ಆ ಕಾಲದ ಕಥೆ ಈ ಕಾಲದಲ್ಲಿ ಸಿನಿಮಾ! ಅಂದೊಂದಿತ್ತು ಕಾಲ ಚಿತ್ರೀಕರಣಕ್ಕೆ ಚಾಲನೆ
Team Udayavani, Feb 19, 2021, 3:48 PM IST
ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ “ನಮ್ಮ ಬಸವ’ ಚಿತ್ರದಲ್ಲಿ “ಅಂದೊಂದಿತ್ತು ಕಾಲ…’ ಎಂಬ ಹಾಡನ್ನು ನೀವು ಕೇಳಿರುತ್ತೀರಿ, ಈಗ ಅದೇ “ಅಂದೊಂದಿತ್ತು ಕಾಲ’ ಎಂಬ ಹೆಸರಿನಲ್ಲಿ ಚಿತ್ರವೊಂದು ಸೆಟ್ಟೇರಿದೆ. ನಟ ವಿನಯ್ ರಾಜಕುಮಾರ್ “ಅಂದೊಂದಿತ್ತು ಕಾಲ’ ಚಿತ್ರದಲ್ಲಿ ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿದ್ದು, ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಅದ್ಧೂರಿಯಾಗಿ ನೆರವೇರಿತು.
ಚಿತ್ರದ ಮೊದಲ ದೃಶ್ಯಕ್ಕೆ ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಕ್ಲಾಪ್ ಮಾಡಿ, ಚಿತ್ರೀಕರಣಕ್ಕೆ ಚಾಲನೆ ನೀಡಿದರು. ನಿರ್ದೇಶಕ ಜೋಗಿ ಪ್ರೇಮ್, ಹಿರಿಯ ನಟ ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್, ಮಂಗಳ ರಾಘವೇಂದ್ರ ರಾಜಕುಮಾರ್, ನಟ ಸಂದೀಪ್ ಮಲಾನಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದು ಚಿತ್ರತಂಡಕ್ಕೆ ಶುಭ ಕೋರಿದರು.
ಇದನ್ನೂ ಓದಿ:ತುಳು ಚಿತ್ರರಂಗ ಉಳಿಯಬೇಕಾದರೆ ಥಿಯೇಟರ್ ಸಮಸ್ಯೆ ಬಗೆಹರಿಯಬೇಕು: ದೇವದಾಸ್ ಕಾಪಿಕಾಡ್
90ರ ದಶಕದ ಕಥಾಹಂದರ ಹೊಂದಿರುವ “ಅಂದೊಂದಿತ್ತು ಕಾಲ’ ಚಿತ್ರದಲ್ಲಿ ವಿನಯ್ ರಾಜಕುಮಾರ್‌ಗೆ ನಾಯಕಿಯಾಗಿ ಅದಿತಿ ಪ್ರಭುದೇವ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಕಿರುತೆರೆ ನಟಿ ನಿಶಾ, ಕಡ್ಡಿಪುಡಿ ಚಂದ್ರು, ಅರುಣಾ ಬಾಲರಾಜ್, ಗೋಪಾಲಕೃಷ್ಣ ದೇಶಪಾಂಡೆ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
“ಅಂದೊಂದಿತ್ತು ಕಾಲ’ ಚಿತ್ರಕ್ಕೆ ಯುವ ನಿರ್ದೇಶಕ ಕೀರ್ತಿ ಕಥೆ, ಚಿತ್ರಕಥೆ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಅಭಿಷೇಕ್ ಕಾಸರಗೋಡು ಛಾಯಾಗ್ರಹಣವಿದೆ. ಭುವನ್ ಲೋಕೇಶ್ ಈ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ. ಸದ್ಯ ಮುಹೂರ್ತ ನೆರವೇರಿಸಿ ಚಿತ್ರದ ಚಿತ್ರೀಕರಣಕ್ಕೆ ಚಾಲನೆ ನೀಡಿರುವ ಚಿತ್ರತಂಡ, ತೀರ್ಥಹಳ್ಳಿ ಮತ್ತು ಬೆಂಗಳೂರು ಸುತ್ತಮುತ್ತ ಎರಡು ಹಂತದಲ್ಲಿ “ಅಂದೊಂದಿತ್ತು ಕಾಲ’ ಚಿತ್ರವನ್ನು ಚಿತ್ರೀಕರಣ ಮಾಡಲು ಪ್ಲಾನ್ ಹಾಕಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.