BIFFES 2024: ಫೆ.29ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
Team Udayavani, Jan 4, 2024, 12:07 PM IST
ಬೆಂಗಳೂರು: ಪ್ರತಿಷ್ಠಿತ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 15ನೇ ಆವೃತ್ತಿಯನ್ನು ಬರುವ ಫೆಬ್ರವರಿ 29ರಿಂದ ಮಾ.7ರವರೆಗೆ ನಡೆಸಲು ಸರ್ಕಾರ ತೀರ್ಮಾನಿಸಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಂಘಟನಾ ಸಮಿತಿಯೊಂದಿಗೆ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.
ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ (inclusiveness) ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡುವ ಚಿತ್ರಗಳ ಪ್ರದರ್ಶಿಸಲಾಗುತ್ತದೆ. ಅದಕ್ಕೆ ಅನುಗುಣವಾಗಿ ಚಿತ್ರೋತ್ಸವದ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಮೊದಲ ಹಂತದಲ್ಲಿ ದೇಶ-ವಿದೇಶಗಳ ಉತ್ತಮ ಸಿನಿಮಾಗಳನ್ನು ಚಿತ್ರೋತ್ಸವದಲ್ಲಿನ ಪ್ರದರ್ಶನಕ್ಕಾಗಿ ತರಿಸಿಕೊಳ್ಳಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.
ಹಿರಿಯ ನಟಿ ಲೀಲಾವತಿ, ದೊರೆ ಭಗವಾನ್, ಸಿ.ವಿ.ಶಿವಶಂಕರ್ ಮೊದಲಾದ ಕನ್ನಡ ಚಿತ್ರರಂಗದ ಅಗಲಿದ ಗಣ್ಯರಿಗೆ ಗೌರವ ಸಲ್ಲಿಸಲು ಅವರ ಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಮೊದಲ ದಿನ ಅಂದರೆ ಫೆ.29ರಂದು ಸಂಜೆ ವಿಧಾನಸೌಧ ಮುಂಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಮಾ.1ರಿಂದ 7ರವರೆಗೆ ಚಿತ್ರಪ್ರದರ್ಶನ ನಡೆಯಲಿದೆ. ಪ್ರತಿ ವರ್ಷದಂತೆ ಒರಾಯನ್ ಮಾಲ್‌ನಲ್ಲಿರುವ ಪಿವಿಆರ್‌ನ 11 ಪರದೆಗಳಲ್ಲಿ ಚಿತ್ರ ಪ್ರದರ್ಶನ ಮಾಡಲಾಗುವುದು. 7ರಂದು ಸಂಜೆ ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ಈ ಉತ್ಸವಕ್ಕೆ ತೆರೆಬೀಳಲಿದೆ. ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅಂದು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಖ್ಯಾತ ಸಿನಿಮಾ ನಟರಿಗೆ ಆಹ್ವಾನ: ಚಿತ್ರೋತ್ಸವದ ಕೆಲಸಗಳಲ್ಲಿ ಪರಿಣಿತಿ ಹೊಂದಿರುವ ವಿದ್ಯಾಶಂಕರ್ ಅವರನ್ನು ಕಲಾತ್ಮಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಇದರೊಂದಿಗೆ ಸಂಘಟಕರು/ತಾಂತ್ರಿಕ ಸಲಹೆಗಾರರು/ಸ್ವಯಂ ಸೇವಕರನ್ನು ತಾತ್ಕಾಲಿಕವಾಗಿ ನೇಮಿಸಿಕೊಂಡು ಸಂಭಾವನೆ ಆಧಾರದಲ್ಲಿ ಇವರ ಸೇವೆ ಪಡೆಯಲು ಕ್ರಮ ಕೈಗೊಳ್ಳಲಾಗಿದೆ. 1.61 ಕೋಟಿ ರೂ. ಅನುದಾನ: ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಚಿತ್ರೋತ್ಸವದ ಅಧ್ಯಕ್ಷರೂ ಆದ ಸಿದ್ದರಾಮಯ್ಯ, ಚಲನಚಿತ್ರೋತ್ಸವ ಆಯೋಜನೆಗೆ 1.61 ಕೋಟಿ ರೂ. ಲಭ್ಯವಿದ್ದು, ಹೆಚ್ಚುವರಿ ಅಗತ್ಯವಿರುವ ಅನುದಾನ ಒದಗಿಸಲು ತೀರ್ಮಾನಿಸಲಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರೂ ಈ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲ ರೀತಿಯ ನೆರವು ನೀಡುವುದಾಗಿ ತಿಳಿಸಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ದೇಶ-ವಿದೇಶಗಳಲ್ಲಿ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದ್ದು, ವಿದೇಶಿ ಚಿತ್ರಗಳನ್ನು ಪ್ರದರ್ಶಿಸಲಾಗುವುದಲ್ಲದೆ, ಕನ್ನಡ ಸೇರಿ ದೇಶದ ವಿವಿಧ ಭಾಷಾ ಚಿತ್ರಗಳನ್ನು ಪ್ರದರ್ಶಿಸಲಾಗುವುದು ಎಂದು ಹೇಳಿದರು.
ಸಂಘಟನಾ ಸಮಿತಿ ಸಭೆಯ ಜತೆಗೆ ಕೋರ್ ಸಮಿತಿಯೂ ರಚನೆಯಾಗಿದ್ದು, ಸಮಾರಂಭ ಯಾವ ರೀತಿ ಏರ್ಪಡಿಸಬೇಕು ಎಂಬುದು ತೀರ್ಮಾನವಾ ಗುತ್ತದೆ. ಶಾಂತಿ, ಸಮಾನತೆ, ಸೌಹಾರ್ದತೆ, ಮಾನವೀಯತೆಯ ಸಂದೇಶಗಳು ಸಮಾಜಕ್ಕೆ ತಲುಪಬೇಕಿದೆ. ಬಹುತ್ವಕ್ಕೆ ಹೆಚ್ಚು ಒತ್ತು ಕೊಡುವ ರೀತಿಯಲ್ಲಿ ಚಲನಚಿತ್ರೋತ್ಸವ ನಡೆಯಲಿದೆ. ಹೆಚ್ಚು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಅಗತ್ಯವಿರುವ ಆರ್ಥಿಕ ನೆರವನ್ನು ಸರ್ಕಾರ ಒದಗಿಸಲಿದೆ ಎಂದು ತಿಳಿಸಿದರು.
ದೇಶ-ವಿದೇಶದ ಸಿನಿರಂಗದ ಪ್ರಖ್ಯಾತ ಕಲಾವಿದರನ್ನು ಕರೆಯಿಸಲಾಗುತ್ತಿದೆ. ಈ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದ್ದು, ಅಂತಾ ರಾಷ್ಟ್ರೀಯ ಚಲನಚಿತ್ರೋತ್ಸವ ಯಶಸ್ವಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.