ಮಾರ್ಚ್‌ 3ಕ್ಕೆ ಅಂಬಿ ನಮನ


Team Udayavani, Jan 29, 2019, 5:43 AM IST

ambarish-15.jpg

ಅಂಬರೀಶ್‌ ಅಗಲಿ ಎರಡು ತಿಂಗಳು ಕಳೆದಿದೆ. ಅವರ ಅಭಿಮಾನಿಗಳಲ್ಲಿ ಇನ್ನೂ ಆ ನೆನಪು ಮಾಸಿಲ್ಲ. ಹಲವು ಕಡೆಗಳಲ್ಲಿ ಅಂಬರೀಶ್‌ ಅವರ ಅಭಿಮಾನಿಗಳು ತಮ್ಮ ಪ್ರೀತಿಯ ನಾಯಕನಿಗಾಗಿ ಒಂದಷ್ಟು ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಅವರನ್ನು ನೆನಪಿಸಿಕೊಂಡಿದ್ದಾರೆ. ಈಗ ಬಸವನಗುಡಿಯ ನ್ಯಾಷನಲ್‌ ಕಾಲೇಜು ಆವರಣದಲ್ಲೂ ಸಹ ಅವರನ್ನು ನೆನಪಿಸಿಕೊಳ್ಳುವಂತಹ ದೊಡ್ಡ ಕಾರ್ಯಕ್ರಮ ನಡೆಸಲು ತಯಾರಿ ನಡೆಸಲಾಗುತ್ತಿದೆ.

ಹೌದು, ಅಂಬರೀಶ್‌ ಅವರ ಸ್ಮರಣಾರ್ಥ ಮಾರ್ಚ್‌ 3ರ ಭಾನುವಾರ ಸಂಜೆ 5.30ಕ್ಕೆ ನ್ಯಾಷನಲ್‌ ಕಾಲೇಜ್‌ ಮೈದಾನದಲ್ಲಿ “ಅಂಬಿ ನಮನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಅಂಬರೀಶ್‌ ಅಭಿನಯದ ಆಯ್ದ ಜನಪ್ರಿಯ ಗೀತೆಗಳನ್ನು ಹಿರಿಯ ಗಾಯಕ ಎಸ್‌.ಪಿ ಬಾಲಸುಬ್ರಮಣ್ಯಂ ನೇತೃತ್ವದಲ್ಲಿ ಗಾಯಕರು ಪ್ರಸ್ತುತಪಡಿಸಲಿದ್ದಾರೆ. ಸಂಗೀತ ನಿರ್ದೇಶಕ ಹಂಸಲೇಖ, ಗುರುಕಿರಣ್‌, ಮಂಜುಳಾ ಗುರುರಾಜ್‌, ರಾಜೇಶ್‌ ಕೃಷ್ಣನ್‌, ವಿಜಯ್‌ ಪ್ರಕಾಶ್‌ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಹಾಜರಿರಲಿದ್ದು, ಅಂಬರೀಶ್‌ ಅಭಿನಯದ ಆಯ್ದ ಗೀತೆಗಳಿಗೆ ಯುವ ಕಲಾವಿದರು ನೃತ್ಯ ಪ್ರದರ್ಶನವನ್ನು ಸಹ ನೀಡಲಿದ್ದಾರೆ.

ಸದ್ಯ ಈ ಕಾರ್ಯಕ್ರಮದ ರೂಪುರೇಷೆ ಮತ್ತು ತಯಾರಿಗೆ ಚಾಲನೆ ದೊರೆತಿದ್ದು, ಕನ್ನಡ ಚಿತ್ರರಂಗದಲ್ಲಿ ಇದುವರೆಗೂ ಮೂಡಿಬಂದಿರದ ರೀತಿಯಲ್ಲಿ ಅದ್ಧೂರಿಯಾಗಿ “ಅಂಬಿ ನಮನ’ ಕಾರ್ಯಕ್ರಮವನ್ನು ಆಯೋಜಿಸಲು “ಸಮರ್ಥನಂ ಅಂಗವಿಕಲರ ಸಂಸ್ಥೆ’ ಸಿದ್ಧತೆ ಮಾಡಿಕೊಳ್ಳುತ್ತಿದೆ. ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಮತ್ತು ಹಿರಿಯ ನಟ ಶಿವರಾಮ್‌ ಕಾರ್ಯಕ್ರಮದ ನೇತೃತ್ವವನ್ನು ವಹಿಸಿಕೊಂಡಿದ್ದು, ಕಾರ್ಯಕ್ರಮದಿಂದ ಸಂಗ್ರಹವಾಗುವ ಹಣವನ್ನು ಅಂಗವಿಕಲರ ಶ್ರೇಯೋಭಿವೃದ್ದಿಗೆ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.

ಈ ಕುರಿತಂತೆ ವಿವರ ಕೊಡುವ ಕಾರ್ಯಕ್ರಮದ ನೇತೃತ್ವ ವಹಿಸಿಕೊಂಡಿರುವ ಹಿರಿಯ ನಟ ಶಿವರಾಮ್‌, “ಮೊದಲಿನಿಂದಲೂ ಅಂಬರೀಶ್‌ ಅವರು ಸಮರ್ಥನಂ ಸಂಸ್ಥೆಯ ಅನೇಕ ಕಾರ್ಯಗಳಲ್ಲಿ ನೆರವಾಗುತ್ತಿದ್ದರು. ಹಾಗಾಗಿ ಈಗ ಅವರ ಹೆಸರಿನಲ್ಲಿ “ಅಂಬಿ ನಮನ’ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಅಂಬರೀಶ್‌ ಅವರ ಕುಟುಂಬ ವರ್ಗ, ಅವರ ಅಭಿಮಾನಿಗಳು, ಕನ್ನಡ ಚಿತ್ರರಂಗದ ಅನೇಕ ಕಲಾವಿದರು, ತಂತ್ರಜ್ಞರು ಭಾಗವಹಿಸಲಿದ್ದಾರೆ.

ಮೊದಲು ಈ ಕಾರ್ಯಕ್ರಮವನ್ನು ಬೇರೆ ಕಡೆ ಮಾಡುವ ಯೋಜನೆಯಿತ್ತು. ಆದರೆ ಹೆಚ್ಚು ಜನರಿಗೆ ತಲುಪಬೇಕೆಂಬ ಉದ್ದೇಶದಿಂದ ಅಂತಿಮವಾಗಿ ಇದನ್ನು ಬೆಂಗಳೂರಿನಲ್ಲೇ ನಡೆಸಲು ಯೋಜಿಸಲಾಗಿದೆ’ ಎಂಬ ಮಾಹಿತಿ ಕೊಡುತ್ತಾರೆ ಅವರು. ಅಂದಹಾಗೆ, “ಅಂಬಿ ನಮನ’ ಕಾರ್ಯಕ್ರಮದ ಸ್ವರೂಪ ಕುರಿತಂತೆ ಇಷ್ಟರಲ್ಲೇ ಇನ್ನಷ್ಟು ಮಾಹಿತಿ ನೀಡುವುದಾಗಿ ಹೇಳುತ್ತಾರೆ ಅವರು.

ಟಾಪ್ ನ್ಯೂಸ್

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagavalli Bangale Movie

Nagavalli Bangale Movie: ಸೆನ್ಸಾರ್‌ ಪಾಸಾದ ನಾಗವಲ್ಲಿ

shreyas manju’s Vishnupriya movie releasing on Feb 21

ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ

31 days kannada movie

Kannada Movie: ನಿರಂಜನ್‌ ಶೆಟ್ಟಿಯ ʼ31 ಡೇಸ್‌ʼ ಚಿತ್ರ

kuladalli keelyavudo movie

Sandalwood: ಫಸ್ಟ್‌ಲುಕ್‌ನಲ್ಲಿ”ಕುಲದಲ್ಲಿ ಕೀಳ್ಯಾವುದೋ’

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arrest-woman

Mulki: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.