![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jul 10, 2023, 2:52 PM IST
ಶುಭಾ ಪೂಂಜಾ,ರಜಿನಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ “ಅಂಬುಜ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಶ್ರೀನಿ ಹನುಮಂತರಾಜು ನಿರ್ದೇಶನದ ಈ ಚಿತ್ರವನ್ನು ಕಾಶಿನಾಥ್ ನಿರ್ಮಿಸಿದ್ದಾರೆ. ಚಿತ್ರದಲ್ಲಿ ಹೊಸ ವಿಷಯ ಹೇಳಿರುವುದರಿಂದ ಪ್ರೇಕ್ಷಕ ಇಷ್ಟಪಡುತ್ತಾನೆ ಎಂಬ ನಂಬಿಕೆ ಚಿತ್ರತಂಡದ್ದು.
ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಶ್ರೀನಿ, “ನಾನು ಶುಭಾಪೂಂಜಾ ಈ ಮೊದಲು ಒಂದು ಸಿನಿಮಾ ಮಾಡಿದ್ದೆವು. ಆ ಚಿತ್ರ ಯಶಸ್ಸು ಖಂಡಿತ್ತು. ಹಾಗೇ ಎರಡನೇ ಚಿತ್ರದ ಹುಡುಕಾಟದಲ್ಲಿದ್ದಾಗ ನಿರ್ಮಾಪಕ ಕಾಶಿನಾಥ್ ಸಿಕ್ಕರು. ನಾನು ಗ್ಯಾರಂಟಿ ನೀಡುತ್ತೇನೆ. ಈ ಕಥೆ ನೀವೆಲ್ಲೂ ನೋಡಿರಲ್ಲ, ಕೇಳಿರಲ್ಲ, ಖಂಡಿತಾ ಚಿತ್ರ ನೋಡುವಾಗ ಬೆಚ್ಚಿ ಬೀಳುತ್ತೀರಿ.ನಾವು ಸುಮ್ಮನೇ ಹೇಳುತ್ತಿಲ್ಲ, ಭರವಸೆ ನೀಡುತ್ತಿದ್ದೇವೆ. ಚಿತ್ರ ನೋಡಿದ ಮೇಲೆ ನೀವೇ ಶಾಕ್ ಆಗ್ತೀರಿ. ಈಗಾಗಲೇ ಸಿನಿಮಾವನ್ನು ಕೆಲವರಿಗೆ ತೋರಿಸಿದ್ದೇವೆ. ಅವರಿಂದ ಮೆಚ್ಚುಗೆ ವ್ಯಕ್ತವಾಗುವ ಜೊತೆಗೆ ಚಿತ್ರದ ಕಥಾಹಂದರದ ಬಗ್ಗೆ ಚರ್ಚೆಯಾಗಿದೆ’ ಎಂದು ಸಿನಿಮಾ ಬಗ್ಗೆ ಹೇಳಿಕೊಂಡರು.
ನಿರ್ಮಾಪಕ ಕಾಶಿನಾಥ್ ಡಿ ಮಡಿವಾಳರ್ ಮಾತನಾಡಿ, “ನಾನು ಕಥೆ ಬರೆದಾಗ ಇಷ್ಟೊಂದು ಚೆನ್ನಾಗಿ ಬರುತ್ತೆ ಅಂತ ಗೊತ್ತಿರಲಿಲ್ಲ. ಎಲ್ಲರೂ ಶ್ರಮ ಹಾಕಿದ್ದಾರೆ. ರಜಿನಿ ಅವರು ಕಾಲು ನೋವಿದ್ದರೂ 25 ಕೆಜಿ ತೂಕದಷ್ಟು ಕಾಸ್ಟೂಮ್ ಹಾಕಿಕೊಂಡು ಡ್ಯಾನ್ಸ್ ಮಾಡಿದ್ದಾರೆ. ಶುಭಾ ಅವರು ಎತ್ತರದ ಬೆಟ್ಟ ಹತ್ತಿ ಹಾಡಿನ ಚಿತ್ರೀಕರಣ ಮಾಡಿದ್ದಾರೆ. ಈ ಸಿನಿಮಾಗಾಗಿ ಎಲ್ಲರೂ ಎಫರ್ಟ್ ಹಾಕಿದ್ದಾರೆ. ವಿಶೇಷವಾಗಿ ನಿರ್ದೇಶಕ ಶ್ರೀನಿ ಅವರು ತುಂಬಾ ಕಷ್ಟಪಟ್ಟು ಇಷ್ಟಪಟ್ಟು ಅಂಬುಜ ಚಿತ್ರವನ್ನು ಎಲ್ಲರಿಗೂ ಇಷ್ಟವಾಗುವಂತೆ ಮಾಡಿದ್ದಾರೆ’ ಎಂದರು.
ಶುಭಾ ಪೂಂಜಾ ಈ ಚಿತ್ರದಲ್ಲಿ ಕ್ರೈಮ್ ರಿಪೋರ್ಟರ್ ಆಗಿ ನಟಿಸಿದ್ದಾರೆ. “ನನ್ನ ಪಾತ್ರಕ್ಕೆ ತುಂಬಾ ಶೇಡ್ ಇದೆ. ನನಗೆ ತುಂಬಾ ಇಷ್ಟವಾದ ಪಾತ್ರ. ಸಿನಿಮಾನಾ ನಾನು ನೋಡಿದ್ದೇನೆ. ತುಂಬಾ ಅದ್ಭುತವಾಗಿ ಮೂಡಿಬಂದಿದೆ. ಶ್ರೀನಿ ಜೊತೆಗೆ ಇದು ಎರಡನೇ ಸಿನಿಮಾ. ಕ್ರೈಮ್, ಹಾರರ್, ಸಸ್ಪೆನ್ಸ್ , ಕಾಮಿಡಿ, ಸೆಂಟಿಮೆಂಟ್ ಎಲ್ಲ ಅಂಶವನ್ನು ಸಿನಿಮಾದಲ್ಲಿ ಇದೆ. ಫ್ಯಾಮಿಲಿ ಕುಳಿತು ನೋಡುವಂತಹ ಸಿನಿಮಾ’ ಎಂದು ಹೇಳಿಕೊಂಡರು.
“ನನ್ನ ಪಾತ್ರ ಎಲ್ಲರನ್ನೂ ಕಾಡುವಂತೆ ಮೂಡಿ ಬಂದಿದೆ. ನಾನು ಹೇಳ್ಳೋದಕ್ಕಿಂತ ಜನ ನೋಡಿ, ಮೆಚ್ಚಿಕೊಂಡರೆ ಖುಷಿಯಾಗುತ್ತದೆ’ ಎನ್ನುವುದು ರಜಿನಿ ಮಾತು. ಚಿತ್ರದಲ್ಲಿ ದೀಪಕ್ ಸುಬ್ರಮಣ್ಯ ನಾಯಕರಾಗಿ ನಟಿಸಿದ್ದಾರೆ. ಉಳಿದಂತೆ ಪದ್ಮಜಾ ರಾವ್, ಜಗದೀಶ್ ಹಲ್ಕುಡೆ, ಶರಣಯ್ಯ ,ಕಾಮಿಡಿ ಕಿಲಾಡಿ ಗೋವಿಂದೇಗೌಡ, ಸಂದೇಶ್ ಶೆಟ್ಟಿ, ನಿಶಾ ಹೆಗಡೆ, ಆಶಾರಾಣಿ, ಗುರುದೇವ ನಾಗಾರಾಜ, ಬೇಬಿ ಆಕಾಂಕ್ಷ ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರಕ್ಕೆ ಪ್ರಸನ್ನ ಕುಮಾರ್ ಎಂ.ಎಸ್ ಸಂಗೀತ ನಿರ್ದೇಶನ ಮಾಡಿದ್ದು, ಲಾಲಿ ಹಾಡನ್ನು ನಿರ್ಮಾಪಕ ಕಾಶಿನಾಥ್ ಮಗಳು, ಆಕಾಂಕ್ಷ ಹಾಡಿದ್ದಾರೆ. ಚಿತ್ರದ ಸಹ ನಿರ್ಮಾಣದಲ್ಲಿ ಲೋಕೇಶ್ ಭೈರವ, ಶಿವಪ್ರಕಾಶ್ ಕೈ ಜೋಡಿಸಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.