‘’ಅಮೃತ್ ಅಪಾರ್ಟ್‌ಮೆಂಟ್ಸ್’’ ಮೆಟ್ರೋ ಕತೆಗೆ ಸಿನಿಮಾ ಟಚ್
Team Udayavani, Nov 22, 2021, 12:31 PM IST
ತನ್ನ ಟೈಟಲ್ ಮತ್ತು ಸಬ್ಜೆಕ್ಟ್ ಮೂಲಕ ಸ್ಯಾಂಡಲ್‌ವುಡ್ ಸಿನಿಮಂದಿಯ ಗಮನ ಸೆಳೆಯುತ್ತಿರುವ “ಅಮೃತ್ ಅಪಾರ್ಟ್ ಮೆಂಟ್ಸ್’ ಚಿತ್ರ ತೆರೆಗೆ ಬರೋದಕ್ಕೆ ಸಿದ್ಧವಾಗಿದೆ. ಸದ್ಯ ಭರದಿಂದ ಚಿತ್ರದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, ಇದೇ ನ. 26ರಂದು ಚಿತ್ರವನ್ನು ತೆರೆಗೆ ತರುವ ಯೋಜನೆಯಲ್ಲಿದೆ.
ಇದೇ ವೇಳೆ ಮಾಧ್ಯಮಗಳ ಮುಂದೆ ಬಂದಿದ್ದ ಚಿತ್ರ, ಚಿತ್ರದ ವಿಶೇಷತೆಗಳ ಬಗ್ಗೆ ಒಂದಷ್ಟು ಮಾತನಾಡಿತು. ಮೊದಲಿಗೆ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಗುರುರಾಜ ಕುಲಕರ್ಣಿ, “ಹೆಸರೇ ಹೇಳುವಂತೆ, ಇದೊಂದು ಅಪಾರ್ಟ್ ಮೆಂಟ್ ಸಂಸ್ಕೃತಿ, ಅಲ್ಲಿರುವ ಜನರ ಜೀವನ, ಅವರ ಅಭಿರುಚಿ ಹೀಗೆ ಹತ್ತಾರು ವಿಷಯಗಳ ಸುತ್ತ ನಡೆಯುವಂಥ ಸಿನಿಮಾ. ಇಲ್ಲಿ ಇಂದಿನ ಯುವ ಜನಾಂಗದ ಜೀವನ ಶೈಲಿ, ಅವರ ಧಾವಂತ ಎಲ್ಲವನ್ನೂ ಸೆರೆಹಿಡಿಯುವ ಪ್ರಯತ್ನ ಮಾಡಿದ್ದೇವೆ. ಸಿನಿಮಾದಲ್ಲಿ ಚಿಂತೆನೆಗೆ ಹಚ್ಚಿಸುವ ಸಾಕಷ್ಟು ವಿಷಯಗಳಿಗೆ’ ಎನ್ನುತ್ತಾರೆ.
ಇನ್ನು “ಅಮೃತ್ ಅಪಾರ್ಟ್‌ಮೆಂಟ್ಸ್’ ಚಿತ್ರದಲ್ಲಿ ತಾರಕ್ ಪೊನ್ನಪ್ಪ ಮುಖ್ಯ ಭೂಮಿಕೆ ಯಲ್ಲಿ ಅಭಿನಯಿಸಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ತಾರಕ್, “ಬೆಂಗಳೂರಿನಂಥ ಮಹಾನಗರಗಳಲ್ಲಿ ನಮ್ಮ ನಡುವೆಯೇ ನಡೆಯುವಂಥ ಕಥೆ ನಮ್ಮ ಸಿನಿಮಾದಲ್ಲೂ ಇದೆ. ಸಿನಿಮಾ ನೋಡುವ ಪ್ರತಿಯೊಬ್ಬರಿಗೂ ಇದು ನಮ್ಮ ನಡುವೆಯೇ ನಡೆಯುವಂಥ ಕಥೆ ಎಂಬ ಭಾವನೆ ಮೂಡಿಸುವಂತಿದೆ. ಎಲ್ಲ ವರ್ಗದ ಆಡಿಯನ್ಸ್‌ಗೂ ಸಿನಿಮಾ ಇಷ್ಟವಾಗುವಂತಿದೆ’ ಎನ್ನುತ್ತಾರೆ.
ಇದನ್ನೂ ಓದಿ:ಪುನೀತ್ ರಾಜ್ ಕುಮಾರ್ ಫ್ಲೆಕ್ಸ್ ಹರಿದವನಿಗೆ ಹಿಗ್ಗಾಮುಗ್ಗಾ ಗೂಸಾ
ಚಿತ್ರದ ಮತ್ತೂಂದು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಬಾಲಾಜಿ ಮನೋಹರ್ ಕೂಡ “ಅಮೃತ್ ಅಪಾರ್ಟ್‌ಮೆಂಟ್ಸ್’ ಬಗ್ಗೆ ಭರವಸೆಯ ಮಾತುಗಳನ್ನಾಡುತ್ತಾರೆ. ಬಹುಕಾಲದ ನಂತರ ಇಂಥದ್ದೊಂದು ಪಾತ್ರದಲ್ಲಿ ಕಾಣಿಸಿಕೊಂಡಿರುವುದಕ್ಕೆ ಖುಷಿಯಾಗಿರುವ ಬಾಲಾಜಿ, ಸಿನಿಮಾದಲ್ಲಿ ತಮ್ಮ ಪಾತ್ರ ಪ್ರೇಕ್ಷಕರಿಗೆ ಇಷ್ಟವಾಗುವಂತಿದೆ ಎಂದರು.
ನಟಿ ಮಾನಸ ಜೋಶಿ ಅವರಿಗೆ ಬಹುಕಾಲದಿಂದ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕು ಎಂಬ ಕನಸನ್ನು “ಅಮೃತ್ ಅಪಾರ್ಟ್ ಮೆಂಟ್ಸ್’ ಚಿತ್ರ ನನಸಾಗಿಸಿದೆಯಂತೆ. ಚಿತ್ರದಲ್ಲಿ ರತ್ನಪ್ರಭಾ ಎಂಬ ಹೆಸರಿನ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ಮಾನಸ ಜೋಶಿ, ಖಡಕ್ ಅಧಿಕಾರಿಯಾಗಿ ತೆರೆಮೇಲೆ ಮಿಂಚಿದ್ದಾರಂತೆ. ಚಿತ್ರದ ಕಥೆ ಮತ್ತು ತನ್ನ ಪಾತ್ರ ಎರಡೂ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಅನ್ನೋದು ಮಾನಸ ಮಾತು.
ನಟಿ ಸೀತಾ ಕೋಟೆ, ಸಿತಾರಾ, ಸಂಕಲನಕಾರ ಬಿ.ಎಸ್ ಕೆಂಪರಾಜು ಸೇರಿದಂತೆ “ಅ ಮೃತ್ ಅಪಾ ರ್ಟ್ ಮೆಂಟ್ಸ್’ನ ಕಲಾವಿದರು ಮತ್ತು ತಂತ್ರಜ್ಞರು ಚಿತ್ರದ ಬಗ್ಗೆ ಒಂದಷ್ಟು ಮಾಹಿತಿಗಳನ್ನು, ಅನುಭವಗಳನ್ನು ಹಂಚಿಕೊಂಡರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.