ಅನಂತು-ನುಸ್ರತ್‌ ಪ್ರೇಮ್‌ ಕಹಾನಿ

Team Udayavani, Dec 28, 2018, 6:00 AM IST

49.jpg

ತಮ್ಮ ಹಿಂದಿನ ಎರಡು ಚಿತ್ರಗಳಲ್ಲಿ ಯಂಗ್‌ ಆ್ಯಂಡ್‌ ಎನರ್ಜಿಟಿಕ್‌ ಕಾಲೇಜ್‌ ಹುಡುಗನಾಗಿ ಕಾಣಿಸಿಕೊಂಡಿದ್ದ ವಿನಯ್‌ ರಾಜಕುಮಾರ್‌, ಈ ಚಿತ್ರದಲ್ಲಿ ಕೊಂಚ ಸೀರಿಯಸ್‌ ರೋಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದು “ಅನಂತು ವರ್ಸಸ್‌ ನುಸ್ರತ್‌’ ಚಿತ್ರದಲ್ಲಿ. ಚಿತ್ರ ಇಂದು ತೆರೆಕಾಣುತ್ತಿದೆ. ಅನಂತ ಕೃಷ್ಣ ಕ್ರಮಧಾರಿತ್ತಾಯ ಎನ್ನುವ ಹೆಸರಿನ ಸಂಪ್ರದಾಯಸ್ಥ ಬ್ರಾಹ್ಮಣ ಕುಟುಂಬದ ಹುಡುಗನಾಗಿ, ವಕೀಲನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಬಹುತೇಕ ಸನ್ನಿವೇಶಗಳು ಭಾವನಾತ್ಮಕವಾಗಿ ಸಾಗುವುದರಿಂದ, ವಿನಯ್‌ ತಮ್ಮ ಮೈಂಡ್‌ ಗೇಮ್‌ನಲ್ಲಿ ಪ್ರೇಕ್ಷಕರನ್ನು ಹಿಡಿದು ಕೂರಿಸುತ್ತಾರಂತೆ. 

“ಅನಂತು ವರ್ಸಸ್‌ ನುಸ್ರತ್‌’ ಚಿತ್ರದಲ್ಲಿ ನಾಯಕಿಯಾಗಿ ಅನಿವಾಸಿ ಕನ್ನಡತಿ ಲತಾ ಹೆಗಡೆ, ವಿನಯ್‌ ರಾಜಕುಮಾರ್‌ ಅವರಿಗೆ ಜೋಡಿಯಾಗಿದ್ದರೆ. ಈ ಹಿಂದೆ “ಅತಿರಥ’ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದ ಲತಾಗೆ ಇದು ಎರಡನೇ ಕನ್ನಡದ ಚಿತ್ರ. ಈ ಚಿತ್ರದಲ್ಲಿ ಲತಾ ಹೆಗಡೆ ನುಸ್ರತ್‌ ಎನ್ನುವ ಹೆಸರಿನ ಸಂಪ್ರದಾಯಸ್ಥ ಮುಸ್ಲಿಂ ಹುಡುಗಿಯಾಗಿ ಜೊತೆಗೆ ಜಡ್ಜ್ ಆಗಿ ಕಾಣಿಸಿಕೊಂಡಿದ್ದಾರೆ. ಇಲ್ಲಿಯವರೆಗೆ ಕೇವಲ ಬೋಲ್ಡ್‌ ಆ್ಯಂಡ್‌ ಗ್ಲಾಮರಸ್‌ ಪಾತ್ರಗಳಲ್ಲಿ ಮಿಂಚಿದ್ದ ಲತಾಗೆ ಈ ಚಿತ್ರದಲ್ಲಿ ಅಭಿನಯಕ್ಕೂ ಸಾಕಷ್ಟು ಸ್ಕೋಪ್‌ ಇದೆಯಂತೆ. 

“ಅನಂತು ವರ್ಸಸ್‌ ನುಸ್ರತ್‌’ ಚಿತ್ರ ಪಕ್ಕಾ ಇಂದಿನ ಕಾಲಮಾನಕ್ಕೆ ಹೊಂದಿಕೆಯಾಗುವ ಕಥೆ ಎನ್ನುವುದು ಚಿತ್ರತಂಡದ ಒಕ್ಕೊರಲ ಅಭಿಪ್ರಾಯ. ಮೂವತ್ತೈದು – ನಲವತ್ತು ವರ್ಷಗಳ ಹಿಂದೆ ಬೆಂಗಳೂರಿನಂತಹ ಮಹಾನಗರಗಳಲ್ಲಿ ವಿವಾಹ ವಿಚ್ಛೇದನ ಪ್ರಕರಣಗಳ ಸಂಖ್ಯೆ ಅತಿ ವಿರಳವಾಗಿತ್ತು. ಒಂದು ವರ್ಷಕ್ಕೆ ಹೆಚ್ಚೆಂದರೆ, ಐನೂರು ಪ್ರಕರಣಗಳು ಕೋರ್ಟ್‌ನಲ್ಲಿ ದಾಖಲಾಗುತ್ತಿದ್ದವು. ಆದರೆ ಇಂದು ದಿನವೊಂದಕ್ಕೆ ಇದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿಚ್ಛೇದನ ಪ್ರಕರಣಗಳು ದಾಖಲಾಗುತ್ತಿವೆ. ವಿವಾಹ ವಿಚ್ಛೇದನ ಪ್ರಕರಣಗಳ ವಿಲೇವಾರಿಗಾಗಿಯೇ ಪ್ರತ್ಯೇಕ ಕೌಟುಂಬಿಕ ನ್ಯಾಯಾಲಯಗಳ ಸ್ಥಾಪನೆಯಾಗಿದೆ. ಇದು ಹೀಗೆ ಮುಂದುವರೆಯುತ್ತಾ ಹೋದರೆ ಭವಿಷ್ಯದಲ್ಲಿ ಏನಾಗಬಹುದು? ಇಂಥದ್ದೊಂದು ವಿಷಯವನ್ನು ಇಟ್ಟುಕೊಂಡು ಚಿತ್ರವನ್ನು ಪ್ರೇಕ್ಷಕರ ಮುಂದೆ ತರುತ್ತಿದೆ ಚಿತ್ರತಂಡ. 

ಇತ್ತೀಚೆಗಷ್ಟೇ “ಅನಂತು ವರ್ಸಸ್‌ ನುಸ್ರತ್‌’ ಚಿತ್ರದ ಟ್ರೇಲರ್‌, ಆಡಿಯೋ ಹೊರಬಂದಿದ್ದು, ಪ್ರೇಕ್ಷಕರಿಂದ ಮತ್ತು ಚಿತ್ರರಂಗದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇಲ್ಲಿಯವರೆಗೆ ಹಲವು ಚಿತ್ರಗಳಿಗೆ ಬರಹಗಾರನಾಗಿ ಕೆಲಸ ಮಾಡಿರುವ ಸುಧೀರ್‌ ಶ್ಯಾನುಭೋಗ್‌ ಮೊದಲ ಬಾರಿಗೆ ಅನಂತು ವರ್ಸಸ್‌ ನುಸ್ರತ್‌ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಇಂದಿನ ಸಾಮಾಜಿಕ ಮತ್ತು ಕೌಟುಂಬಿಕ ಕಥಾಹಂದರವನ್ನು ಇಟ್ಟುಕೊಂಡು ಅದನ್ನು ಮನರಂಜನಾತ್ಮಕವಾಗಿ ಈ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ತರುತ್ತಿದ್ದೇವೆ ಎನ್ನುವ ನಿರ್ದೇಶಕ ಸುಧೀರ್‌ ಶ್ಯಾನುಭೋಗ್‌, ಚಿತ್ರದ ಮೇಲುನೋಟ ಮತ್ತು ಒಳನೋಟ ಪ್ರೇಕ್ಷಕರನ್ನು ಚಿಂತನೆಗೆ ಹಚ್ಚುತ್ತವೆ ಎನ್ನುತ್ತವೆ ಎನ್ನುತ್ತಾರೆ. 

ಟಾಪ್ ನ್ಯೂಸ್

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kiccha Sudeep supports Sanju Weds Geetha 2 movie

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

6

‌Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್‌!

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.