ಏ.2ಕ್ಕೆ ನಿಖೀಲ್‌ ಹೊಸ ಚಿತ್ರ ಸ್ಕ್ರಿಪ್ಟ್ ಪೂಜೆ

Team Udayavani, Mar 28, 2017, 11:16 AM IST

nikhil.jpg

“ಜಾಗ್ವಾರ್‌’ ನಂತರ ನಿಖೀಲ್‌ ಕುಮಾರ್‌ ಅವರ ಎರಡನೆಯ ಚಿತ್ರ ಯಾವುದಾಗಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇತ್ತು. ತೆಲುಗಿನ ಸುರೇಂದರ್‌ ರೆಡ್ಡಿ ಅವರು ನಿಖೀಲ್‌ ಅಭಿನಯದ ಚಿತ್ರವನ್ನು ನಿರ್ದೇಶಿಸುತ್ತಾರೆ ಎಂಬ ಸುದ್ದಿ ಒಂದು ಕಡೆಯಾದರೆ, ಈ ಬಾರಿ ಕನ್ನಡಿಗರೇ ಯಾರಾದರೂ ನಿರ್ದೇಶಿಸುತ್ತಾರೆ ಎಂಬ ಸುದ್ದಿಯೂ ಇತ್ತು.

“ಬಹದ್ದೂರ್‌’ ಚೇತನ್‌, “ಹೆಬ್ಬುಲಿ’ ಖ್ಯಾತಿಯ ಕೃಷ್ಣ ಅಥವಾ ನೃತ್ಯ ನಿರ್ದೇಶಕ ಎ. ಹರ್ಷ ಹೀಗೆ ಮೂವರಲ್ಲೊಬ್ಬರು ನಿಖೀಲ್‌ ಅಭಿನಯದ ಚಿತ್ರವನ್ನು ನಿರ್ದೇಶಿಸುತ್ತಾರೆ ಎಂದು ಹೇಳಲಾಗಿತ್ತು. ಈಗ ಎಲ್ಲವೂ ಒಂದು ಹಂತಕ್ಕೆ ಬಂದಿದ್ದು, ನಿಖೀಲ್‌ ಅಭಿನಯದ ಎರಡನೆಯ ಚಿತ್ರವನ್ನು ಚೇತನ್‌ ನಿರ್ದೇಶಿಸುವುದು ಪಕ್ಕಾ ಆಗಿದೆ.

ಅಂದಹಾಗೆ, ಈ ಚಿತ್ರದ ಸ್ಕ್ರಿಪ್ಟ್ ಪೂಜೆಯು ಏಪ್ರಿಲ್‌ ಎರಡಕ್ಕೆ ನಡೆಯಲಿದೆಯಂತೆ. ಇನ್ನು ಈ ಚಿತ್ರದ ಚಿತ್ರೀಕರಣ ಮೇ 15ರಿಂದ ಪ್ರಾರಂಭವಾಗಲಿದೆಯಂತೆ. ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕಿನ್ನೂ ಹೆಸರಿಟ್ಟಿಲ್ಲ. ಏಪ್ರಿಲ್‌ ಎರಡನೆಯ ವಾರದ ಹೊತ್ತಿಗೆ ಟೈಟಲ್‌ ಫಿಕ್ಸ್‌ ಆಗಲಿದೆ.

ಈ ಚಿತ್ರವನ್ನೂ ಮಾಜಿ ಮುಖ್ಯಂತ್ರಿ ಎಚ್‌.ಡಿ. ಕುಮಾರಸ್ವಾಮಿ ನಿರ್ಮಿಸಲಿದ್ದು, ಇದು ಚೆನ್ನಾಂಬಿಕಾ ಪಿಕ್ಚರ್ನ ಏಳನೇ ಚಿತ್ರವಾಗಲಿದೆ. ಈ ಚಿತ್ರ ಬಜೆಟ್‌ ವಿಷಯದಲ್ಲಿ “ಜಾಗ್ವಾರ್‌’ಗಿಂಥ ಒಂದು ಕೈ ಮೇಲಿರುತ್ತದೆ ಎನ್ನುವ ಚಿತ್ರದ ಕಾರ್ಯಕಾರಿ ನಿರ್ಮಾಪಕ ಸುನೀಲ್‌ ಗೌಡ, ಈ ಚಿತ್ರದಲ್ಲಿ ಕನ್ನಡಿಗರೇ ದೊಡ್ಡ ಸಂಖ್ಯೆಯಲ್ಲಿ ಇರುತ್ತಾರೆ ಎಂದು ಹೇಳಲು ಮರೆಯುವುದಿಲ್ಲ. ಅದಕ್ಕೆ ಸರಿಯಾಗಿ ಶ್ರೀಷ ಕೂದುವಳ್ಳಿ ಅವರನ್ನು ಛಾಯಾಗ್ರಾಹಕರನ್ನಾಗಿ ಆಯ್ಕೆ ಮಾಡಲಾಗಿದೆ.

ಇನ್ನು ಸಂಗೀತ ನಿರ್ದೇಶನದ ಜವಾಬ್ದಾರಿ ವಿ. ಹರಿಕೃಷ್ಣ ಹೆಗಲಿಗೆ ಬೀಳಲಿದೆಯೋ ಅಥವಾ ಅರ್ಜುನ್‌ ಜನ್ಯ ಹೆಗಲಿಗೆ ಬೀಳಲಿದೆಯೋ ಇನ್ನೂ ಪಕ್ಕಾ ಆಗಿಲ್ಲ. ದೀಪು ಕುಮಾರ್‌ ಅವರ ಸಂಕಲನ ಈ ಚಿತ್ರಕ್ಕಿದೆ. ಚಿತ್ರದ ಹೈಲೈಟ್‌ ಎಂದರೆ ಮೊದಲ 10 ನಿಮಿಷಗಳ ಭರ್ಜರಿ ಇಂಟ್ರೋ ಫೈಟ್‌. ನಿಖೀಲ್‌ ಅಮೇರಿಕಾಗೆ ಹೋಗಿ ತರಬೇತಿ ಪಡೆದು ಬಂದಿದ್ದು, ಅದೆಲ್ಲಾ ಈ ಚಿತ್ರದಲ್ಲಿ ಕಾಣುಬಹುದಾಗಿದೆ ಎನ್ನುವುದು ಈ ಚಿತ್ರದ ವಿಶೇಷ.

ಟಾಪ್ ನ್ಯೂಸ್

1-st

ಜ.26-30: ಅತ್ತೂರು ಸಂತ ಲಾರೆನ್ಸ್‌ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ

1-gil

450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ

CT Ravi

ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ

nucchinunde

Healthy Recipe: ಹಳೇ ಕಾಲದ ರುಚಿ; ಈ ರೆಸಿಪಿ ಮಾಡದಿದ್ದರೆ ಒಮ್ಮೆಯಾದ್ರು ಮಾಡಿ ನೋಡಿ…

Rohit-SHarma-(2)

BGT Finale: ಪಂದ್ಯಕ್ಕಿಲ್ಲ ರೋಹಿತ್ ಶರ್ಮ? ಬುಮ್ರಾ ನಾಯಕತ್ವಕ್ಕೆ ಸಿದ್ಧ!

Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!

Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ

Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ

Sandalwood: ಮತ್ತೆ ಬಂದ ಪ್ರಿಯಾ ಆನಂದ

Sandalwood: ಮತ್ತೆ ಬಂದ ಪ್ರಿಯಾ ಆನಂದ

Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ

Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-st

ಜ.26-30: ಅತ್ತೂರು ಸಂತ ಲಾರೆನ್ಸ್‌ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ

Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ

Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ

ನನ್ನ ನಾಯಿಗಳಿಗೆ ಕ್ರಾಸಿಂಗ್‌ ಮಾಡಿಸಬೇಕು.. ಸೋನು ನ್ಯೂ ಇಯರ್ ರೆಸಲ್ಯೂಷನ್‌‌ ಏನೇನು ಗೊತ್ತಾ?

ನನ್ನ ನಾಯಿಗಳಿಗೆ ಕ್ರಾಸಿಂಗ್‌ ಮಾಡಿಸಬೇಕು.. ಸೋನು ನ್ಯೂ ಇಯರ್ ರೆಸಲ್ಯೂಷನ್‌‌ ಏನೇನು ಗೊತ್ತಾ?

1-gil

450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ

ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!

ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.