ಅನಿತಾ ಭಟ್‌ ಸಿನಿಮಾದ ಟೈಟಲ್‌ ಲಾಂಚ್‌ ಮಾಡಿದ್ದಾರೆ ಶ್ರೀಮುರುಳಿ!

Team Udayavani, Sep 18, 2021, 3:37 PM IST

ಅನಿತಾ ಭಟ್‌ ಸಿನಿಮಾದ ಟೈಟಲ್‌ ಲಾಂಚ್‌ ಮಾಡಿದ್ದಾರೆ ಶ್ರೀಮುರುಳಿ!

ಪ್ರತಿಭಾನ್ವಿತ ನಟಿ ಅನಿತಾ ಭಟ್‌ ಮತ್ತೆ ಸಿನಿಮಾವೊಂದರ ಮೂಲಕ ಸುದ್ದಿ ಕೇಂದ್ರದಲ್ಲಿದ್ದಾರೆ. ಸದ್ದೇ ಇಲ್ಲದೆ ಒಂದು ಸಿನಿಮಾದ ಲೀಡ್‌ ರೋಲಿನಲ್ಲಿ ನಟಿಸಿರುವ ಅವರಿಗೀಗ ರೋರಿಂಗ್‌ ಸ್ಟಾರ್‌ ಶ್ರೀಮುರಳಿ ಸಾಥ್‌ ನೀಡಿದ್ದಾರೆ. ಕೊರೋನಾ ಕಾಲದಲ್ಲಿ ಆಸ್ಥೆಯಿಂದ ತಯಾರಿ ನಡೆಸಿ, ಕೊರೋನಾ ಅಬ್ಬರ ತುಸು ತಗ್ಗುತ್ತಲೇ ಈ ಸಿನಿಮಾದ ಚಿತ್ರೀಕರಣವನ್ನೂ ಪೂರ್ಣಗೊಳಿಸಿಕೊಳ್ಳಲಾಗಿದೆ.

ಚಿತ್ರದ ಟೈಟಲ್‌ ಅನ್ನು ಶ್ರೀಮುರುಳಿ ಲಾಂಚ್‌ ಮಾಡಿದ್ದಾರೆ. ಹಾಗೆ ಸಿನಿಮಾ ಪ್ರೇಮಿಗಳೆದುರು ತೆರೆದುಕೊಂಡಿರೋದು ಸಮುದ್ರಂ’ ಎಂಬ ಸಮ್ಮೋಹಕ ಶೀರ್ಷಿಕೆ. ಸಾಮಾನ್ಯವಾಗಿ ಸಿನಿಮಾ ಮುಹೂರ್ತದ ಆಸುಪಾಸಲ್ಲಿಯೇ ಟೈಟಲ್‌ ಲಾಂಚ್‌ ಮಾಡೋದು ರೂಢಿ. ಆದರೆ ಈ ಚಿತ್ರ ತಂಡ ಮಾತ್ರ ಆ ಪದ್ಧತಿಯನ್ನು ಬ್ರೇಕ್‌ ಮಾಡಿದೆ.

ಚಿತ್ರೀಕರಣವೆಲ್ಲ ಸಂಪೂರ್ಣ ಮುಗಿದಾದ ನಂತರವೇ ಶೀರ್ಷಿಕೆ ಅನಾವರಣ ಕಾರ್ಯಕ್ರಮವನ್ನಿಟ್ಟುಕೊಂಡಿದೆ. ಅಂದಹಾಗೆ, “ರಾಜಲಕ್ಷ್ಮೀ  ಸಿನಿ ಕ್ರಿಯೇಷನ್ಸ್’ ನಿರ್ಮಾಣ ಮಾಡಿರೋ ಚಿತ್ರ. ಇದಕ್ಕೆ ಅನಿತಾ ಭಟ್‌ ಕ್ರಿಯೇಷನ್ಸ್, ಡಾಟ್‌ ಟಾಕೀಸ್‌ ಸಹಯೋಗವಿದೆ.  ಅನಿತಾ ಭಟ್‌ ಮತ್ತು ಶಿವಧ್ವಜ್‌ ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದಾರೆ. ರಾಜ್‌ ಕಿಶೋರ್ ಮತ್ತು ಸ್ವಾತಿ ಬಂಗೇರ ಜೋಡಿ ಮತ್ತೆರಡು ಪ್ರಧಾನ ಪಾತ್ರಗಳಿಗೆ ಜೀವ ತುಂಬಿದ್ದಾರೆ.

ಇದನ್ನೂ ಓದಿ:ಅನಿರುದ್ಧ ಶಾಸ್ತ್ರಿ ಕಂಠಸಿರಿಯಲ್ಲಿ ‘ಆಪರೇಶನ್‌ ಡಿ’ ಹಾಡುಗಳು

ಸಮುದ್ರಂ ಎಂಬ ಶೀರ್ಷಿಕೆಯೇ ಕಥೆಯ ಜಾಡನ್ನು ಕಡಲ ಕಿನಾರೆಯತ್ತ ಸರಿಸುವಂತಿದೆ. ಅದು ನಿಜವೂ ಹೌದು. ಯಾಕೆಂದರೆ, ಇದು ಕಡಲ ಕಿನಾರೆಯ ನಿಗೂಢ ಕಥಾ ಹಂದರವನ್ನೊಳಗೊಂಡಿರೋ ಚಿತ್ರ. ಕಡಲೆಂದರೆ ಬಹುತೇಕರ ಮನಸು ನೀಲಾಕಾಶದಂತೆ ಪ್ರಪುಲ್ಲವಾಗುತ್ತದಲ್ಲಾ?ಅದರ ಕಿನಾರೆಗಳಲ್ಲಿ ಮೈಚಾಚಿಕೊಂಡ ಭೂಗತ ಚಟುವಟಿಕೆಗಳ ಹೇಳ ಹೊರಟಿದೆ. ಅಂಥಾದ್ದೇ ಒಂದು ರಸವತ್ತಾದ ಕಥೆ ಈ ಚಿತ್ರದಲ್ಲಿದೆಯಂತೆ. ಅದನ್ನು ನಿರ್ದೇಶನ ಮಾಡಿರುವವರು ರಾಘವ ಮಹರ್ಶಿ.

ಶಿವಧ್ವಜ್‌ ಇಲ್ಲಿ ಡಾನ್‌ ಪಾತ್ರವನ್ನು ನಿರ್ವಹಿಸಿದ್ದರೆ, ಅನಿತಾ ಭಟ್‌ ಥರ ಥರದ ಶೇಡ್ಗಳಿರೋ ಸವಾಲಿನ ಪಾತ್ರವನ್ನು ನಿಭಾಯಿಸಿದ್ದಾರೆ.ಓರ್ವ ಗೃಹಿಣಿಯಾಗಿ, ಸಂದರ್ಭಾನುಸಾರ ರೆಬೆಲ್‌ ಆಗಿ ಈ ಸಮಾಜದೆದುರು ನಿಲ್ಲೋ ದಿಟ್ಟ ಹೆಣ್ಣಾಗಿಯೂ ಅವರು ನಟಿಸಿದ್ದಾರೆ. ಉಡುಪಿ, ಮಲ್ಪೆ, ಬ್ರಹ್ಮಾವರ, ಸಕಲೇಶಪುರ ಚಿಕ್ಕಮಗಳೂರು ಮುಂತಾದೆಡೆಗಳಲ್ಲಿ ಚಿತ್ರೀಕರಣ ಮುಗಿಸಿಕೊಳ್ಳಲಾಗಿದೆ. ಬಿಡುಗಡೆಯ ಹೊಸ್ತಿಲಿನ ಕಾರ್ಯಚಟುವಟಿಕೆಗಳಿಗೂ ಚಾಲನೆ ಸಿಕ್ಕಿದೆ.

ಚಿತ್ರಕ್ಕೆ ರಾಘವ ಮಹರ್ಶಿ ನಿರ್ದೇಶನ, ಆಕಾಶ್‌ ಪರ್ವ ಸಂಗೀತ ನಿರ್ದೇಶನವಿದೆ. ಛಾಯಾಗ್ರಹಣ, ಸಂಕಲನ ಮಾತ್ರವಲ್ಲದೆ ಚಿತ್ರಕಥೆ ಸಂಭಾಷಣೆಯ ಜವಾಬ್ದಾರಿ ರಿಷಿಕೇಶ್‌ ನಿಭಾಯಿಸಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಸಮುದ್ರಂನ ಅಚ್ಚರಿದಾಯಕ, ಬಿಡುಗಡೆ ದಿನಾಂಕ ಅನೌನ್ಸ್‌ ಆಗಲಿದೆ.

ಟಾಪ್ ನ್ಯೂಸ್

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.