“ಕವಚ’ಗೆ ಅನಂತ್‌ನಾಗ್ ಹಿನ್ನೆಲೆ ಧ್ವನಿ
Team Udayavani, Mar 20, 2019, 5:42 AM IST
ಶಿವರಾಜಕುಮಾರ್ ನಾಯಕರಾಗಿರುವ “ಕವಚ’ ಚಿತ್ರ ಏಪ್ರಿಲ್ 5 ರಂದು ತೆರೆಕಾಣುತ್ತಿದೆ. ಈ ಮೂಲಕ ತುಂಬಾ ದಿನಗಳ ನಂತರ ಶಿವಣ್ಣ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಕಣ್ತುಂಬಿಕೊಳ್ಳುವ ಉತ್ಸಾಹದಲ್ಲಿದ್ದಾರೆ. ಈಗ “ಕವಚ’ ಚಿತ್ರದ ಕುರಿತಾಗಿ ಸುದ್ದಿಯೊಂದು ಹೊರಬಿದ್ದಿದೆ. ಅದು ಚಿತ್ರಕ್ಕೆ ಹಿನ್ನೆಲೆ ಧ್ವನಿ ನೀಡಿರುವ ಕುರಿತು. ಹೌದು, “ಕವಚ’ ಚಿತ್ರಕ್ಕೆ ನಟ ಅನಂತ್‌ನಾಗ್ ಅವರು ಸಾಥ್ ನೀಡಿದ್ದಾರೆ. ಚಿತ್ರತಂಡ ಆಸೆಯಂತೆ ಚಿತ್ರಕ್ಕೆ ಧ್ವನಿ ನೀಡಿದ್ದಾರೆ.
ಕಥೆಯ ಪ್ರಮುಖ ಅಂಶ ಹಾಗೂ ಕ್ಲೈಮ್ಯಾಕ್ಸ್ ಕುರಿತಾಗಿ ಅನಂತ್‌ನಾಗ್ ಅವರು ಧ್ವನಿ ನೀಡಿದ್ದಾರೆ. ಇದೇ ವೇಳೆ ಚಿತ್ರದ ಕೆಲ ದೃಶ್ಯಗಳನ್ನು ನೋಡಿದ ಅನಂತ್‌ನಾಗ್ ಮೆಚ್ಚುಗೆ ಸೂಚಿಸಿದ್ದಾರೆ ಕೂಡಾ. ಕವಚ’ ಚಿತ್ರದಲ್ಲಿ ನಟ ಶಿವರಾಜ ಕುಮಾರ್ ಮೊದಲ ಬಾರಿಗೆ ಅಂಧನ ಪಾತ್ರವನ್ನು ನಿರ್ವಹಿಸಿದ್ದಾರೆ. ಈ ಪಾತ್ರ ಅಂಧರಿಗೆ ಬದುಕಿಗೆ ಸ್ಪೂರ್ತಿ, ಪ್ರೇರಣೆ ನೀಡುವಂಥದ್ದಾಗಿದೆ ಎನ್ನುತ್ತದೆ ಚಿತ್ರತಂಡ. “ಕವಚ’ ಚಿತ್ರದ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆದಿದ್ದು ಹೈದರಾಬಾದ್‌ನಲ್ಲಿ.
ಹಾಗಾಗಿ ಚಿತ್ರ ಡಿ.ಐ ಸೇರಿದಂತೆ ಹಲವು ಕೆಲಸಗಳನ್ನು ಅಲ್ಲಿನ ನುರಿತ ತಂತ್ರಜ್ಞರು ನಿರ್ವಹಿಸಿದ್ದಾರೆ. ಈ ವೇಳೆ ಚಿತ್ರವನ್ನು ನೋಡಿದ ಅಲ್ಲಿನ ತಂತ್ರಜ್ಞರು ಶಿವಣ್ಣ ಅಭಿನಯ ನೋಡಿ ಫಿದಾ ಆಗಿದ್ದಾರೆ. “ಕವಚ’ ಚಿತ್ರದಲ್ಲಿ ಶಿವರಾಜಕುಮಾರ್ ಅವರೊಂದಿಗೆ ಇಶಾ ಕೊಪ್ಪಿಕರ್, ರವಿಕಾಳೆ, ಕೃತಿಕಾ, ರಾಜೇಶ್ ನಟರಂಗ, ವಸಿಷ್ಠ ಸಿಂಹ, ಬೇಬಿ ಮೀನಾಕ್ಷಿ, ಜಯಪ್ರಕಾಶ್ ಮೊದಲಾದ ಕಲಾವಿದರ ದೊಡ್ಡ ತಾರಾಗಣವಿದೆ. “ಹೆಚ್.ಎಂ.ಎ ಸಿನಿಮಾ’ ಬ್ಯಾನರ್‌ನಲ್ಲಿ ಎಂ.ವಿ.ವಿ ಸತ್ಯ ನಾರಾಯಣ್ “ಕವಚ’ ಚಿತ್ರವನ್ನು ನಿರ್ಮಿಸಿದ್ದಾರೆ.
ಚಿತ್ರಕ್ಕೆ ರಾಹುಲ್ ಶ್ರೀವಾತ್ಸವ್ ಛಾಯಾಗ್ರಹಣ, ಜೊ.ನಿ ಹರ್ಷ ಸಂಕಲನವಿದೆ. ಚಿತ್ರದ ಹಾಡುಗಳಿಗೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಇದೆ. ಕೆ. ಕಲ್ಯಾಣ್, ಡಾ. ವಿ ನಾಗೇಂದ್ರ ಪ್ರಸಾದ್, ಕವಿರಾಜ್ ಚಿತ್ರದ ಹಾಡುಗಳಿಗೆ ಸಾಹಿತ್ಯವನ್ನು ಒದಗಿಸಿದ್ದಾರೆ. ರವಿವರ್ಮ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾರೆ. ರಾಮ್‌ಗೊàಪಾಲ್ ವರ್ಮಾ (ಆರ್‌ಜಿವಿ) ಅವರ ಜೊತೆ ಹಲವು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿದ್ದ ಜಿವಿಆರ್ ವಾಸು ಮೊದಲ ಬಾರಿಗೆ ಕನ್ನಡದಲ್ಲಿ “ಕವಚ’ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.