‘ಕಾಕ್ಟೇಲ್’ಗೆ ಸಾಥ್ ನೀಡಿದ ಆಶಿಕಾ ರಂಗನಾಥ್
Team Udayavani, Nov 17, 2022, 4:33 PM IST
“ವಿಜಯಲಕ್ಷ್ಮೀ ಕಂಬೈನ್ಸ್’ ಬ್ಯಾನರ್‌ನಲ್ಲಿ ಡಾ. ಶಿವಪ್ಪ ನಿರ್ಮಿಸಿರುವ “ಕಾಕ್ಟೇಲ್’ ಸಿನಿಮಾ ತೆರೆಗೆ ಬರಲು ಸಿದ್ಧವಾಗುತ್ತಿದೆ. ಸದ್ಯ ನಿಧಾನವಾಗಿ “ಕಾಕ್ಟೇಲ್’ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇತ್ತೀಚೆಗೆ ಸಿನಿಮಾದಲ್ಲಿ ಅರ್ಮಾನ್ ಮಲ್ಲಿಕ್ ಹಾಡಿರುವ “ಮಳೆ ಮೋಡದ ಅನುರಾಗದ…’ ಎಂಬ ಗೀತೆಯನ್ನು ಹೊರತಂದಿದೆ. ನಟಿ ಆಶಿಕಾ ರಂಗನಾಥ್ “ಕಾಕ್ಟೇಲ್’ ಸಿನಿಮಾದ ಈ ರೊಮ್ಯಾಂಟಿಕ್ ಹಾಡನ್ನು ಬಿಡುಗಡೆ ಮಾಡಿ ಹೊಸಬರ ತಂಡಕ್ಕೆ ಶುಭ ಹಾರೈಸಿದರು.
ಸಸ್ಪೆನ್ಸ್ ಕಂ ಕ್ರೈಂ-ಥ್ರಿಲ್ಲರ್ ಕಥಾಹಂದರ ಹೊಂದಿರುವ “ಕಾಕ್ಟೇಲ್’ ಸಿನಿಮಾಕ್ಕೆ ಶ್ರೀರಾಮ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ನವ ಪ್ರತಿಭೆಗಳಾದ ವಿರೇನ್ ಕೇಶವ್ ಮತ್ತು ಚರಿಷ್ಮಾ “ಕಾಕ್ಟೇಲ್’ ಸಿನಿಮಾದಲ್ಲಿ ಜೋಡಿಯಾಗಿ ಅಭಿನಯಿಸಿದ್ದಾರೆ.
ಉಳಿದಂತೆ ಶೋಭರಾಜ್, ರಮೇಶ್ ಪಂಡಿತ್, ಮಹಾಂತೇಶ್ ಹಿರೇಮಠ, ಶಿವಮಣಿ, ಚಂದ್ರಕಲಾ ಮೋಹನ್, ಕರಿಸುಬ್ಬು ಮೊದಲಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಚಿತ್ರಕ್ಕೆ ರವಿವರ್ಮ (ಗಂಗು) ಛಾಯಾಗ್ರಹಣ, ಮೋಹನ್ ಬಿ. ರಂಗಕಹಳೆ ಸಂಕಲನವಿದೆ. “ಕಾಕ್ಟೇಲ್’ ಸಿನಿಮಾದ ಹಾಡುಗಳಿಗೆ ಲೋಕಿ ತವಸ್ಯ ಸಂಗೀತ ಸಂಯೋಜಿಸಿದ್ದು, ಹೃದಯಶಿವ, ಸಿರಾಜ್ ಮಿಜಾರ್ ಸಾಹಿತ್ಯವಿದೆ. ಇತ್ತೀಚೆಗೆ “ಕಾಕ್ಟೇಲ್’ ಸಿನಿಮಾವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಸಿನಿಮಾಕ್ಕೆ “ಯು/ಎ’ ಪ್ರಮಾಣ ಪತ್ರ ನೀಡಿ, ಬಿಡುಗಡೆಗೆ ಅಸ್ತು ಎಂದಿದೆ.
ಸದ್ಯ ಬಿಡುಗಡೆಯಾಗಿರುವ “ಕಾಕ್ಟೇಲ್’ ಸಿನಿಮಾದ ಹಾಡುಗಳಿಗೆ ಸೋಶಿಯಲ್ ಮೀಡಿಯಾದಲ್ಲಿ ಉತ್ತಮ ಪ್ರತಿಕ್ರಿಯೆ ಸಿಗುತ್ತಿದ್ದು, ಚಿತ್ರರಂಗದ ಅನೇಕರು ಸಿನಿಮಾದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ. ಇದೇ ಖುಷಿಯಲ್ಲಿರುವ ಚಿತ್ರತಂಡ ಡಿಸೆಂಬರ್ ವೇಳೆಗೆ “ಕಾಕ್ಟೇಲ್’ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
America: ಎಚ್-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!
Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ಕೆಇಎ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್‌ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.