ಕುತೂಹಲ ಮೂಡಿಸಿದ ‘ಬೇರ’ ಟೀಸರ್
Team Udayavani, Apr 30, 2023, 4:28 PM IST
ಈ ಹಿಂದೆ ಕಿರುತೆರೆಯಲ್ಲಿ ಧಾರಾವಾಹಿ ನಿರ್ದೇಶನದ ಮೂಲಕ ಗುರುತಿಸಿಕೊಂಡಿರುವ ಕಿರುತೆರೆ ನಿರ್ದೇಶಕ ವಿನು ಬಳಂಜ “ಬೇರ’ ಎಂಬ ಚಿತ್ರ ನಿರ್ದೇಶಿಸುವ ಮೂಲಕ ಹಿರಿತೆರೆಗೆ ಪಾದಾರ್ಪಣೆ ಮಾಡಿದ್ದಾರೆ.
“ಎಸ್.ಎಲ್.ವಿ ಕಲರ್ಸ್’ ಲಾಂಛನದಲ್ಲಿ ದಿವಾಕರ ದಾಸ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆಯಾಯಿತು. “ಕಳೆದ ನಾಲ್ಕೈದು ವರ್ಷ ನಾನು ವೈಯಕ್ತಿಕ ಕಾರಣದಿಂದ ಕಿರುತೆರೆ ಹಾಗೂ ಹಿರಿತೆರೆಯಿಂದ ದೂರವಿದ್ದೆ. ಆನಂತರ ಒಂದು ಮ್ಯೂಸಿಯಂಗೆ ಹೋದೆ. ಅಲ್ಲೇ ಈ ಕಥೆ ಹುಟ್ಟಿದ್ದು. ಆನಂತರ ಮತ್ತೆ ನನ್ನನ್ನು ಸಿನಿಮಾ ಮಾಡಲು ಪ್ರೇರೇಪಿಸಿದ್ದು ನಿರ್ಮಾಪಕ ದಿವಾಕರ್. ತುಳುವಿನಲ್ಲಿ ಬೇರ ಎಂದರೆ ಕನ್ನಡದಲ್ಲಿ ವ್ಯಾಪಾರ ಎಂದು ಅರ್ಥ.
ಅಮಾಯಕರನ್ನು ಬಳಸಿಕೊಂಡು ಹೇಗೆ ನಾಯಕರಾಗುತ್ತಾರೆ ಹಾಗೂ ಯಾವ ತಾಯಂದ್ರ ಮಕ್ಕಳೂ ಇನ್ನೊಬ್ಬರಿಂದಾಗಿ ಸಾಯಬಾರದು ಎಂಬುದೇ ಕಥಾಹಂದರ. ಈ ಚಿತ್ರದಲ್ಲಿ ನಾಯಕ, ನಾಯಕಿ ಅಂತ ಇಲ್ಲ. ಬರುವ ಎಲ್ಲಾ ಪಾತ್ರಗಳು ಮುಖ್ಯ ಪಾತ್ರಗಳಾಗಿರುತ್ತವೆ. ಸದ್ಯ ಟೀಸರ್ ಬಿಡುಗಡೆ ಮಾಡಿದ್ದೇವೆ. ಮೇ ಅಂತ್ಯಕ್ಕೆ ಚಿತ್ರವನ್ನು ತೆರೆಗೆ ತರುವ ಯೋಜನೆ ಇದೆ’ ಎಂದು ನಿರ್ದೇಶಕ ವಿನು ಬಳಂಜ ತಿಳಿಸಿದರು. ಕೇವಲ ಮೂರು ಜನ ಕೆಲಸಗಾರರಿಂದ ಶುರುವಾದ ಎಸ್.ಎಲ್.ವಿ ಸಂಸ್ಥೆಯಲ್ಲಿ ಇಂದು ನೂರೈವತ್ತು ಜನ ಕೆಲಸಗಾರರಿದ್ದಾರೆ. ಈಗ “ಎಸ್.ಎಲ್.ವಿ ಕಲರ್ಸ್’ ಲಾಂಛನದಲ್ಲಿ ಬೇರ ಎಂಬ ಮೊದಲ ಚಿತ್ರ ನಿರ್ಮಾಣ ಮಾಡಿದ್ದೇವೆ. ಈ ಚಿತ್ರಕ್ಕೆ ನಿಮ್ಮ ಹಾರೈಕೆ ಇರಲಿ ಎಂದರು.
ನಿರ್ಮಾಪಕ ದಿವಾಕರ ದಾಸ್. ಚಿತ್ರತಂಡದ ಸದಸ್ಯರುಗಳಾದ ದತ್ತಣ್ಣ, ಯಶ್ ಶೆಟ್ಟಿ, ಹರ್ಷಿಕಾ ಪೂಣತ್ಛ, ಅಶ್ವಿನ್ ಹಾಸನ್, ಚಿತ್ಕಲ ಬಿರಾದಾರ್, ಮಂಜುನಾಥ್ ಹೆಗಡೆ, ಗುರು ಹೆಗಡೆ, ರಾಕೇಶ್ ಮಯ್ಯ, ಧವಳ್ ದೀಪಕ್ ಸೇರಿದಂತೆ, ಛಾಯಾಗ್ರಹಕ ರಾಜಶೇಖರ್ ಹಾಗೂ ಕಾರ್ಯಕಾರಿ ನಿರ್ಮಾಪಕ ರಾಮದಾಸ ಶೆಟ್ಟಿ ಕೂಡ ಬೇರ ಚಿತ್ರದ ಕುರಿತು ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.