ಹಿಂದೆಂದೂ ಕಾಣದ ಸಿನಿಮಾ ಅನುಭವ!: ಪುನೀತ್ ಡ್ರೀಮ್ ಪ್ರಾಜೆಕ್ಟ್ ಬಗ್ಗೆ ಅಶ್ವಿನಿ ಟ್ವೀಟ್
Team Udayavani, Dec 5, 2021, 4:32 PM IST
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಡ್ರೀಮ್ ಪ್ರಾಜೆಕ್ಟ್ ಡಾಕ್ಯುಮೆಂಟರಿಯ ಟೈಟಲ್ ಟೀಸರ್ ಬಿಡುಗಡೆಯ ಬಗ್ಗೆ ದಿನಾಂಕ ನಿಗದಿಯಾಗಿದೆ. ಡಿ.6ರಂದು ಇದರ ಟೈಟಲ್ ಟೀಸರ್ ಬಿಡುಗಡೆಯಾಗಲಿದೆ. ಇದೀಗ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಮತ್ತಷ್ಟು ಮಾಹಿತಿ ನೀಡಿದ್ದು, ಡಿ.6ರಂದು ಬೆಳಗ್ಗೆ 10 ಗಂಟೆಗೆ ಪಿಆರ್ ಕೆ ಸ್ಟುಡಿಯೋದ ಯುಟ್ಯೂಬ್ ಚಾನೆಲ್ ನಲ್ಲಿ ಟೈಟಲ್ ಟೀಸರ್ ಬಿಡುಗಡೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅಶ್ವಿನಿ, “ಹಿಂದೆಂದೂ ಕಾಣದ ಸಿನಿಮಾ ಅನುಭವ! ನಿಮ್ಮ ಮುಂದೆ ನಾಳೆ ಪಿಆರ್ ಕೆ ಸ್ಟುಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ” ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ:ನಟಿ ಜಾಕ್ವೆಲಿನ್ ಗೆ 10 ಕೋಟಿ ರೂ ಮೌಲ್ಯದ ಉಡುಗೊರೆ ನೀಡಿದ ಸುಕೇಶ್: ವರದಿ
ಎಲ್ಲ ಅಂದುಕೊಂಡಂತೆ ನಡೆದಿದ್ದರೆ, ಇದೇ ನವೆಂಬರ್ 1ರಂದು ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ತಮ್ಮ “ಪಿಆರ್‌ಕೆ ಪ್ರೊಡಕ್ಷನ್ಸ್ ನಿಂದ ಮಹತ್ವದ ಘೋಷಣೆಯೊಂದನ್ನು ನೀಡುವ ಸಿದ್ಧತೆಯಲ್ಲಿದ್ದರು. ತಮ್ಮ ಪ್ರೊಡಕ್ಷನ್ಸ್ ನಲ್ಲಿ ಕರ್ನಾಟಕದ ಬಗ್ಗೆ ಒಂದು ಡಾಕ್ಯುಮೆಂಟರಿ ಮಾಡಿದ್ದ ಪುನೀತ್ ರಾಜಕುಮಾರ್, ತಮ್ಮ ಹೊಸ ಯೋಜನೆಯ ಅಧಿಕೃತ ಘೋಷಣೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿಯೂ ಮಾಹಿತಿಯನ್ನು ಹಂಚಿಕೊಂಡಿದ್ದರು. “ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ’ ಎಂದು ಪುನೀತ್ ಪೋಸ್ಟ್ ಮಾಡಿದ್ದರು.
ಹಿಂದೆಂದೂ ಕಾಣದ ಸಿನಿಮಾ ಅನುಭವ!
ನಿಮ್ಮ ಮುಂದೆ ನಾಳೆ @PRKAudio YouTube channelನಲ್ಲಿ.A cinematic experience like never before!
Releasing tomorrow on PRK Audio YouTube channel.@PuneethRajkumar @amoghavarsha @AJANEESHB @PRK_Productions #mudskipper pic.twitter.com/JoSCSDahQI— Ashwini Puneeth Rajkumar (@ashwinipuneet) December 5, 2021
ಆದರೆ ನಂತರ ನಡೆದ ವಿಧಿಯಾಟ ಬೇರೆಯದೇ ಆಗಿತ್ತು. ಪುನೀತ್ ರಾಜಕುಮಾರ್ ಅವರ ಕನಸಿನ ಘೋಷಣೆಗೂ ಮುನ್ನವೇ ಅಕಾಲಿಕ ಮೃತ್ಯು ಅವರನ್ನು ತನ್ನತ್ತ ಕರೆಸಿಕೊಂಡಿತ್ತು. ಪುನೀತ್ ರಾಜಕುಮಾರ್ ದೈಹಿಕವಾಗಿ ಇಲ್ಲದಿದ್ದರೂ, ಅವರ ಕನಸುಗಳನ್ನು ನನಸು ಮಾಡಲು ಪುನೀತ್ ರಾಜಕುಮಾರ್ ಕುಟುಂಬ ಮತು “ಪಿಆರ್‌ಕೆ ಪ್ರೊಡಕ್ಷನ್ಸ್’ ಟೊಂಕಕಟ್ಟಿ ನಿಂತಿದೆ.
ಅಮೋಘ ವರ್ಷ ಜತೆ ಸೇರಿ ಪುನೀತ್ ರಾಜಕುಮಾರ್ “ವೈಲ್ಡ್ ಕರ್ನಾಟಕ’ ಡಾಕ್ಯುಮೆಂಟರಿ ಸಿದ್ಧಪಡಿಸಿದ್ದರು. ರಾಜ್ಯದ ನಾನಾ ಭಾಗಗಳಲ್ಲಿ ಇದನ್ನು ಶೂಟ್ ಮಾಡಲಾಗಿತ್ತು. ಈ ಡಾಕ್ಯುಮೆಂಟರಿಯಲ್ಲಿ ಪುನೀತ್ ಕೂಡ ಇದರಲ್ಲಿ ಕಾಣಿಸಿಕೊಂಡಿದ್ದಾರೆ. “ಪಿಆರ್‌ಕೆ ಪ್ರೊಡಕ್ಷನ್ಸ್’ನಲ್ಲಿ ನಿರ್ಮಾಣವಾಗಿರುವ ಕರ್ನಾಟಕದ ಬಗ್ಗೆ ಇರುವ ಡಾಕ್ಯುಮೆಂಟರಿಯ ಟೈಟಲ್ ಟೀಸರ್ ಡಿ. 6ಕ್ಕೆ ರಿಲೀಸ್ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ
Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ
Pegasus spyware ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸಲಿ: ಸುರ್ಜೇವಾಲಾ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.