ಭರ್ಜರಿ ಪ್ರದರ್ಶನ
Team Udayavani, Nov 3, 2017, 5:00 PM IST
ಧ್ರುವ ಸರ್ಜಾ ಅವರ ನಿರೀಕ್ಷೆ “ಭರ್ಜರಿ’ಯಾಗಿಯೇ ಈಡೇರಿದೆ. ಅದು ತಮ್ಮ ಮೂರನೇ ಸಿನಿಮಾದಲ್ಲೂ “ಹ್ಯಾಟ್ರಿಕ್ ಗೆಲುವು’ ಸಾಧಿಸಬೇಕೆಂಬುದು. ಈಗ ಅದು ಈಡೇರಿದೆ. “ಭರ್ಜರಿ’ ಚಿತ್ರ 50 ದಿನಗಳನ್ನು ಪೂರೈಸಿದೆ. ಚಿತ್ರರಂಗದ ಸದ್ಯದ ಪರಿಸ್ಥಿತಿಯಲ್ಲಿ ಒಂದು ಚಿತ್ರ 25 ದಿನ ಓಡೋದು ಕಷ್ಟ ಎಂದಿರುವಾಗ “ಭರ್ಜರಿ’ ಚಿತ್ರ ತುಂಬಿದ ಪ್ರದರ್ಶನದ ಮೂಲಕ 50 ದಿನ ಪೂರೈಸಿರುವುದು ಚಿತ್ರತಂಡದ ಹಾಗೂ ಧ್ರುವ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.
ಅಂದಹಾಗೆ, “ಭರ್ಜರಿ’ ಚಿತ್ರ ಬರೋಬ್ಬರಿ 71 ಚಿತ್ರಮಂದಿರಗಳಲ್ಲಿ 50 ದಿನ ಪೂರೈಸಿದೆ. ಮಲ್ಟಿಪ್ಲೆಕ್ಸ್‌ನ ಸ್ಕ್ರೀನ್‌ಗಳನ್ನೂ ಸೇರಿಸಿದರೆ 90ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಚಿತ್ರ 50 ದಿನ ಪೂರೈಸಿರುವುದು ಚಿತ್ರತಂಡದ ಖುಷಿಯನ್ನು ಹೆಚ್ಚಿಸಿದೆ. 50 ದಿನ ಪೂರೈಸಿದ ಚಿತ್ರ ಶತದಿನ ಆಚರಿಸುತ್ತಾ ಎಂದು ನೀವು ಕೇಳಿದರೆ ಖಂಡಿತಾ ಪೂರೈಸುತ್ತದೆ ಎಂಬ ಉತ್ತರ ಸಿಗುತ್ತದೆ. ಸುಮಾರು 12 ರಿಂದ 13 ಸೆಂಟರ್‌ಗಳಲ್ಲಿ “ಭರ್ಜರಿ’ 100 ದಿನ ಪೂರೈಸಲಿದೆ.
ಈಗ ಚಿತ್ರ 50 ದಿನ ಪೂರೈಸಿರುವ ಖುಷಿಯನ್ನು ಚಿತ್ರ ಭಾನುವಾರ ಕೆ.ಜಿ.ರಸ್ತೆಯ ನರ್ತಕಿ ಚಿತ್ರಮಂದಿರದಲ್ಲಿ ಸಂಭ್ರಮಿಸಲಿದೆ. ಅಂದು ಮಧ್ಯಾಹ್ನ ಚಿತ್ರಮಂದಿರಕ್ಕೆ ಭೇಟಿ ನೀಡಲಿರುವ ಚಿತ್ರತಂಡ ಅಂದು ಕೇಕ್ ಕತ್ತರಿಸುವ ಜೊತೆಗೆ ಧ್ರುವ ಸರ್ಜಾ ಅಭಿಮಾನಿಗಳು ರಕ್ತದಾನ ಶಿಬಿರ ಕೂಡಾ ಆಯೋಜಿಸಿದ್ದಾರೆ. ಅಂದಿನ ಸಂಭ್ರಮಕ್ಕೆ ಚಿತ್ರದಲ್ಲಿ ಕಾಣಿಸಿಕೊಂಡ ಕಲಾವಿದರೆಲ್ಲರೂ ಸಾಕ್ಷಿಯಾಗಲಿದ್ದಾರೆ.
ಅಂದಹಾಗೆ, “ಭರ್ಜರಿ’ ಚಿತ್ರದಲ್ಲಿ ರಚಿತಾ ರಾಮ್ ಹಾಗೂ ಹರಿಪ್ರಿಯಾ ನಾಯಕಿಯರಾಗಿ ನಟಿಸಿದ್ದಾರೆ. ಚಿತ್ರವನ್ನು ಕನಕಪುರ ಶ್ರೀನಿವಾಸ್ ನಿರ್ಮಿಸಿದ್ದಾರೆ. ವಿ. ಹರಿಕೃಷ್ಣ ಸಂಗೀತ ಸಂಯೋಜಿಸಿರುವ ಈ ಚಿತ್ರದಲ್ಲಿ ರಂಗಾಯಣ ರಘು, ತಾರಾ, ಅವಿನಾಶ್, ಶ್ರೀನಿವಾಸಮೂರ್ತಿ, ಉದಯ್, ಸಾಧು ಕೋಕಿಲ ಮುಂತಾದವರು ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ
Bhairathi Ranagal; ಶಿವಣ್ಣ ಡ್ರೀಮ್ ಪ್ರಾಜೆಕ್ಟ್ ಭೈರತಿ ಮೈಲುಗಲ್!
BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ
Sandalwood: 99 ರೂಪಾಯಿಗೆ ಆರಾಮ್ ಸಿನಿಮಾ: ಅರವಿಂದ ಸ್ವಾಮಿ ಹೊಸ ಪ್ಲ್ರಾನ್
Darshan; ಭರ್ಜರಿ ಓಪನಿಂಗ್ ನಿರೀಕ್ಷೆಯಲ್ಲಿ ನವಗ್ರಹ: ರೀರಿಲೀಸ್ ಚಿತ್ರದಲ್ಲಿ ದರ್ಶನ್ ಹವಾ
MUST WATCH
ಹೊಸ ಸೇರ್ಪಡೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.