![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 19, 2024, 12:20 PM IST
ನಟ ಕಿರಣ್ ರಾಜ್ ನಾಯಕನಾಗಿ ನಟಿಸಿರುವ ಹಾಗೂ ಪ್ರಸಿದ್ಧ್ ನಿರ್ದೇಶನದ “ಭರ್ಜರಿ ಗಂಡು’ ಚಿತ್ರದ ಟ್ರೇಲರ್ ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆ ಯಾಗಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಈ ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಪ್ರಸಿದ್ಧ್, “ರತ್ನ ಮಂಜರಿ ಚಿತ್ರದ ನಂತರ ನಾನು ನಿರ್ದೇಶಿಸಿರುವ ಎರಡನೇ ಚಿತ್ರವಿದು. ನನ್ನ ಸ್ನೇಹಿತ ಛಾಯಾಗ್ರಾಹಕ ಕಿಟ್ಟಿ ಕೌಶಿಕ್ ಅವರು, ನಾಯಕ ಕಿರಣ್ ರಾಜ್ ಸೇರಿದಂತೆ ಸಾಕಷ್ಟು ಜನ ಕಲಾವಿದರನ್ನು ಈ ಚಿತ್ರಕ್ಕಾಗಿ ನನಗೆ ಪರಿಚಯಿಸಿದರು. ಚಾಕಲೇಟ್ ಬಾಯ್ ಆಗಿದ್ದ ಕಿರಣ್ ರಾಜ್, ಈ ಚಿತ್ರದ ಮೂಲಕ ಆಕ್ಷನ್ ಹೀರೋ ಆಗುವುದಂತು ಖಚಿತ. ಅಷ್ಟು ಅದ್ಭುತವಾಗಿ ಸಾಹಸವನ್ನು ಮಾಡಿದ್ದಾರೆ. ಭರ್ಜರಿ ಗಂಡು ಗ್ರಾಮೀಣ ಸೊಗಡಿನ ಕಥೆ. ಬರೀ ಪ್ರೀತಿಗಷ್ಟೇ ಸೀಮಿತವಾಗದ ನಾಯಕ, ತನ್ನ ಊರಿಗೆ ಹಾಗೂ ಊರ ಜನರಿಗೆ ಏನೆಲ್ಲಾ ಮಾಡುತ್ತಾನೆ ಎಂಬುದೆ ಕಥಾಹಂದರ. ಏಪ್ರಿಲ್ 5 ಚಿತ್ರ ಬಿಡುಗಡೆಯಾಗುತ್ತಿದೆ’ ಎಂದರು.
“ನಾನು ನಾಯಕನಾಗಿ ನಟಿಸಿರುವ ಮೊದಲ ಚಿತ್ರವಿದು. ಪ್ರಸಿದ್ಧ್ ಅವರು ಬರೆದಿರುವ ಕಥೆ ಚೆನ್ನಾಗಿದೆ. ನಾನು ಈ ಚಿತ್ರದಲ್ಲಿ ಆ್ಯಕ್ಷನ್ ಹೀರೋ ಆಗಿ ಕಾಣಿಸಿಕೊಂಡಿದ್ದೇನೆ’ ಎಂದರು ನಾಯಕ ಕಿರಣ್ ರಾಜ್. ನಾಯಕಿ ಯಶ ಶಿವಕುಮಾರ್ ಸಹ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಕಲಾವಿದರಾದ ರಾಕೇಶ್ ರಾಜ್, ರೋಹಿತ್ ನಾಗೇಶ್ , ಸೌರಭ್ ಕುಲಕರ್ಣಿ, ಛಾಯಾಗ್ರಾಹಕ ಕಿಟ್ಟಿ ಕೌಶಿಕ್, ಸಂಗೀತ ನಿರ್ದೇಶಕ ಗುಮ್ಮೆನೇನಿ ವಿಜಯ್ ಚಿತ್ರದ ಕುರಿತು ಮಾತನಾಡಿದರು.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.