Ashika Ranganath; ಬ್ಯಾಕ್ ಟು ಬ್ಯಾಕ್ ಎರಡು ಸಿನಿಮಾಗಳು ರಿಲೀಸ್
Team Udayavani, Apr 4, 2024, 3:05 PM IST
ಆಶಿಕಾ ರಂಗನಾಥ್‌ಗೆ ಈಗ ಡಬಲ್ ಖುಷಿ. ಅದಕ್ಕೆ ಕಾರಣ ಬ್ಯಾಕ್ ಟು ಬ್ಯಾಕ್ ಸಿನಿಮಾಗಳು ಬಿಡುಗಡೆಯಾಗುತ್ತಿರುವುದು.
ಹೌದು, ಆಶಿಕಾ ರಂಗನಾಥ್ ನಟಿಸಿರುವ “ಅವತಾರ ಪುರುಷ-2′ ಚಿತ್ರ ಏಪ್ರಿಲ್ 5ಕ್ಕೆ ತೆರೆಕಂಡರೆ ಅವರ ಮತ್ತೂಂದು ಚಿತ್ರ ಏಪ್ರಿಲ್ 19ಕ್ಕೆ ತೆರೆಕಾಣುತ್ತಿದೆ. ಅದ್ಯಾವ ಚಿತ್ರ ಎಂದು ನೀವು ಕೇಳಬಹುದು. ಪಿಆರ್‌ಕೆ ಬ್ಯಾನರ್‌ನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ನಿರ್ಮಿಸಿರುವ “ಓ2′ ಎಂಬ ಚಿತ್ರದಲ್ಲಿ ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಿದ್ದಾರೆ. ಆ ಚಿತ್ರ ಕೂಡಾ ಈಗ ಬಿಡುಗಡೆಯ ಹಂತಕ್ಕೆ ಬಂದಿದ್ದು, ಏ.19ರಂದು ತೆರೆಕಾಣುತ್ತಿದೆ.
ಇತ್ತೀಚೆಗೆ “ಓ2′ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಆಶಿಕಾ, ಶ್ರದ್ಧಾ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
“ಬಹಳ ವಿಭಿನ್ನವಾದ ಕಥಾಹಂದರವನ್ನು ಹೊಂದಿರುವಂತಹ ಚಿತ್ರವಿದು. ಸಾಯುತ್ತಿರು ವವರನ್ನು ಬದುಕಿಸುವುದೇ ವೈದ್ಯರ ಆದ್ಯ ಕರ್ತವ್ಯ ಎಂದು ನಂಬುವ ಶ್ರದ್ಧಾ ತನ್ನ ಸಂಶೋಧನೆಯ ಫಲವಾದ ಓ2 ಎಂಬ ಡ್ರಗ್ ಮೂಲಕ ಸಾವು-ಬದುಕಿನ ಮಧ್ಯೆ ಹೋರಾಡುತ್ತಿರು ವವರನ್ನು ಬದುಕಿಸುವ ಪ್ರಯತ್ನಕ್ಕೆ ಮುಂದಾಗುತ್ತಾಳೆ. ಈ ಹಾದಿಯಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಾಳೆ. ಈ ಎಲ್ಲಾ ಅಡೆತಡೆಗಳನ್ನು ಮೀರಿ ಗುರಿ ತಲುಪಲು ಶ್ರದ್ಧಾಳಿಗೆ ಸಾಧ್ಯ ವಾಗು ವುದೋ ಇಲ್ಲವೋ ಎಂಬುದನ್ನು ಪ್ರೇಕ್ಷಕರು ಚಿತ್ರಮಂದಿರದಲ್ಲಿ ನೋಡಿ ತಿಳಿದುಕೊಳ್ಳಬೇಕಿದೆ. ಒಟ್ಟಾರೆ ಈ ಚಿತ್ರ ಮನರಂಜನೆ, ವಿಜ್ಞಾನ, ಪ್ರೀತಿ, ಅನಿರೀಕ್ಷಿತ ತಿರುವುಗಳ ಸಮಾಗಮ ಎಂದರೆ ಉತ್ಪ್ರೇಕ್ಷೆಯಲ್ಲ ಎನ್ನುವುದು ಚಿತ್ರತಂಡದ ಮಾತು. ಇದೊಂದು ಒಂದು ಕುತೂಹಲಕಾರಿ ಮೆಡಿಕಲ್ ಥ್ರಿಲ್ಲರ್ ಚಿತ್ರ. ಈ ಕಥೆಯು ಕೇವಲ ಥ್ರಿಲ್ಲರ್ ಅಂಶಗಳನ್ನಷ್ಟೇ ಅಲ್ಲದೆ, ಪ್ರೀತಿ-ಪ್ರೇಮದ ಅಂಶಗಳನ್ನೂ ಒಳಗೊಂಡಿರುವುದು ವಿಶೇಷ ಸಂಗತಿ. ಹಾಗಾಗಿ ಈ ಚಿತ್ರವನ್ನು ಲವ್ ಥ್ರಿಲ್ಲರ್ ಎಂದು ಕೂಡ ಪರಿಗಣಿಸಬಹುದು ಎನ್ನಲು ತಂಡ ಮರೆಯುವುದಿಲ್ಲ.
ಚಿತ್ರದಲ್ಲಿ ಆಶಿಕಾ ರಂಗನಾಥ್, ಪ್ರವೀಣ್ ತೇಜ್, ರಾಘವ್ ನಾಯಕ್, ಸಿರಿ ರವಿಕುಮಾರ್, ಪ್ರಕಾಶ್ ಬೆಳವಾಡಿ ಮುಖ್ಯ ಭೂಮಿಕೆಯಲ್ಲಿದ್ದಾರೆ. ಚಿತ್ರವನ್ನು ಪ್ರಶಾಂತ್ ರಾಜ್ ಮತ್ತು ಚಿತ್ರದ ನಾಯಕ ರಾಘವ್ ನಾಯಕ್ ನಿರ್ದೇಶಿಸಿದ್ದಾರೆ.
ಇನ್ನು, ಆಶಿಕಾ ಈಗ ಕೇವಲ ಕನ್ನಡ ನಟಿಯಾಗಿ ಉಳಿದಿಲ್ಲ. ಕನ್ನಡದ ಜೊತೆಗೆ ತೆಲುಗು, ತಮಿಳಿನಲ್ಲೂ ಬಿಝಿ ಯಾಗುತ್ತಿದ್ದಾರೆ. ಅಲ್ಲಿನ ಸ್ಟಾರ್ ನಟರ ಚಿತ್ರಗಳಲ್ಲೂ ಆಶಿಕಾಗೆ ಅವಕಾಶ ಸಿಗುತ್ತಿದೆ. ಸದ್ಯ ಆಶಿಕಾ ಕೂಡಾ ಕನ್ನಡಕ್ಕಿಂತ ಹೆಚ್ಚು ಪರಭಾಷೆಯತ್ತ ಗಮನ ಹರಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.