‘ಬಡವ ರಾಸ್ಕಲ್’ ಬರ್ತಿದ್ದಾನೆ ದಾರಿ ಬಿಡಿ….
Team Udayavani, Jul 23, 2021, 2:07 PM IST
ಬೆಂಗಳೂರು: ಡಾಲಿ ಧನಂಜಯ್ ನಟಿಸಿರುವ ‘ಬಡವ ರಾಸ್ಕಲ್’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಇದೆ ಸೆಪ್ಟೆಂಬರ್ 24 ಕ್ಕೆ ಬೆಳ್ಳಿ ಪರದೆ ಮೇಲೆ ಬಡವ ರಾಸ್ಕಲ್ ನ ಅಬ್ಬರ ಶುರುವಾಗಲಿದೆ.
ಈ ಬಗ್ಗೆ ಸ್ವತಃ ಚಿತ್ರತಂಡ ಬಹಿರಂಗ ಪಡಿಸಿದೆ. ಚಿತ್ರದ ಬಿಡುಗಡೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ನಟ ಧನಂಜಯ್, “ಪಕ್ಕ middle class gangsters ಜೊತೆಗೆ, “ಬಡವ ರಾಸ್ಕಲ್ ” ಆಗಿ ನಿಮ್ಮ ಮುಂದೆ ಬರುತಿದ್ದೇನೆ, ಇದೆ ಸೆಪ್ಟೆಂಬರ್ 24 ಕ್ಕೆ ನಿಮ್ಮ ನೆಚ್ಚಿನ ಚಿತ್ರಮಂದಿರಗಳಲ್ಲಿ” ಎಂದು ಹೇಳಿದ್ದಾರೆ.
ಡಾಲಿ ಅವರೇ ಹೇಳುವ ಹಾಗೆ ಇದು ಮಧ್ಯಮ ವರ್ಗದ ಹುಡುಗನ ಕಥೆಯಾಗಿದೆ. ಚಿತ್ರಕ್ಕೆ ಶಂಕರ್ ಗುರು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರದಲ್ಲಿ ಧನಂಜಯ್ ಗೆ ಜೋಡಿಯಾಗಿ ಅಮೃತಾ ಐಯ್ಯರ್ ನಟಿಸಿದ್ದಾರೆ. ಅಮೃತಾ ಮತ್ತು ಧನಂಜಯ್ ಎರಡನೇ ಬಾರಿಗೆ ತೆರೆಹಂಚಿಕೊಳ್ಳುತ್ತಿದ್ದಾರೆ. ಈ ಮೊದಲು ‘ಪಾಪ್ ಕಾರ್ನ್ ಮಂಕಿ ಟೈಗರ್’ ಸಿನಿಮಾದಲ್ಲಿ ಒಟ್ಟಿಗೆ ಕಣಿಸಿಕೊಂಡಿದ್ದರು.
ಇನ್ನು ಸ್ಯಾಂಡಲ್‌ವುಡ್‌ನಲ್ಲಿ ಸಾಲು ಸಾಲು ಸಿನಿಮಾಗಳು ಬಿಡುಗಡೆ ಸಿದ್ಧವಾಗಿವೆ. ಸದ್ಯ ಸಲಗ, ಭಜರಂಗಿ-2 ಮತ್ತು ಬಡವ ರಾಸ್ಕಲ್ ಸಿನಿಮಾಗಳು ತೆರೆಗೆ ಬರಲು ರೆಡಿಯಾಗಿವೆ. ಕೊರೊನಾ ಪರಿಸ್ಥಿತಿ ನಿಯಂತ್ರಣಕ್ಕೆ ಬಂದರೆ ಸದ್ಯ ಚಿತ್ರಮಂದಿರಕ್ಕೆ ಬರಲು ಸಜ್ಜಾಗಿರುವ ಸಿನಿಮಾಗಳ ಬಿಡುಗಡೆ ದಿನಾಂಕ ಸಹ ಸದ್ಯದಲ್ಲೇ ಘೋಷಣೆ ಆಗಲಿದೆ.
ಪಕ್ಕ middle class gangsters ಜೊತೆಗೆ, “ಬಡವ ರಾಸ್ಕಲ್ “ ಆಗಿ ನಿಮ್ಮ ಮುಂದೆ ಬರುತಿದ್ದೇನೆ, ಇದೆ ಸೆಪ್ಟೆಂಬರ್ 24 ಕ್ಕೆ ನಿಮ್ಮ ನೆಚ್ಚಿನ ಚಿತ್ರಮಂದಿರಗಳಲ್ಲಿ. @KRG_Studios @aanandaaudio @amrutha_iyengar @dr_bhushana @PoornaMysore #Badavarascal pic.twitter.com/VqZjrCbw0c
— Dhananjaya (@Dhananjayaka) July 22, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.