ಸೀತಾರಾಮ ಕಲ್ಯಾಣದಲ್ಲಿ ಭಾಗ್ಯಶ್ರೀ, ಸಂಜಯ್‌ ಕಪೂರ್‌

Team Udayavani, Sep 24, 2018, 11:37 AM IST

bhagyashree.jpg

ಕನ್ನಡ ಚಿತ್ರರಂಗಕ್ಕೆ ಬಾಲಿವುಡ್‌ ನಟ, ನಟಿಯರ ಆಗಮನ ಹೊಸದೇನಲ್ಲ. ಈಗಾಗಲೇ ಬಾಲಿವುಡ್‌ನ‌ ಹಲವು ನಟ, ನಟಿಯರು ಕನ್ನಡ ಚಿತ್ರದಲ್ಲಿ ನಟಿಸಿದ್ದಾರೆ. ಈಗಲೂ ನಟಿಸುತ್ತಲೇ ಇದ್ದಾರೆ. ಈಗ ಹೊಸ ಸುದ್ದಿಯೆಂದರೆ, ಬಾಲಿವುಡ್‌ನ‌ ನಟ ಮತ್ತು ನಟಿ ಕನ್ನಡ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಹೌದು, ನಿಖಿಲ್‌ಕುಮಾರ್‌ ಅಭಿನಯದ “ಸೀತಾರಾಮ ಕಲ್ಯಾಣ’ ಚಿತ್ರದ ಕಲಾವಿದರ ಪಟ್ಟಿ ದಿನ ಕಳೆದಂತೆ ದೊಡ್ಡದ್ದಾಗಿ ಬೆಳೆಯುತ್ತಿದೆ.

ಈ ಚಿತ್ರದಲ್ಲಿ ಈಗ ಬಾಲಿವುಡ್‌ ನಟಿ ಭಾಗ್ಯಶ್ರೀ ಹಾಗೂ ಅನಿಲ್‌ ಕಪೂರ್‌ ಸಹೋದರ ಸಂಜಯ್‌ ಕಪೂರ್‌ ಅವರು ಅಭಿನಯಿಸುತ್ತಿದ್ದಾರೆ. ಭಾಗ್ಯಶ್ರೀ ಅವರು ನಿಖಿಲ್‌ಕುಮಾರ್‌ ಅಮ್ಮನಾಗಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಭಾಗ್ಯಶ್ರೀ ಅಂದಾಕ್ಷಣ, ಥಟ್ಟನೆ ನೆನಪಾಗೋದೇ ಸಲ್ಮಾನ್‌ಖಾನ್‌ ಅಭಿನಯದ “ಮೈನೆ ಪ್ಯಾರ್‌ಕಿಯಾ’ ಈ ಚಿತ್ರದ ಯಶಸ್ವಿ ಜೋಡಿಯಾಗಿ ಹೊರಹೊಮ್ಮಿದ್ದ ಭಾಗ್ಯಶ್ರೀ, ಆ ಬಳಿಕ ಸಕ್ಸಸ್‌ಫ‌ುಲ್‌ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು.

ಭಾಗ್ಯಶ್ರೀ ಕನ್ನಡಕ್ಕೆ ಬರುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಶಿವರಾಜ್‌ಕುಮಾರ್‌ ಅಭಿನಯದ “ಅಮ್ಮಾವ್ರ ಗಂಡ’ ಚಿತ್ರದಲ್ಲಿ ನಟಿಸಿದ್ದಾರೆ. ಬಹಳ ವರ್ಷಗಳ ಬಳಿಕ ಕನ್ನಡಕ್ಕೆ ಬರುತ್ತಿರುವ ಭಾಗ್ಯಶ್ರೀ, ನಿಖಿಲ್‌ ಕುಮಾರ್‌ಗೆ ತಾಯಿಯಾಗಿ ನಟಿಸುತ್ತಿದ್ದಾರೆ. ಇವರೊಂದಿಗೆ ಸಂಜಯ್‌ಕಪೂರ್‌ ಕೂಡ ನಟಿಸುತ್ತಿದ್ದಾರೆ. ಆದರೆ, ಅವರ ಪಾತ್ರ ಏನೆಂಬುದು ಸಸ್ಪೆನ್ಸ್‌. ಈಗಾಗಲೇ “ಸೀತಾರಾಮ ಕಲ್ಯಾಣ’ ಚಿತ್ರದ ಕಲಾವಿದರ ಪಟ್ಟಿ ದೊಡ್ಡದಾಗಿ ಬೆಳೆದಿದ್ದು, ಆ ಸಾಲಿಗೆ ಬಾಲಿವುಡ್‌ನ‌ ಭಾಗ್ಯಶ್ರೀ ಹಾಗೂ ಸಂಜಯ್‌ ಕಪೂರ್‌ ಸೇರಿದ್ದಾರೆ.

ಅಂದಹಾಗೆ, ಭಾಗ್ಯಶ್ರೀ ಅವರ ಭಾಗದ ಚಿತ್ರೀಕರಣ, ಸೋಮವಾರದಿಂದ (ಇಂದಿನಿಂದ) ಶುರುವಾಗುತ್ತಿದೆ. ಚಿತ್ರದಲ್ಲಿ ನಿಖಿಲ್‌ ತಂದೆಯಾಗಿ ತೆಲುಗು ನಟ ಶರತ್‌ಕುಮಾರ್‌ ನಟಿಸುತ್ತಿದ್ದಾರೆ. ಉಳಿದಂತೆ ಚಿತ್ರದಲ್ಲಿ ರಚಿತಾರಾಮ್‌ ನಾಯಕಿಯಾದರೆ, ಗಿರಿಜಾ ಲೋಕೇಶ್‌, ರವಿಶಂಕರ್‌, ಮಧು, ಜ್ಯೋತಿ ರೈ ಸೇರಿದಂತೆ ಹಲವರು ನಟಿಸುತ್ತಿದ್ದಾರೆ. ಎ.ಹರ್ಷ ಚಿತ್ರದ ನಿರ್ದೇಶಕರು. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನಿರ್ಮಾಪಕರು. “ಸೀತಾರಾಮ ಕಲ್ಯಾಣ” ಪಕ್ಕಾ ಫ್ಯಾಮಿಲಿ ಎಂಟರ್‌ಟೈನರ್‌ ಚಿತ್ರ ಎಂಬುದು ಚಿತ್ರತಂಡದ ಮಾತು.

ಟಾಪ್ ನ್ಯೂಸ್

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ

Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ

14

Chowkidar Movie: ಶೂಟಿಂಗ್‌ ಮುಗಿಸಿದ ಚೌಕಿದಾರ್‌

KD Movie: ಪ್ರೇಮ್‌ ಕೆಡಿಗೆ ಅಜಯ್‌ ದೇವಗನ್‌ ಸಾಥ್‌; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್

KD Movie: ಪ್ರೇಮ್‌ ಕೆಡಿಗೆ ಅಜಯ್‌ ದೇವಗನ್‌ ಸಾಥ್‌; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.