‘ಜೀವನ ಪರ್ಯಂತ ನಿನ್ನನ್ನು ಮಿಸ್ ಮಾಡ್ಕೋತಿನಿ’: ಚಿರು ನೆನೆದು ಭಾವುಕರಾದ ಅರ್ಜುನ್ ಸರ್ಜಾ
Team Udayavani, Jun 7, 2021, 2:36 PM IST
ಬೆಂಗಳೂರು : ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ನಿಧನರಾಗಿ ಇಂದಿಗೆ (ಜೂನ್ 7) ಒಂದು ವರ್ಷವಾಗಿದೆ. ಅಗಲಿದ ಚಿರು ನೆನಪು ಮಾತ್ರ ಎಲ್ಲರ ಹೃದಯದೊಳಗೆ ಇನ್ನೂ ಹಾಗೆ ಉಳಿದುಕೊಂಡಿದೆ.
ನಟ ಅರ್ಜುನ್ ಸರ್ಜಾ ಅವರು ತಮ್ಮ ಟ್ವಿಟರಿನಲ್ಲಿ ಅಳಿಯ ದಿ.ಚಿರು ಅವರನ್ನು ನೆನದು ಭಾವುಕರಾಗಿ ಟ್ವಿಟ್ ಮಾಡಿದ್ದಾರೆ. ನೀನು ನಮ್ಮನ್ನು ಅಗಲಿ ಒಂದು ವರ್ಷ ಆಯಿತು. ಯಾವತ್ತೂ ನಿನ್ನನ್ನು ನಾನು ಮಿಸ್ ಮಾಡಿಕೊಳ್ಳುತ್ತೇನೆ . ನೀ ಎಲ್ಲೆ ಇದ್ದರೂ ಕೂಡ ನಿನ್ನ ಮೊಗದಲ್ಲಿರುವ ನಗು ಹಾಗೆ ಇರಲೆಂದು ಆಶೀಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಚಿರು ಸರ್ಜಾ ಅವರ ಪತ್ನಿ ನಟಿ ಮೇಘನಾ ಸರ್ಜಾ, ತಮ್ಮ ನಟ ಧ್ರುವ ಸರ್ಜಾ ಸೇರಿದಂತೆ ಹಲವರು ಭಾವುಕ ಪತ್ರ ಬರೆದು ಸ್ಮರಿಸಿಕೊಂಡಿದ್ದಾರೆ.
‘ನೀನು ದೇವರ ಮನೆಗೆ ಹೋಗಿ ಒಂದು ವರುಷವಾಯಿತು. ಎಷ್ಟು ಬೇಗ ಒಂದು ವರ್ಷ, ಈ 365 ದಿನಗಳಲ್ಲಿ ನಿನ್ನ ನೆನೆಯದ ದಿನಗಳೇ ಇಲ್ಲ. ಕನಸಿನಲ್ಲಿ ನಿನ್ನ ಕಾಣದ ರಾತ್ರಿಗಳೇ ಇಲ್ಲ. ಮರೆಯಲಾಗದ ಚಿರ ನೆನಪುಗಳು. ಕುಟುಂಬದ ಮೇಲೆ ನಿನಗಿದ್ದ ಅಪಾರವಾದ ಗೌರವ, ಜನಗಳಿಗೆ ನೀನು ತೋರುತ್ತಿದ್ದ ಪ್ರೀತಿ, ಪ್ರೇಮ, ಸ್ನೇಹ ಉದಾರಗುಣ ಮತ್ತು ಅಜಾತ ಶತ್ರುವಾಗಿದ್ದ ನಿನ್ನ ನೆನಪುಗಳೇ ಈಗ ನಮ್ಮ ಕರಗಲಾರದ ಆಸ್ತಿ. ನೀನೆಲ್ಲಿದ್ದರೂ ಅಲ್ಲಿ ನಗು ತುಂಬಿರಬೇಕು. ನಿನ್ನ ಆತ್ಮ ಸದಾ ಶಾಂತಿಯಿಂದಿರಬೇಕು. ಆ ಪ್ರಾರ್ಥನೆಯಲ್ಲೇ, ಎಂದೆಂದಿಗೂ ನಿನ್ನ ನೆನಪಿನಲ್ಲೇ, ನಿನ್ನ ಪ್ರೀತಿಯ ಕುಟುಂಬ..ಎಂದು ಇಡೀ ಕುಟುಂಬ ಭಾವುಕ ಪತ್ರವನ್ನು ಹಂಚಿಕೊಂಡಿದ್ದಾರೆ.
ಸಮಾಧಿಗೆ ಪೂಜೆ: ಇಂದು ಮೊದಲ ವರ್ಷದ ಪುಣ್ಯತಿಥಿ ಹಿನ್ನೆಲೆಯಲ್ಲಿ ಸರ್ಜಾ ಮತ್ತು ಮೇಘನಾ ರಾಜ್ ಕುಟುಂಬಸ್ಥರು ಬೆಂಗಳೂರಿನ ಹೊರವಲಯ ಕನಕಪುರದಲ್ಲಿರುವ ಧ್ರುವ ಸರ್ಜಾ ಫಾರ್ಮ್ ಹೌಸ್ ಗೆ ತೆರಳಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.
It has been a year, but I will miss you for a lifetime Chiru magane.. I hope that constant happy smile never wipes off where ever you are. pic.twitter.com/DobZWCftO8
— Arjun (@akarjunofficial) June 7, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
MUST WATCH
ಹೊಸ ಸೇರ್ಪಡೆ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.