ಆಗಸ್ಟ್‌ನಲ್ಲಿ ಐದು ಭಾಷೆಯಲ್ಲಿ ಅವನೇ ಶ್ರೀಮನ್ನಾರಾಯಣ
ಎರಡೂವರೆ ವರ್ಷಗಳ ಬಳಿಕ ರಕ್ಷಿತ್ ಶೆಟ್ಟಿ ಚಿತ್ರ
Team Udayavani, Apr 10, 2019, 3:00 AM IST
ಬರೋಬ್ಬರಿ 200ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರೀಕರಣ ಮಾಡಿರುವ “ಅವನೇ ಶ್ರೀಮನ್ನಾರಾಯಣ’ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಹಾಗಂತ ಈ ತಿಂಗಳು ಅಥವಾ ಮುಂದಿನ ತಿಂಗಳು ಬಿಡುಗಡೆಯಲ್ಲ. ಚಿತ್ರ ಆಗಸ್ಟ್‌ನಲ್ಲಿ ತೆರೆಕಾಣಲಿದೆ. ಈ ಮೂಲಕ ದೊಡ್ಡ ಗ್ಯಾಪ್‌ನ ಬಳಿಕ ರಕ್ಷಿತ್ ಶೆಟ್ಟಿಯ ಚಿತ್ರವೊಂದು ತೆರೆಕಂಡಂತಾಗುತ್ತದೆ.
“ಕಿರಿಕ್ ಪಾರ್ಟಿ’ ಚಿತ್ರದ ಯಶಸ್ಸಿನ ಬಳಿಕ ರಕ್ಷಿತ್ ಶೆಟ್ಟಿಯ ಯಾವುದೇ ಚಿತ್ರ ಬಿಡುಗಡೆಯಾಗಿಲ್ಲ. ಈಗ “ಅವನೇ ಶ್ರೀಮನ್ನಾರಾಯಣ’ ಚಿತ್ರ ಬಿಡುಗಡೆಯಾಗುತ್ತಿದೆ. ಆಗಸ್ಟ್ ಎರಡನೇ ವಾರ ಅಥವಾ ಕೊನೆಯ ವಾರ ತೆರೆಕಾಣೋದು ಬಹುತೇಕ ಪಕ್ಕಾ ಆಗಿದೆ. ಅದಕ್ಕೆ ಬೇಕಾದ ಸಿದ್ಧತೆಯಲ್ಲಿ ಚಿತ್ರತಂಡ ತೊಡಗಿದೆ. “ಅವನೇ ಶ್ರೀಮನ್ನಾರಾಯಣ’ ಚಿತ್ರ ಬರೋಬ್ಬರಿ ಐದು ಭಾಷೆಯಲ್ಲಿ ಬಿಡುಗಡೆಯಾಗುತ್ತಿದೆ.
ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಚಿತ್ರ ತೆರೆಕಾಣುತ್ತಿದೆ. ಮೊದಲ ಬಾರಿಗೆ ರಕ್ಷಿತ್ ಶೆಟ್ಟಿ ನಟನೆಯ ಚಿತ್ರ ಈ ಮಟ್ಟದಲ್ಲಿ ಬಿಡುಗಡೆಯಾಗುತ್ತಿದ್ದು, ಚಿತ್ರತಂಡ ಸಹಜವಾಗಿಯೇ ಎಕ್ಸೆ„ಟ್ ಆಗಿದೆ. ಚಿತ್ರದಲ್ಲಿ ರಕ್ಷಿತ್ ಶೆಟ್ಟಿಗೆ ನಾಯಕಿಯಾಗಿ ಸಾನ್ವಿ ನಟಿಸಿದ್ದಾರೆ. “ಅವನೇ ಶ್ರೀಮನ್ನಾರಾಯಣ’ ಚಿತ್ರದ ಚಿತ್ರೀಕರಣ ಬಹುತೇಕ ಸೆಟ್‌ನಲ್ಲಿ ನಡೆದಿದೆ.
ಅದಕ್ಕೆ ಕಾರಣ ಕಥೆ. ಕಥೆಗೆ ಬೇಕಾದ ವಾತಾವರಣ ಸೃಷ್ಟಿ ಮಾಡುವ ಸಲುವಾಗಿ ಅದ್ಧೂರಿ ಸೆಟ್ ಹಾಕಿ ಚಿತ್ರೀಕರಿಸಲಾಗಿದೆ. ಇನ್ನು, ಐದು ಭಾಷೆಯಲ್ಲೂ ಚಿತ್ರ ಪರಿಪೂರ್ಣವಾಗಿ ಬರಬೇಕೆಂಬ ಕಾರಣಕ್ಕೆ ಆ ಭಾಷೆಯಲ್ಲಿ ಪಳಗಿರುವವರಿಂದ ಸ್ಕ್ರಿಪ್ಟ್ ಸಿದ್ಧಪಡಿಸಿ, ಡಬ್ಬಿಂಗ್ ಮಾಡಿಸಲಾಗುತ್ತಿದೆ. ಜೊತೆಗೆ ಎಲ್ಲಾ ಭಾಷೆಗಳಲ್ಲೂ ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡುವ ಯೋಚನೆ ಕೂಡಾ ಚಿತ್ರತಂಡಕ್ಕಿದೆ. ಈ ಚಿತ್ರವನ್ನು ಸಚಿನ್ ನಿರ್ದೇಶಿಸಿದ್ದು, ಪುಷ್ಕರ್ ಹಾಗೂ ಪ್ರಕಾಶ್ ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.