ಬಾಹುಬಲಿ 2ಗೆ ವಿರೋಧ, ಕಟ್ಟಪ್ಪ ಕ್ಷಮೆಗೆ ಪಟ್ಟು;28ರಂದು ಕರ್ನಾಟಕ ಬಂದ್
Team Udayavani, Apr 19, 2017, 3:35 PM IST
ಬೆಂಗಳೂರು: ಬಾಹುಬಲಿ ಚಿತ್ರದ ಕಟ್ಟಪ್ಪ ಪಾತ್ರಧಾರಿ ನಟ ಸತ್ಯರಾಜ್ ಕನ್ನಡಿಗರ ಭಾವನೆಗೆ ಧಕ್ಕೆ ತಂದಿದ್ದಾರೆ. ಸತ್ಯರಾಜ್ ಕ್ಷಮೆ ಕೇಳುವವರೆಗೂ ರಾಜ್ಯದಲ್ಲಿ ಬಾಹುಬಲಿ 2 ಬಿಡುಗಡೆಗೆ ಅವಕಾಶ ಕೊಡಲ್ಲ ಎಂದು ಪಟ್ಟು ಹಿಡಿದಿರುವ ಕನ್ನಡ ಪರ ಸಂಘಟನೆಗಳು ಏಪ್ರಿಲ್ 28ರಂದು ಕರ್ನಾಟಕ ಬಂದ್ ಮಾಡುವುದಾಗಿ ಪುನರುಚ್ಚರಿಸಿವೆ.
ಬುಧವಾರ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ವಾಟಾಳ್ ನಾಗರಾಜ್, ನಟ ಸತ್ಯರಾಜ್ ಹುಚ್ಚನ ರೀತಿ ಮಾತನಾಡಿದ್ದಾರೆ. ನಮ್ಮ ಹೋರಾಟ ಏನಿದ್ರೂ ಸತ್ಯರಾಜ್ ವಿರುದ್ಧ ಮಾತ್ರ ಎಂದು ತಿಳಿಸಿದ್ದಾರೆ.
ಏಪ್ರಿಲ್ 28ರಂದು ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ರಾಲಿ ನಡೆಸಲಾಗುವುದು ಎಂದು ವಾಟಾಳ್ ವಿವರಿಸಿದರು.
ಬಾಹುಬಲಿ ಚಿತ್ರದ ನಿರ್ಮಾಪಕರೇ ವಿತರಣೆ ಮಾಡುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ವಿತರಣೆ ಹಕ್ಕು ಇದುವರೆಗೂ ಯಾರೂ ತೆಗೆದುಕೊಂಡಿಲ್ಲ. ಅದಕ್ಕಾಗಿ ವಿತರಕರಿಗೆ ಧನ್ಯವಾದ ತಿಳಿಸುವುದಾಗಿ ಸಾರಾ ಗೋವಿಂದು ಹೇಳಿದರು.
ಬಾಹುಬಲಿ ಬಿಡುಗಡೆಗೆ ಪರ, ವಿರೋಧ:
ಬಾಹುಬಲಿ ಚಿತ್ರ ಬಿಡುಗಡೆಗೆ ಕರ್ನಾಟಕದಲ್ಲಿ ಅವಕಾಶ ಕೊಡೋದಿಲ್ಲ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿಯಾಗಿ ವಾದ, ಪ್ರತಿವಾದ ನಡೆಯುತ್ತಿದೆ. ಅಲ್ಲದೇ ಬಾಹುಬಲಿ ಚಿತ್ರದ ನಿರ್ದೇಶಕ ಎಸ್.ಎಸ್.ರಾಜಮೌಳಿ ಕೂಡಾ ಬಾಹುಬಲಿ 2 ಚಿತ್ರದ ಬಿಡುಗಡೆಗೆ ಅವಕಾಶ ಕೊಡೋದಿಲ್ಲ ಎಂದು ಹೇಳುವುದು ಸರಿಯಲ್ಲ. ಅಲ್ಲದೇ ಸತ್ಯರಾಜ್ ಅವರು 9 ವರ್ಷಗಳ ಹಿಂದೆ ನೀಡಿರುವ ಹೇಳಿಕೆ ಬಗ್ಗೆ ಈಗ ವಿವಾದ ಎಬ್ಬಿಸಿರುವುದು ಯಾಕೆ ಎಂದು ಪ್ರಶ್ನಿಸಿದ್ದರು. 9 ವರ್ಷಗಳಲ್ಲಿ ಸತ್ಯರಾಜ್ ಅವರ 30ಕ್ಕೂ ಅಧಿಕ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆಯಾಗಿತ್ತು, ಬಾಹುಬಲಿ ಮೊದಲ ಭಾಗ ಬಿಡುಗಡೆಯಾದಾಗಲೂ ವಿವಾದವಾಗಿಲ್ಲ, ಆದರೆ ಈಗ ಯಾಕೆ ಎಂದು ರಾಜಮೌಳಿ ತಿಳಿಸಿದ್ದರು.
ಮತ್ತೊಂದೆಡೆ ಸಾಮಾಜಿಕ ಜಾಲತಾಣದಲ್ಲಿ ಕನ್ನಡ ಪರ ಹಾಗೂ ಬಾಬುಬಲಿ ಪರ ಚರ್ಚೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.