OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Team Udayavani, Dec 24, 2024, 4:35 PM IST
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಇತ್ತೀಚೆಗಿನ ಬ್ಲಾಕ್ ಬಸ್ಟರ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ದಿನ ನಿಗದಿಯಾಗಿದೆ.
ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ (Shiva Rajkumar) ನಟನೆಯ ‘ಭೈರತಿ ರಣಗಲ್’ (Bhairathi Ranagal) ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿತ್ತು. ಆ ಮೂಲಕ ʼಮಫ್ತಿʼ ಪ್ರೀಕ್ವೆಲ್‌ಗೂ ಪ್ರೇಕ್ಷಕರು ಜೈಕಾರ ಹಾಕಿದ್ದರು.
ನರ್ತನ್ ನಿರ್ದೇಶನದ ʼಭೈರತಿ ರಣಗಲ್ʼ ನ.15 ರಂದು ರಿಲೀಸ್ ಆಗಿತ್ತು. ಕಪ್ಪು ಕೋಟ್ ತೊಟ್ಟು ವಕೀಲನಾಗಿ ಮತ್ತು ಮಾಸ್ ಹೀರೋ ಆಗಿ ಅಬ್ಬರಿಸಿದ ಎರಡು ಶೇಡ್ ನಲ್ಲಿ ಸೆಂಚುರಿ ಸ್ಟಾರ್ ಮಿಂಚಿದ್ದರು.
ಸಿನಿಮಾ ಥಿಯೇಟರ್‌ನಲ್ಲಿ ಹಿಟ್ ಆಗುವುದರ ಜತೆಗೆ ಬಾಕ್ಸಾಫೀಸ್‌ನಲ್ಲೂ ಸಮಾಧಾನ ತರುವ ಬ್ಯುಸಿನೆಸ್ ಮಾಡಿತ್ತು. ಅಂದಾಜಿನ ಪ್ರಕಾರ ಚಿತ್ರ 20 ಕೋಟಿ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ.
ಶಿವರಾಜ್ ಕುಮಾರ್ ಅವರ ಮಾಸ್ ಲುಕ್ ನೋಡಿ ಫ್ಯಾನ್ಸ್‌ಗಳು ಫಿದಾ ಆಗಿದ್ದರು. ಕನ್ನಡ ಚಿತ್ರರಂಗಕ್ಕೆ ʼಭೈರತಿ ರಣಗಲ್ʼ ಬ್ಲಾಕ್ ಬಸ್ಟರ್ ಹಿಟ್ ತಂದುಕೊಟ್ಟಿತು. ಇದೀಗ ಸಿನಿಮಾ ರಿಲೀಸ್ ಆಗಿ 40 ದಿನಕ್ಕೆ ʼಭೈರತಿ ರಣಗಲ್ʼ ಓಟಿಟಿ ಅಖಾಡಕ್ಕೆ ಕಾಲಿಡಲಿದೆ.
ಮಾಸ್ ಲೀಡರ್ ಈಗ ಪ್ರೈಮ್ ಲೀಡರ್ ಆಗಲು ಸಿದ್ಧರಾಗಿದ್ದಾರೆ ಎಂದು ಓಟಿಟಿ ರಿಲೀಸ್ ಡೇಟ್ ಅನೌನ್ಸ್ ಮಾಡಲಾಗಿದೆ. ಡಿ.25 ಅಂದರೆ ನಾಳೆಯಿಂದಲೇ ʼಭೈರತಿ ರಣಗಲ್ʼ ಅಮೇಜಾನ್ ಪ್ರೈಮ್‌ನಲ್ಲಿ ಸ್ಟ್ರೀಮಿಂಗ್ ಆಗಲಿದೆ. ಆ ಮೂಲಕ ಕ್ರಿಸ್ಮಸ್ ಹಾಲಿಡೇಗೆ ಸಿನಿಮಂದಿಗೆ ಭರ್ಜರಿ ಮನರಂಜನೆ ಸಿಗಲಿದೆ.
ಸಿನಿಮಾದಲ್ಲಿ ದೇವರಾಜ್, ಅವಿನಾಶ್,ರಾಹುಲ್ ಭೋಸ್, ರುಕ್ಮಿಣಿ ವಸಂತ್ ಮುಂತಾದವರು ನಟಿಸಿದ್ದು, ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ.
The MASS LEADER is Now all set to be the PRIME LEADER 🔥#BhairathiRanagal on @PrimeVideo | 25 DECEMBER 2024@NimmaShivanna #Narthan @rukminitweets @GeethaPictures @aanandaaudio @RaviBasrur @The_BigLittle @PrimeVideoIN
#GeethaPictures #BiggestMassHitOfTheYear… pic.twitter.com/eksqKPCWaj— Geetha Pictures (@GeethaPictures) December 24, 2024
ನವೀನ್ ಕುಮಾರ್ ಛಾಯಾಗ್ರಹಣ, ಆಕಾಶ್ ಹಿರೇಮಠ ಸಂಕಲನ, ಗುಣ ಕಲಾ ನಿರ್ದೇಶನ ಹಾಗೂ ದಿಲೀಪ್ ಸುಬ್ರಹ್ಮಣ್ಯ, ಚೇತನ್ ಡಿಸೋಜ ಸಾಹಸ ನಿರ್ದೇಶನ ಭೈರತಿ ರಣಗಲ್ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್
Belthangady: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಬಲಿಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.