ಮತ್ತೂಂದು ಭರ್ಜರಿ ಆ್ಯಕ್ಷನ್ ಚಿತ್ರ ಒಪ್ಪಿದ ವಿನೋದ್ ಪ್ರಭಾಕರ್
Team Udayavani, Apr 15, 2020, 9:58 AM IST
ವಿನೋದ್ ಪ್ರಭಾಕರ್ ದರ್ಶನ್ ಜೊತೆ “ರಾಬರ್ಟ್’ ನಲ್ಲಿ ನಟಿಸಿರೋದು ಗೊತ್ತೇ ಇದೆ. ಸದ್ಯಕ್ಕೆ ಲಾಕ್‌ಡೌನ್ ಹಿನ್ನೆಲೆಯಲ್ಲಿ ಅವರು ಮನೆಯಲ್ಲಿದ್ದಾರೆ.
ಆದರೂ, ಹೊಸ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಹಾಗಂತ, ಚಿತ್ರೀಕರಣಕ್ಕೆ ಹೊರಡುತ್ತಿಲ್ಲ. ಕೋವಿಡ್ 19 ಸಮಸ್ಯೆ ಬಗೆಹರಿದ ನಂತರ ಅವರು ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಹೌದು, ವಿನೋದ್ ಪ್ರಭಾಕರ್ ನಟಿಸಲಿರುವ ಹೊಸ ಚಿತ್ರಕ್ಕಿನ್ನೂ ಹೆಸರಿಟ್ಟಿಲ್ಲ. ಈ ಚಿತ್ರಕ್ಕೆ ಪ್ರಮೋದ್ ಕುಮಾರ್ ನಿರ್ದೇಶಕರು. ಇನ್ನು, ಹೇಮಾವತಿ ಮುನಿಸ್ವಾಮಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ಇವರು “ಕುಲ್ಫಿ’ ಚಿತ್ರ ನಿರ್ಮಿಸಿದ್ದರು. ಈಗ ವಿನೋದ್ ಪ್ರಭಾಕರ್ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಇನ್ನು, “ಗೀತಾ’ ಸಿನಿಮಾದಲ್ಲಿ ನಾಯಕಿಯಾಗಿದ್ದ ಮಲಯಾಳಂ ಚಿತ್ರರಂಗದ ನಟಿ ಪಾರ್ವತಿ ಅರುಣ್ ವಿನೋದ್ ಪ್ರಭಾಕರ್ ಆವರಿಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ವಿನೋದ್ ಪ್ರಭಾಕರ್ ಚಿತ್ರಗಳೆಂದರೆ, ಪಕ್ಕಾ ಆ್ಯಕ್ಷನ್ ಮಯವಾಗಿರುತ್ತವೆ. ಈ ಸಿನಿಮಾ ಕೂಡ ಭರ್ಜರಿ ಆ್ಯಕ್ಷನ್ ಹೊಂದಿದ್ದು, ಈಗಿನ ಟ್ರೆಂಡ್‌ಗೆ ತಕ್ಕಂತೆ ಕಥೆ ಹೆಣೆದಿರುವ ನಿರ್ದೇಶಕರು, ವಿನೋದ್ ಪ್ರಭಾಕರ್ ಫ್ಯಾನ್ಸ್‌ಗೆ ಬೇಕಾದ ಎಲ್ಲಾ ಎಲಿಮೆಂಟ್ಸ್ ಇಟ್ಟು ಸಿನಿಮಾ ಮಾಡುತ್ತಿದ್ದಾರೆ.
ಕೋವಿಡ್ 19 ಸಮಸ್ಯೆ ಬಗೆಹರಿದ ಬಳಿಕ ಚಿತ್ರದ ಫಸ್ಟ್ ಲುಕ್ ಅನ್ನು ಗ್ರ್ಯಾಂಡ್ ಆಗಿ ರಿಲೀಸ್ ಮಾಡುವ ಮೂಲಕ ಮುಹೂರ್ತ ಮಾಡುವ ಯೋಚನೆ ನಿರ್ಮಾಪಕರದ್ದು. ಚಿತ್ರದಲ್ಲಿ ಭರ್ಜರಿ ಐದು ಫೈಟ್ಸ್‌ಗಳಿದ್ದು, ಚಿತ್ರದ ಎಲ್ಲಾ ಹಾಡುಗಳಿಗೂ “ಬಹದ್ದೂರ್’ ಚೇತನ್ ಸಾಹಿತ್ಯ ಬರೆಯುತ್ತಿದ್ದಾರೆ. “3 ಪೆಗ್’ ಖ್ಯಾತಿಯ ವಿಜೇತ್ ಕೃಷ್ಣ ಅವರು ಸಂಗೀತ ನೀಡುತ್ತಿದ್ದಾರೆ. ವಿನೋದ್ ಪ್ರಭಾಕರ್ ಅಭಿನಯದ “ರಾಬರ್ಟ್’, “ಫೈಟರ್’ ಹಾಗು “ಶ್ಯಾಡೋ’ ಸಿನಿಮಾಗಳು ತೆರೆಗೆ ಬರಲು ಸಜ್ಜಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prashanth Neel: ಸಲಾರ್ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.