ಹಸೆಮಣೆ ಏರೋದಕ್ಕೆ ರೆಡಿಯಾದ ಭಾಮಾ
ಉದ್ಯಮಿ ಅರುಣ್ ಜೊತೆ ನಿಶ್ಚಿತಾರ್ಥ
Team Udayavani, Jan 23, 2020, 7:04 AM IST
ಕನ್ನಡ, ಮಲಯಾಳಂ, ತಮಿಳು ಸೇರಿದಂತೆ ದಕ್ಷಿಣ ಭಾರತದ ಚಿತ್ರರಂಗದಲ್ಲಿ ನಾಯಕ ನಟಿಯಾಗಿ ಮಿಂಚಿರುವ ಭಾಮಾ ಶೀಘ್ರದಲ್ಲಿಯೇ ಹಸೆಮಣೆ ಏರಲಿದ್ದಾರೆ. ಕೇರಳದ ಮೂಲದ ಭಾಮಾ ತಮ್ಮ ಬಾಲ್ಯದ ಸಹಪಾಠಿ ಅರುಣ್ ಅವರನ್ನು ವರಿಸಲಿದ್ದು, ಮಂಗಳವಾರ (ಜ. 21ರಂದು) ಕೊಚ್ಚಿಯ ಖಾಸಗಿ ರೆಸಾರ್ಟ್‌ನಲ್ಲಿ ಭಾಮಾ ಮತ್ತು ಅರುಣ್ ನಿಶ್ಚಿತಾರ್ಥ ಅದ್ಧೂರಿಯಾಗಿ ನೆರವೇರಿದೆ.
ಭಾಮಾ ಮತ್ತು ಅರುಣ್ ಇಬ್ಬರೂ ಬಾಲ್ಯದಿಂದಲೂ ಸಹಪಾಠಿಗಳಾಗಿದ್ದು, ಎರಡೂ ಕುಟುಂಬದ ಸಮ್ಮತಿಯಿಂದ ಈ ಮದುವೆ ನಡೆಯುತ್ತಿದೆ ಎನ್ನಲಾಗಿದೆ. ಇನ್ನು ಕೇರಳದ ಕೊಚ್ಚಿಯ ಖಾಸಗಿ ರೆಸಾರ್ಟ್‌ನಲ್ಲಿ ನಡೆದ ಈ ನಿಶ್ಚಿತಾರ್ಥ ಸಮಾರಂಭದಲ್ಲಿ ಕೇವಲ ಎರಡೂ ಕುಟುಂಬದ ಸದಸ್ಯರು, ಆತ್ಮೀಯ ಸ್ನೇಹಿತರಷ್ಟೇ ಭಾಗವಹಿಸಿದ್ದರು. ಭಾಮಾ ಕೈಹಿಡಿಯುತ್ತಿರುವ ಅರುಣ್ ಕೇರಳದ ಚೆನ್ನಿಥಾಲದ ಆಲಪ್ಪುಳದ ಮೂಲದವರಾಗಿದ್ದು, ಕೆನೆಡಾದಲ್ಲಿ ತಮ್ಮ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದ್ದಾರೆ.
ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ “ಮೊದಲಾಸಲ’ ಚಿತ್ರದ ಮೂಲಕ ನಾಯಕ ನಟಿಯಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗಿದ್ದ ಭಾಮಾ ನಂತರ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಶೈಲೂ’, “ಆಟೋರಾಜ’, ನಟ ಲೂಸ್‌ಮಾದ ಯೋಗಿ ಅಭಿನಯದ “ಅಂಬರ’, ಪ್ರಜ್ವಲ್ ದೇವರಾಜ್ ಅಭಿನಯದ “ಅರ್ಜುನ’, ದಿಗಂತ್ ಅಭಿನಯದ “ಬರ್ಫಿ’ ಹೀಗೆ ಹಲವು ಚಿತ್ರಗಳಲ್ಲಿ ನಾಯಕ ನಟಿಯಾಗಿ ಕಾಣಿಸಿಕೊಂಡಿದ್ದರು.
ತನ್ನ ಸೌಂದರ್ಯ ಮತ್ತು ಸಹಜ ಅಭಿನಯದ ಮೂಲಕ ಕನ್ನಡ ಸಿನಿಪ್ರಿಯರ ಗಮನ ಸೆಳೆಯುವಲ್ಲಿ ಯಶಸ್ವಿಯಾದ ಭಾಮಾ ಕಳೆದ ಎರಡು-ಮೂರು ವರ್ಷಗಳಿಂದ ಸ್ಯಾಂಡಲ್‌ವುಡ್‌ನಲ್ಲಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಜನವರಿ ತಿಂಗಳ ಕೊನೆಗೆ ಭಾಮಾ – ಅರುಣ್ ದಾಂಪತ್ಯ ಕಾಲಿಡಲಿದ್ದು, ಮದುವೆ ಆರತಕ್ಷತೆ ಕಾರ್ಯಕ್ರಮ ಕೊಚ್ಚಿಯಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಹಲವರು ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.