ಧ್ವಜ ಹಾರಿಸಿದ ಅಶೋಕ್ ಕಶ್ಯಪ್
Team Udayavani, Feb 12, 2018, 7:00 PM IST
ಜಗ್ಗೇಶ್ ಅಭಿನಯದ “ಲಿಫ್ಟ್ ಕೊಡ್ಲ’ ಚಿತ್ರ ನಿರ್ದೇಶಿಸಿದ್ದ ಅಶೋಕ್ ಕಶ್ಯಪ್ ಅವರು ಸದ್ದಿಲ್ಲದೆಯೇ ಒಂದು ಸಿನಿಮಾ ಮಾಡು ಮುಗಿಸಿದ್ದಾರೆ. ಆ ಚಿತ್ರಕ್ಕೀಗ ಹಿನ್ನೆಲೆ ಸಂಗೀತದ ಕೆಲಸ ನಡೆಯುತ್ತಿದೆ. ಅಂದಹಾಗೆ, ಅಶೋಕ್ ಕಶ್ಯಪ್ ನಿರ್ದೇಶನದ ಚಿತ್ರಕ್ಕೆ “ಧ್ವಜ’ ಎಂದು ನಾಮಕರಣ ಮಾಡಲಾಗಿದೆ. ಸಿಬಿಜೆ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಸುಧಾ ಬಸವೇಗೌಡ ಅವರು ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಪ್ರಿಯಾಮಣಿ ನಾಯಕಿಯಾಗಿ ನಟಿಸಿದ್ದಾರೆ.
ರವಿ ನಾಯಕರಾಗಿ ಅಭಿನಯಿಸಿದ್ದಾರೆ. ಅವರಿಲ್ಲಿ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಅಶೋಕ್ ಕಶ್ಯಪ್ ನಿರ್ದೇಶನದ ಜತೆಗೆ ಛಾಯಾಗ್ರಹಣವನ್ನೂ ಮಾಡಿದ್ದಾರೆ. ಇದೊಂದು ರಾಜಕೀಯ, ಲವ್‌ಸ್ಟೋರಿ ಮತ್ತು ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿದೆ. ಬೆಂಗಳೂರು, ಮೈಸೂರು ಮತ್ತು ಮೇಲುಕೋಟೆಯಲ್ಲಿ ಸುಮಾರು 80 ದಿನಗಳ ಕಾಲ ಚಿತ್ರೀಕರಣ ಮಾಡಿದ್ದಾರೆ.
ಚಿತ್ರದಲ್ಲಿ ದಿವ್ಯಾ ಉರುಡುಗ, ಟಿ.ಎನ್. ಸೀತಾರಾಂ, ವೀಣಾಸುಂದರ್, ತಬಲನಾಣಿ, ಬಲ, ಮಂಡ್ಯ ರವಿ, ಸುಂದರರಾಜ್ ಸೇರಿದಂತೆ ಇನ್ನು ಅನೇಕ ಕಲಾವಿದರು ನಟಿಸಿದ್ದಾರೆ. ಚಿತ್ರದ ಐದು ಹಾಡುಗಳಿಗೆ “ಕಬಾಲಿ’ ಚಿತ್ರಕ್ಕೆ ಸಂಗೀತ ನೀಡಿದ್ದ ಸಂತೋಷ್ ನಾರಾಯಣನ್ ಸಂಗೀತ ನೀಡಿದ್ದಾರೆ.
ಕೆ.ಕಲ್ಯಾಣ್, ಕವಿರಾಜ್, ರವಿ, ಚಂದನ್ ಹಾಗೂ ಮಂಜು ಮಾಂಡವ್ಯ ಗೀತೆಗಳನ್ನು ರಚಿಸಿದ್ದಾರೆ. ರವಿಚಂದ್ರನ್ ಸಂಕಲನ ಮಾಡಿದರೆ, ಕಲೈ, ತ್ರಿಭುವನ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಮಾಸ್ ಮಾದ, ಜಾಲಿ ಬಾಸ್ಟಿನ್ ಸಾಹಸ ನಿರ್ದೇಶನವಿದೆ. ಪ್ರಕಾಶ್ ಅವರ ಕಲಾ ನಿರ್ದೇಶನ ಚಿತ್ರಕ್ಕಿದೆ. ಮಂಜು ಮಾಂಡವ್ಯ ಸಂಭಾಷಣೆ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.