‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ’ ರಂಗಿತರಂಗ ನಿರ್ಮಾಪಕರ ಹೊಸ ಸಿನಿಮಾ
Team Udayavani, Oct 26, 2022, 4:44 PM IST
ನಟ ಅಜೇಯ್ ಈಗ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಅದು “ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ’. ಹೀಗೊಂದು ಸಿನಿಮಾವನ್ನು ಅಜೇಯ್ ರಾವ್ ಮಾಡುತ್ತಿದ್ದು, ಇತ್ತೀಚೆಗೆ ಚಿತ್ರದ ಟೈಟಲ್ ಪೋಸ್ಟರ್ ರಿಲೀಸ್ ಆಗಿದೆ. “ರಂಗಿ ತರಂಗ’, “ಅವನೇ ಶ್ರೀಮನ್ನಾರಾಯಣ’ ಸಿನಿಮಾ ನಿರ್ಮಿಸಿರುವ ಹೆಚ್. ಕೆ ಪ್ರಕಾಶ್ ಈ ಬಾರಿ ನಟ ಅಜೇಯ್ ರಾವ್ ಜೊತೆ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ.
ಈ ಬಾರಿಯೂ ಹೊಸ ಪ್ರತಿಭೆಗೆ ಅವಕಾಶ ಕೂಡಾ ನೀಡಿದ್ದಾರೆ. “ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ’ ಕಥೆ ಕೇಳಿ ಥ್ರಿಲ್ ಆಗಿರೋ ನಟ ಅಜೇಯ್ ರಾವ್ ಈ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಅಭಿಷೇಕ್ ಎಂ ಈ ಚಿತ್ರದ ಮೂಲಕ ನಿರ್ದೇಶಕನಾಗಿ ಸ್ಯಾಂಡಲ್ ವುಡ್ ಅಂಗಳಕ್ಕೆ ಪರಿಚಿತರಾಗುತ್ತಿದ್ದಾರೆ. ನಿರ್ದೇಶಕ ಸಿಂಪಲ್ ಸುನಿ ಜೊತೆ “ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ’, “ಬಹುಪರಾಕ್’ ಮತ್ತು “ಆಪರೇಷನ್ ಅಲಮೇಲಮ್ಮ’ ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ ಕೆಲಸ ಮಾಡಿದ ಅನುಭವ ಇವರಿಗಿದೆ.
“ಪಿನಾಕ’ ಎಂಬ ಗ್ರಾಫಿಕ್ಸ್ ಸ್ಟುಡಿಯೋ ಕೂಡ ಹೊಂದಿರುವ ಅಭಿಷೇಕ್ “ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ’ ಮೂಲಕ ಚೊಚ್ಚಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಡಲು ಸಜ್ಜಾಗಿದ್ದಾರೆ.
ಬ್ಯಾಂಕ್‌ವೊಂದನ್ನು ದರೋಡೆ ಮಾಡಲು ಹೊರಟವರ ಸುತ್ತ ಹೆಣೆಯಲಾದ ಇಂಟರೆಸ್ಟಿಂಗ್ ಕಥಾಹಂದರ ಈ ಚಿತ್ರ ಒಳಗೊಂಡಿದೆ. ಸದ್ಯಇಷ್ಟೇ ಗುಟ್ಟು ಬಿಟ್ಟು ಕೊಟ್ಟಿರುವ ಸಿನಿಮಾ ತಂಡ ಮುಂಬರುವ ದಿನಗಳಲ್ಲಿ ಚಿತ್ರದ ಬಗ್ಗೆ, ನಾಯಕಿ ಮತ್ತು ಕಲಾವಿದರ ಬಳಗ ಇದೆಲ್ಲದರ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ.
ಸದ್ಯ ಪ್ರೀ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದ್ದು, ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಛಾಯಾಗ್ರಹಣ, ತೇಜಸ್ ಆರ್ ಸಂಕಲನ, ರಾಘು ಕಲಾ ನಿರ್ದೇಶನ ಈ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.