡ್ಯ, ಕುಡಿದಿದ್ದು ಕಾವೇರಿ ನೀರು ಅನ್ನೋ ಹಾಗೇ ಹುಟ್ಟಿದಾಗ ಅಮರ್‌ನಾಥ್ ಆಗಿದ್ದ ನು ಬೆಳಿತಾ ಬೆಳಿತಾ ನಿಮ್ಮ ಅಂಬರೀಷ್ ಆದೆ.
ಪುಟ್ಟಣ್ಣನ ಜಲೀಲನ ಪಾತ್ರ ಮಾಡ್ತಾ ಮಾಡ್ತಾ ನನಗೇ ಗೊತ್ತಿಲ್ಲದ ನನ್ನೊಳಗೆ ಒಬ್ಬ ಪರಿಪೂರ್ಣ ಕಲಾವಿದ ಬೆಳಿತಾ ಹೋದ. ಹಿಂದಿನ 45 ವರ್ಷಗಳ ಕಾಲ ನೀವು ನನ್ನ ಮೇಲಿಟ್ಟ ಪ್ರೀತಿ, ಅಭಿಮಾನದಿಂದ ನೀವು ನನಗೆ ಕೊಟ್ಟ ಬಿರುದು “ರೆಬಲ್ ಸ್ಟಾರ್’. ಇಷ್ಟ ಪಟ್ಟ ಹುಡುಗಿ ಜೊತೆ ಮುಂದೆ ಮದುವೆ ಆಯ್ತು. ಮುದ್ದಾದ ಮಗ ಕೂಡ ಹುಟ್ಟಿದ. ಜೀವನ ನಿಧಾನವಾಗಿ ರಾಜಕೀಯದ ಕಡೆಗೆ ಹರೀತು. ಜನ ಸೇವೆಯನ್ನ ಮಾಡ್ತ ಬಂದೆ.
ಸಿನಿಮಾ ನಟನೆಯನ್ನೇನು ಬಿಟ್ಟಿರಲಿಲ್ಲ. ಚಿತ್ರರಂಗದ ಆತ್ಮೀಯರು, ಹಿತೈಶಿಗಳು, ಸ್ನೇಹಿತರು ಒತ್ತಾಯಕ್ಕೆ ಪ್ರೀತಿಗೆ ಸೋತು ಅಲ್ಲೊಂದು ಇಲ್ಲೊಂದು ಪಾತ್ರಗಳನ್ನ ಮಾಡ್ತಾ ಇದ್ದೆ. ಸಂತೋಷದ ಜೀವನ ಸಾಗ್ತ ಬಂತು. ಯಾವಾಗ ಅನಾರೋಗ್ಯದಿಂದ ಆಸ್ಪತ್ರೇಲಿ ಇದ್ದೆ, ಆಗ ನನ್ನೊಳಗಿನ ಕಲೆ ಹಾಗೇ ಇತ್ತು. ಮಾತನಾಡಲು ಶುರು ಮಾಡಿದೆ. ಆಗ ಹುಟ್ಟಿಕೊಂಡಿದ್ದೇ ಈ ಚಡಪಡಿಕೆ.
ಒಳ್ಳೆ ಪಾತ್ರಗಳನ್ನ ಮಾಡುವ ಚಡಪಡಿಕೆ. ವಯಸ್ಸಿಗೊಪ್ಪುವ ಪರಿಪೂರ್ಣವಾದ ಪಾತ್ರಗಳನ್ನು ಮಾಡುವ ಚಡಪಡಿಕೆ. ಈ ಹಂತದಲ್ಲಿ ಜೊತೆಯಾದವನು ಮಗನಂತಹ ಗೆಳೆಯ ಸುದೀಪ. ಇನ್ನೇನು ಇಬ್ಬರೂ ಸೇರಿಕೊಂಡು ನಿಮ್ಮ ಇಡೀ ಕುಟುಂಬದ ಜೊತೆ ಕುಳಿತು ನೋಡುವ ಚಿತ್ರ ಮಾಡುವಿದಾಗಿ ನಿಶ್ಚಯ ಮಾಡಿದ್ದೀವಿ. ಇನ್ನೇನು ತಡ ಇಲ್ಲ, ಆದಷ್ಟು ಬೇಗ …
ಇಂತಿ ನಿಮ್ಮ ಪ್ರೀತಿಯ
ಅಂಬರೀಷ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.