“ಪಡ್ಡೆಹುಲಿ’ಯಲ್ಲಿ ಬಸವಣ್ಣನ ವಚನ
Team Udayavani, Mar 5, 2019, 6:07 AM IST
ಯುವ ನಟ ಶ್ರೇಯಸ್ ಅಭಿನಯದ “ಪಡ್ಡೆಹುಲಿ’ ಚಿತ್ರದಲ್ಲಿ ಬಸವಣ್ಣನವರ ವಚನಗಳನ್ನು ಬಳಸಿಕೊಂಡಿದ್ದು, ಹಾಡಿನ ರೂಪದಲ್ಲಿರುವ ವಚನಗಳನ್ನು ಆಲಿಸಿರುವ ನಾಡಿನ ಶಿವಶರಣರು, ಮಠಾಧೀಶರು ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ.
ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ಅವರು ಬಸವಣ್ಣನವರ “ಕಳಬೇಡ ಕೊಲಬೇಡ’, “ಲೋಕದ ಡೊಂಕ ನೀವೇಕೆ ತಿದ್ದುವಿರಿ’ ವಚನಗಳಿಗೆ ಹೊಸ ಶೈಲಿಯ ಸಂಗೀತ ಸ್ಪರ್ಶ ಕೊಟ್ಟು, ಈಗಿನ ಯುವಕರಿಗೆ ಆಪ್ತವೆನಿಸುವಂತೆ ಕಟ್ಟಿಕೊಡುವ ಪ್ರಯತ್ನ ಮಾಡಿದ್ದಾರೆ. ಮಹಾಶಿವರಾತ್ರಿ ದಿನದಂದು ಹಾಡಿನ ರೂಪದಲ್ಲಿ ಹೊರಬಂದಿರುವ ಬಸವಣ್ಣನವರ ವಚನಗಳಿಗೆ ಎಲ್ಲೆಡೆ ಮೆಚ್ಚುಗೆಯೂ ಸಿಕ್ಕಿದೆ.
ಅಂದಹಾಗೆ, ಸೋಮವಾರ ಚಿತ್ರತಂಡ ಲಿರಿಕಲ್ ವಿಡಿಯೋ ಬಿಡುಗಡೆ ಮಾಡಿದೆ. ಈಗಿನ ಯುವಕರಲ್ಲಿ ಬಸವಣ್ಣನವರ ವಚನಗಳ ಬಗ್ಗೆ ಇನ್ನಷ್ಟು ಆಸಕ್ತಿ ಮೂಡಿಸುವಂತಹ ಕೆಲಸ ಈ ಹಾಡಿನಿಂದ ಆಗಲಿದೆ ಎಂಬ ನಂಬಿಕೆ ಚಿತ್ರತಂಡದ್ದು.
ಇನ್ನು, ವಚನಗಳಿಗೆ ಹಾಡಿನ ಧ್ವನಿಯಾಗಿರುವುದು ನಾರಾಯಣ ಶರ್ಮಾ. ಅವರ ಕಂಠದಲ್ಲಿ ಎರಡು ವಚನಗಳು ಚೆನ್ನಾಗಿ ಮೂಡಿಬಂದಿವೆ. ಈಗಿನ ಪೀಳಿಗೆ ಕೂಡ ಗುನುಗುವಂತಹ ಹಾಡು ಕೊಟ್ಟಿರುವ ಚಿತ್ರತಂಡಕ್ಕೆ ನಾಡಿನ ಮಠಾಧೀಶರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂಗೀತ ನಿರ್ದೇಕ ಅಜನೀಶ್ ಲೋಕನಾಥ್ ಅವರು ಎರಡು ವಚನಗಳಿಗೆ ಎಲ್ಲೂ ಧಕ್ಕೆಯಾಗದಂತೆ ರೀಮಿಕ್ಸ್ ಮಾಡಿ ಹೊಸತನ ಕಟ್ಟಿಕೊಟ್ಟಿದ್ದಾರೆ.
ಬಸವಣ್ಣನವರ ವಚನಕ್ಕೆ ವಿಶಿಷ್ಟ ರಾಗ, ಧ್ವನಿ ಮತ್ತು ಆಲಾಪ ಒದಗಿಸುವ ಮೂಲಕ ಕೇಳುಗರಲ್ಲೊಂದು ಹೊಸತನ ಹುಟ್ಟುಹಾಕಿರುವ ಚಿತ್ರತಂಡ, ಚಿತ್ರವನ್ನು ಬಿಡುಗಡೆ ಮಾಡಲು ತಯಾರಿ ನಡೆಸುತ್ತಿದೆ. ಅಂದಹಾಗೆ, ಚಿತ್ರವನ್ನು ಗುರುದೇಶಪಾಂಡೆ ನಿರ್ದೇಶನ ಮಾಡಿದ್ದಾರೆ. ರಮೇಶ್ ರೆಡ್ಡಿ ನಂಗ್ಲಿ ಈ ಚಿತ್ರದ ನಿರ್ಮಾಪಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.