ಅರ್ಜುನ್ ಗೌಡ ಮೇಲೆ ಪ್ರಿಯಾಂಕಾ ನಿರೀಕ್ಷೆ
ರೀ ರೆಕಾರ್ಡಿಂಗ್ ಮುಗಿಸಿದ ಪ್ರಜ್ವಲ್ ಚಿತ್ರ
Team Udayavani, Dec 11, 2020, 4:30 PM IST
“ಜಂಟಲ್‌ವುನ್’ ಚಿತ್ರದ ಬಳಿಕ ನಟ ಪ್ರಜ್ವಲ್ ದೇವರಾಜ್ ಅಭಿನಯದ”ಅರ್ಜುನ್ ಗೌಡ’ ಚಿತ್ರ ತೆರೆಗೆ ಬರಲು ತಯಾರಾಗುತ್ತಿದೆ. ಈಗಾಗಲೇ ಚಿತ್ರದ ಪೋಸ್ಟ್ ಪ್ರೊಡಕ್ಷನ್‌ಕೆಲಸಗಳನ್ನು ಭರದಿಂದ ನಡೆಸುತ್ತಿರುವ ಚಿತ್ರತಂಡ, ಇತ್ತೀಚೆಗೆ ಚಿತ್ರದ ರೀ-ರೆಕಾರ್ಡಿಂಗ್ ಕಾರ್ಯವನ್ನೂ ಪೂರ್ಣಗೊಳಿಸಿದೆ.
ಇನ್ನು ಈ ರೀ-ರೆಕಾರ್ಡಿಂಗ್ ಕಾರ್ಯದಲ್ಲಿ ಸುಮಾರು 200ಕ್ಕೂ ಹೆಚ್ಚು ತಂತ್ರಜ್ಞರು ಪಾಲ್ಗೊಂಡಿದ್ದರು. ಬೆಂಗಳೂರು ಮಾತ್ರವಲ್ಲದೆ ಮುಂಬೈ, ಚೆನ್ನೈ ಹಾಗೂ ಕೊಲ್ಕತ್ತದ ಪ್ರಸಿದ್ದ ಸ್ಟುಡಿಯೋಗಳಲ್ಲಿ ಈ ಚಿತ್ರದ ರೀ-ರೆಕಾರ್ಡಿಂಗ್ ಕಾರ್ಯ ನಡೆಸಲಾಗಿದೆ. ಇನ್ನು ಮೊದಲ ಬಾರಿಗೆ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಬಾಕ್ಸರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಔಟ್ ಆ್ಯಂಡ್ ಔಟ್ ಮಾಸ್ ಲುಕ್‌ನಲ್ಲಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಹಿಂದಿನ ಚಿತ್ರಗಳಿಗಿಂತ ವಿಭಿನ್ನ ಪಾತ್ರ ಚಿತ್ರದಲ್ಲಿರುವುದರಿಂದ, ಪ್ರಜ್ವಲ್‌ಗೂ ಚಿತ್ರದ ಮೇಲೆ ಸಹಜವಾಗಿಯೇ ಸಾಕಷ್ಟು ನಿರೀಕ್ಷೆ ಇದೆ.
ಇದನ್ನೂ ಓದಿ : ಹೊಸ ಚಿಂತನೆಯಲ್ಲಿ ಸಮಾನತೆಯ ಕಡೆಗೆ
ಈಗಾಗಲೇ ಬಿಡುಗಡೆಯಾಗಿರುವ “ಅರ್ಜುನ್ ಗೌಡ’ ಚಿತ್ರದ ಟ್ರೇಲರ್ ನೋಡುಗರ ಗಮ ಸೆಳೆಯಲು ಯಶಸ್ವಿಯಾಗಿದ್ದು, ಆ್ಯಕ್ಷನ್ ದೃಶ್ಯಗಳಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಲಕ್ಕಿ ಶಂಕರ್‌ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಬರೋಬ್ಬರಿ ಏಳು ಸಾಹಸ ಸನ್ನಿವೇಶಗಳಿದೆ. ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಗೆ ನಾಯಕಿಯಾಗಿ ಪ್ರಿಯಾಂಕಾ ತಿಮ್ಮೇಶ್ ಅಭಿನಯಿಸಿದ್ದಾರೆ. ಬಾಲಿವುಡ್ ನಟ ರಾಹುಲ್ ದೇವ್, ಸ್ಪರ್ಶ ರೇಖಾ, ಸಾಧುಕೋಕಿಲ,ಕಡ್ಡಿಪುಡಿ ಚಂದ್ರು, ದೀಪಕ್ ಶೆಟ್ಟಿ, ದಿನೇಶ್ ಮಂಗಳೂರು, ಶೋಭಿತ್, ಜೀವನ್, ಹನುಮಂತೇ ಗೌಡ, ಮೋಹನ್ ಜುನೇಜಾ ಮುಂತಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
“ರಾಮು ಫಿಲಂಸ್’ ಬ್ಯಾನರ್‌ನಲ್ಲಿ ನಿರ್ಮಾಪಕ ರಾಮು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಎಲ್ಲ ಅಂದುಕೊಂಡಂತೆ ನಡೆದರೆ, “ಅರ್ಜುನ್ ಗೌಡ’ ಚಿತ್ರದಲ್ಲಿ ಪ್ರಜ್ವಲ್ ಆ್ಯಕ್ಷನ್ ಕಮಾಲ್ ಅನ್ನು ಹೊಸ ವರ್ಷದ ಆರಂಭದಲ್ಲಿ ತೆರೆಮೇಲೆ ನೋಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.