ಗತ ವೈಭವ ನಾಯಕಿ ಆಶಿಕಾ ರಂಗನಾಥ್
Team Udayavani, Aug 4, 2022, 12:47 PM IST
ಸಿಂಪಲ್ ಸುನಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ಗತ ವೈಭವ’ ಸಿನಿಮಾದ ಕೆಲಸಗಳು ಭರದಿಂದ ನಡೆಯುತ್ತಿದೆ. ಈಗಾಗಲೇ “ಗತ ವೈಭವ’ ಸಿನಿಮಾದ 35%ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಕೊಡಗು, ದೇವರಾಯನ ದುರ್ಗ, ತುಮಕೂರು ಮತ್ತು ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಇದೀಗ “ಗತ ವೈಭವ’ ಸಿನಿಮಾದ ಬಗ್ಗೆ ಚಿತ್ರತಂಡದ ಕಡೆಯಿಂದ ಹೊಸ ಅಪ್ಡೇಟ್ ಒಂದು ಹೊರಬಿದ್ದಿದೆ. ಅದೇನೆಂದರೆ, “ಗತ ವೈಭವ’ ಸಿನಿಮಾದಲ್ಲಿ ನಾಯಕಿಯಾಗಿ ಆಶಿಕಾ ರಂಗನಾಥ್ ಕಾಣಿಸಿ ಕೊಳ್ಳುತ್ತಿದ್ದಾರೆ.
ಹೌದು, “ಗತ ವೈಭವ’ ಸಿನಿಮಾದಲ್ಲಿ ನವ ನಾಯಕ ನಟ ದುಶ್ಯಂತ್ ಅವರೊಂದಿಗೆ ತೆರೆಮೇಲೆ ಆಶಿಕಾ ರಂಗನಾಥ್ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಫ್ಯಾಂಟಸಿ ಮತ್ತು ರೊಮ್ಯಾಂಟಿಕ್ -ಕಾಮಿಡಿ ಕಥಾಹಂದರದ “ಗತ ವೈಭವ’ ಸಿನಿಮಾದಲ್ಲಿ ನಾಯಕ ದುಶ್ಯಂತ್ ಪೈರೆಟ್ಸ್ ಮತ್ತು ಪೊರ್ಚುಗೀಸ್ ಲುಕ್‌ನ ಡಬಲ್ ಶೇಡ್ ಪಾತ್ರದಲ್ಲಿ ಕಾಣಿಸಿಕೊಂಡರೆ, ನಾಯಕಿ ಆಶಿಕಾ ಸಿನಿಮಾದಲ್ಲಿ ದೇವಕನ್ಯೆಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ಈಗಾಗಲೇ ಸದ್ದಿಲ್ಲದೆ “ಗತ ವೈಭವ’ ಚಿತ್ರತಂಡ ಸೇರಿಕೊಂಡಿರುವ ಆಶಿಕಾ, ಕಳೆದ ಕೆಲ ದಿನಗಳಿಂದ “ಗತ ವೈಭವ’ ಚಿತ್ರೀಕರಣದಲ್ಲೂ ಪಾಲ್ಗೊಂಡಿದ್ದಾರೆ. ಇನ್ನು “ಗತ ವೈಭವ’ ಸಿನಿಮಾದಲ್ಲಿ ಅಶಿಕಾ ರಂಗನಾಥ್ ಅಭಿನಯಿಸುತ್ತಿರುವ ದೇವಕನ್ಯೆ ಲುಕ್ ಹೇಗಿರಲಿದೆ ಅನ್ನೋ ಕುತೂಹಲಕ್ಕೆ ಇಂದು ಚಿತ್ರತಂಡ ಉತ್ತರ ನೀಡಲಿದೆ. ನಾಯಕಿಯ ಅನಾವರಣ ದೃಶ್ಯ ತುಣುಕು ಇಂದು “ಸುನಿ ಸಿನಿಮಾಸ್’ ಯು-ಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಲಿದ್ದು, ಆಶಿಕಾ ಲುಕ್ ರಿವೀಲ್ ಆಗಲಿದೆ.
“ಸುನಿ ಸಿನಿಮಾಸ್’ ಬ್ಯಾನರ್‌ನಲ್ಲಿ ಸಿಂಪಲ್ ಸುನಿ, ದೀಪಕ್ ಜಂಟಿಯಾಗಿ ನಿರ್ಮಿಸುತ್ತಿರುವ “ಗತ ವೈಭವ’ ಸಿನಿಮಾಕ್ಕೆ ವಿಲಿಯಂ ಡೇವಿಡ್ ಛಾಯಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡ ಸ್ಯಾಂಡಿ ಸಂಗೀತ ಸಂಯೋಜನೆಯಿದೆ.
ಇನ್ನು ತಮ್ಮ ಹೊಸ “ದೇವಕನ್ಯೆ’ಯ ಪಾತ್ರದ ಬಗ್ಗೆ ಆಶಿಕಾ ರಂಗನಾಥ್ ಕೂಡ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಎಲ್ಲ ಅಂದುಕೊಂಡಂತೆ ನಡೆದರೆ, ಈ ವರ್ಷಾಂತ್ಯದೊಳಗೆ “ಗತ ವೈಭವ’ ತೆರೆಗೆ ಬರುವ ಯೋಚನೆಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.