ವೇಮಗಲ್ ಸಸ್ಪೆನ್ಸ್ ‘ಆವರ್ತ’

Team Udayavani, Nov 3, 2022, 5:03 PM IST

avartha kannada movie

ಕನ್ನಡ ಚಿತ್ರರಂಗದಲ್ಲಿ “ತುಳಸಿ ದಳ’ ಮೊದಲಾದ ಸಿನಿಮಾಗಳನ್ನು ಕೊಟ್ಟ ಹಿರಿಯ ನಿರ್ದೇಶಕ ವೇಮಗಲ್‌ ಜಗನ್ನಾಥ್‌ ರಾವ್‌, ಈ ಬಾರಿ “ಆವರ್ತ’ ಎಂಬ ಮತ್ತೂಂದು ಸಸ್ಪೆನ್ಸ್‌-ಥ್ರಿಲ್ಲರ್‌ ಸಿನಿಮಾವನ್ನು ತೆರೆಗೆ ತರುವ ತಯಾರಿಯಲ್ಲಿದ್ದಾರೆ. ಈಗಾಗಲೇ ಸದ್ದಿಲ್ಲದೆ ತನ್ನ ಬಹುತೇಕ ಕೆಲಸಗಳನ್ನು ಪೂರ್ಣಗೊಳಿಸಿರುವ “ಆವರ್ತ’ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದ್ದು, ಇತ್ತೀಚೆಗೆ ಸಿನಿಮಾದ ಹಾಡುಗಳು ಮತ್ತು ಟ್ರೇಲರ್‌ ಬಿಡುಗಡೆಯಾಯಿತು.

ನಟಿ ತಾರಾ ಅನುರಾಧಾ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ. ಮ ಹರೀಶ್‌ ಮೊದಲಾದ ಗಣ್ಯರ ಸಮ್ಮುಖದಲ್ಲಿ “ಆವರ್ತ’ದ ಹಾಡುಗಳು ಮತ್ತು ಟ್ರೇಲರ್‌ ಹೊರಬಂದಿತು. ಇದೇ ವೇಳೆ ಮಾತನಾಡಿದ ನಟಿ ತಾರಾ ಅನುರಾಧಾ, “ನನ್ನ ಮೊದಲ ಸಿನಿಮಾ ತುಳಸಿದಳ. ನಿರ್ದೇಶಕ ವೇಮಗಲ್‌ ಜಗನ್ನಾಥ್‌ ರಾವ್‌ ನನ್ನನ್ನು ಗುರುತಿಸಿ ಆ ಸಿನಿಮಾದಲ್ಲಿ ಅವಕಾಶ ನೀಡಿದ್ದರು. ನನ್ನ ಗುರುಗಳು ನಿರ್ದೇಶಿಸಿರುವ “ಆವರ್ತ’ ಸಿನಿಮಾಕ್ಕೆ ಒಳ್ಳೆಯದಾಗಲಿ’ ಎಂದು ಶುಭ ಹಾರೈಸಿದರು.

ಸಿನಿಮಾದ ಬಗ್ಗೆ ಮಾತನಾಡಿದ ನಿರ್ದೇಶಕ ವೇಮಗಲ್‌ ಜಗನ್ನಾಥ್‌ ರಾವ್‌, “ಯುವಕನೊಬ್ಬನಿಗೆ ಕಥೆ ಬರೆಯುವ ಹವ್ಯಾಸ. ಕಾಲ್ಪನಿಕ ಕಥೆ ಬರೆಯುವ ಬದಲಾಗಿ ನೈಜಘಟನೆ ಕುರಿತು ಕಥೆ ಬರೆಯುವ ಸಲುವಾಗಿ ಆ ಯುವಕ ಹೊಸ ಸ್ಥಳವೊಂದಕ್ಕೆ ಹೋಗುತ್ತಾನೆ. ಅಲ್ಲಿಗೆ ಹೋದಾಗ ಏನೆಲ್ಲಾ ಆಗುತ್ತದೆ? ಎಂಬುದು ಸಿನಿಮಾದ ಕಥಾಹಂದರ’ ಎಂದು ವಿವರಣೆ ನೀಡಿದರು.

“ಆವರ್ತ’ ಸಿನಿಮಾದಲ್ಲಿ ಕಥಾನಾಯಕ  ನಾಗಿ ಜಯಚಂದ್ರ ಅಭಿನಯಿಸಿದ್ದು, ನಾಯಕಿಯಾಗಿ ನಯನಾ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಹಿರಿಯ ನಟ ಶಿವರಾಮ್‌, ಧನ್ವಿತ್‌ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಸಿನಿಮಾದ ಮೂರು ಸಾಹಸ ಸನ್ನಿವೇಶಗಳಿಗೆ ಥ್ರಿಲ್ಲರ್‌ ಮಂಜು ಸಾಹಸ ಸಂಯೋಜಿಸಿದ್ದಾರೆ. ಚಿತ್ರದ ಹಾಡುಗಳಿಗೆ ಅತಿಶಯ್‌ ಜೈನ್‌ ಸಂಗೀತ ಸಂಯೋಜನೆಯಿದೆ. ಮಲ್ಲಿಕಾರ್ಜುನ್‌ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Maryade Prashne movie trailer out

Maryade Prashne: ಪ್ರಶ್ನೆ ಕೇಳಲು ಬಂದ ಮರ್ಯಾದಸ್ತರು

ShivaRajkumar: ʼಘೋಸ್ಟ್‌ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್‌ ರಿವೀಲ್

ShivaRajkumar: ʼಘೋಸ್ಟ್‌ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್‌ ರಿವೀಲ್

5

Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’

BBK11: ಮಣ್ಣಿನಲ್ಲಿ ಕಳೆದು ಹೋದ ಚೈತ್ರಾಳ ಉಂಗುರ; ದೈವಕ್ಕೆ ಮೊರೆ ಹೋದ ಬಳಿಕ ಪತ್ತೆ

BBK11: ಮಣ್ಣಿನಲ್ಲಿ ಕಳೆದು ಹೋದ ಚೈತ್ರಾಳ ಉಂಗುರ; ದೈವಕ್ಕೆ ಮೊರೆ ಹೋದ ಬಳಿಕ ಪತ್ತೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.