ಹೊಸ ದಾಖಲೆ ಬರೆದ ‘ಬಾಗ್ಲು ತೆಗಿ ಮೇರಿ ಜಾನ್’ ಹಾಡು
Team Udayavani, Feb 4, 2022, 4:27 PM IST
ನವರಸನಾಯಕ ಜಗ್ಗೇಶ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ತೋತಾಪುರಿ ಇದೀಗ ಬಹುಭಾಷಿಗರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಈ ಚಿತ್ರದ “ಬಾಗ್ಲು ತೆಗಿ ಮೇರಿ ಜಾನ್’ ಹಾಡು ಮಿಲಿಯನ್‌ಗೂ ಅಧಿಕ ಹಿಟ್ ದಾಖಲಿಸಿ, ಸದ್ಯ ಎಲ್ಲೆಡೆ ವೈರಲ್ ಆಗಿದೆ. ಕನ್ನಡ ಮಾತ್ರವಲ್ಲದೇ ಹಿಂದಿ, ತಮಿಳು, ತೆಲುಗು ಭಾಷಿಕರ ಬಾಯಲ್ಲಿ ಈ ಹಾಡು ನಲಿದಾಡುತ್ತಿವೆ ಎಂಬುದು ಹೊಸ ವಿಷಯ.
ಹಾಡು ಬಿಡುಗಡೆಯಾದ ದಿನದಿಂದಲೂ ಕರ್ನಾಟಕ ರಾಜ್ಯದ ಮೂಲೆ ಮೂಲೆಗಳಲ್ಲೂ ಸಖತ್ ಸದ್ದು ಮಾಡುತ್ತಿದೆ. ಕಾಲೇಜು, ಪಾರ್ಕ್, ಹೋಟೆಲ್, ಸಭೆ-ಸಮಾರಂಭಗಳಲ್ಲಿ “ಬಾಗ್ಲು ತೆಗಿ ಮೇರಿ ಜಾನ್’ ಹಾಡಿನದ್ದೇ ಸೌಂಡು. ಇನ್ನು ಸಾಮಾಜಿಕ ಜಾಲತಾಣಗಳಲ್ಲೂ ಸಾಕಷ್ಟು ವೈರಲ್ ಆಗುವುದರ ಜೊತೆಗೆ ರೀಲ್ಸ್, ಯೂ ಟ್ಯೂಬ್ ಶಾಟ್ಸ್ ಹಾಗೂ ಸ್ಟೋರಿಸ್ ರೂಪದಲ್ಲೂ ಹಾಡು ಹರಿದಾಡುತ್ತಿದೆ.
ನಿರ್ದೇಶಕ ವಿಜಯಪ್ರಸಾದ್ ಅವರೇ ಸಾಹಿತ್ಯ ರಚಿಸಿರುವ ಈ ಹಾಡಿಗೆ ಅನೂಪ್ ಸೀಳಿನ್ ಸಂಗೀತವಿದೆ. ವಿಶೇಷವೆಂದರೆ ಮಹಿಳೆಯರು ಹೆಚ್ಚಾಗಿ ಮಕ್ಕಳು ಈ ಹಾಡಿಗೆ ನೃತ್ಯ ಮಾಡಿ ಸಂಭ್ರಮಿಸುತ್ತಿದ್ದು, ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಜಗ್ಗೇಶ್ ಮ್ಯಾನರಿಸಂ ಹಾಗೂ ಅದಿತಿ ಡಾನ್ಸ್ ಸ್ಟೆಪ್‌ಗಳನ್ನು ಹೋಲುವಂತೆ ಸಾಕಷ್ಟು ವಿಡಿಯೋಗಳನ್ನು ಸೆಲೆಬ್ರಿಟಿಗಳೂ ಅಪ್ಲೊ ಮಾಡುತ್ತಿರೋದು ವಿಶೇಷ. ಈ ಹಾಡಿಗೆ ನೃತ್ಯ ಸಂಯೋಜನೆ ಮಾಡಿದ್ದು, ಮೋಹನ್ ಬಿ ಕೆರೆ ಸ್ಟುಡಿಯೋ ದಲ್ಲಿ ನೂರಾರು ಡ್ಯಾನರ್ ಹಾಗೂ ಪ್ರಮುಖ ಕಲಾವಿದರ ಮಧ್ಯೆ ಈ ಹಾಡು ಚಿತ್ರಿತವಾಗಿದೆ.
ಇದನ್ನೂ ಓದಿ:ಸಿನಿಮಾ ಮಂದಿಗೆ ಸಂತಸ ನೀಡಿದ ಸರ್ಕಾರ: ಚಲನಚಿತ್ರ ಮಂದಿರಗಳಲ್ಲಿ ಶೇ.100 ಪ್ರೇಕ್ಷರಿಗೆ ಅವಕಾಶ
ಲಕ್ಷಾಂತರ ಹಿಟ್ಸ್ ಆಗಿರುವ ಈ ಹಾಡನ್ನು ಮೋನಿಫಿಕ್ಸ್ ಆಡಿಯೋ ಯೂ ಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಕೆ.ಎ.ಸುರೇಶ್ ಈ ಚಿತ್ರದ ನಿರ್ಮಾಪಕರು. ಈ ಚಿತ್ರ ಎರಡು ಭಾಗಗಳಾಗಿ ಐದು ಭಾಷೆಗಳಲ್ಲಿ ತೆರೆಕಾಣಲಿದೆ. ಚಿತ್ರದ ತಾರಾಬಳಗದಲ್ಲಿ ಡಾಲಿ ಧನಂಜಯ್, ಸುಮನ್ ರಂಗನಾಥ್, ದತ್ತಣ್ಣ, ವೀಣಾ ಸುಂದರ್, ಹೇಮಾದತ್ ಸೇರಿದಂತೆ ಮೊದಲಾದವರಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.