Kannada Cinema; ಜ.26ಕ್ಕೆ ತೆರೆಗೆ ಬರಲಿದೆ ‘ಬ್ಯಾಚುಲರ್ ಪಾರ್ಟಿ’
Team Udayavani, Dec 23, 2023, 2:07 PM IST
ರಕ್ಷಿತ್ ಶೆಟ್ಟಿ ನಿರ್ಮಾಣದ “ಬ್ಯಾಚುಲರ್ ಪಾರ್ಟಿ’ ಚಿತ್ರದ ಫಸ್ಟ್‌ಲುಕ್ ಝಲಕ್ ಕೆಲವು ದಿನಗಳ ಹಿಂದಷ್ಟೇ ಬಿಡುಗಡೆಯಾಗಿ ಹಿಟ್‌ಲಿಸ್ಟ್ ಸೇರಿತ್ತು. ಸಹಜವಾಗಿಯೇ ಫಸ್ಟ್‌ಲುಕ್ ನೋಡಿದವರಿಗೆ ಸಿನಿಮಾ ಮೇಲೆ ಕುತೂಹಲ ಹೆಚ್ಚಿತ್ತು. ಈಗ ಚಿತ್ರ ಬಿಡುಗಡೆ ಯಾವಾಗ ಎಂಬ ಪ್ರಶ್ನೆಯೂ ಎದ್ದಿತ್ತು. ಈಗ ಅದಕ್ಕೆ ಉತ್ತರ ಸಿಕ್ಕಿದೆ. ಚಿತ್ರ ಜನವರಿ 26ರಂದು ತೆರೆಕಾಣಲಿದೆ. ಈ ಮೂಲಕ 2024ರ ಮೊದಲ ತಿಂಗಳಲ್ಲೇ ರಕ್ಷಿತ್ ತಮ್ಮ ನಿರ್ಮಾಣದ ಚಿತ್ರವನ್ನು ತೆರೆಗೆ ತರಲಿದ್ದಾರೆ.
“ಕಿರಿಕ್ ಪಾರ್ಟಿ’ಯ ಬರಹಗಾರ ಅಭಿಜಿತ್ ಮಹೇಶ್ ಈ ಸಿನಿಮಾದ ನಿರ್ದೇಶಕರು. ಈಗಾಗಲೇ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಸೇರಿದಂತೆ ಅನೇಕರ ಸಿನಿಮಾಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ನಿರ್ದೇಶಕರಾಗಿ ಬಡ್ತಿ ಪಡೆದಿದ್ದು, “ಬ್ಯಾಚುಲರ್ ಪಾರ್ಟಿ’ಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಕಚಗುಳಿಯಿಡುವ ಸಂಭಾಷಣೆಗೆ ಖ್ಯಾತರಾಗಿರುವ ಅಭಿ, ತಮ್ಮ ಮೊದಲ ಸಿನಿಮಾದಲ್ಲಿ ಯಾವ ರೀತಿ ಮೋಡಿ ಮಾಡಲಿದ್ದಾರೆ ಎಂಬುದಕ್ಕೆ ಸಿನಿಮಾ ಬಿಡುಗಡೆಯವರೆಗೂ ಕಾಯಬೇಕು.
ದಿಗಂತ್, ಲೂಸ್ ಮಾದ ಯೋಗಿ ಹಾಗೂ ಅಚ್ಯುತ್ ಕುಮಾರ್ ಪೋಸ್ಟರ್ ಲ್ಲಿದ್ದಾರೆ. ಅದರ ಹಿನ್ನೆಲೆಯಲ್ಲಿ ಬ್ಯಾಂಕಾಕ್‌ನ ಕೆಲವು ಸ್ಥಳಗಳನ್ನೂ ಕಾಣಬಹುದು. ವೀಲ್ ಚೇರ್‌ನಲ್ಲಿ ಅಚ್ಯುತ್ ಕುಳಿತುಕೊಂಡಿದ್ದರೆ, ಅವರ ಹಿಂದೆ ಯೋಗಿ, ದಿಗಂತ್ ಓಡಿ ಬರುತ್ತಿರುವ ದೃಶ್ಯ ಸದ್ಯ ಗಮನ ಸೆಳೆಯುತ್ತಿದೆ. ವಿಶೇಷವೆಂದರೆ ಈ ಪೋಸ್ಟರ್ ಅನ್ನು ಹ್ಯಾಂಡ್ ಸ್ಕೆಚ್ ಮೂಲಕ ಡಿಸೈನ್ ಮಾಡಲಾಗಿದೆ. ಪೋಸ್ಟರ್ ಜೊತೆಗೆ ಅದಕ್ಕೊಂದು ಸಣ್ಣ ವೀಡಿಯೋವೊಂದನ್ನು ರಿಲೀಸ್ ಮಾಡಿದೆ ಚಿತ್ರತಂಡ. ಇಲ್ಲಿನ ಹಿನ್ನೆಲೆ ಸಂಗೀತ ಗಮನ ಸೆಳೆಯುವಂತಿದೆ.
ಪರಂವಃ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ರಕ್ಷಿತ್ ಶೆಟ್ಟಿ ಹಾಗೂ ಅಮಿತ್ ಗುಪ್ತ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಅರವಿಂದ್ ಛಾಯಾಗ್ರಹಣ, ಅರ್ಜುನ್ ರಾಮು ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.