ಭರ್ಜರಿ ಪ್ರತಿಕ್ರಿಯೆ!
Team Udayavani, Aug 28, 2017, 10:44 AM IST
“ಭರ್ಜರಿ’ ಚಿತ್ರ ತುಂಬಾ ದಿನಗಳ ನಂತರ ಮತ್ತೆ ಸದ್ದು ಮಾಡುತ್ತಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ “ಭರ್ಜರಿ’ ಇಷ್ಟೊತ್ತಿಗೆ ಬಿಡುಗಡೆಯಾಗಬೇಕಿತ್ತು. ಕಾರಣಾಂತರಗಳಿಂದ ತಡವಾದ ಚಿತ್ರ ಈಗ ಬಿಡುಗಡೆಗೆ ರೆಡಿಯಾಗಿದೆ. ಕೆಲ ದಿನಗಳ ಹಿಂದಷ್ಟೇ ಚಿತ್ರತಂಡ ಟೀಸರ್ ಬಿಟ್ಟಿದ್ದು, ಅದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಬೆನ್ನಲ್ಲೇ ಈಗ ಚಿತ್ರತಂಡ “ಭರ್ಜರಿ’ ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡಿದೆ.
ಧ್ರುವ ಸರ್ಜಾ ಸಖತ್ ಜೋಶ್‌ನಲ್ಲಿ ಸ್ಟೆಪ್ ಹಾಕಿರುವ ಈ ವಿಡಿಯೋ ಸಾಂಗ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ಮೂಲಕ ಚಿತ್ರತಂಡ ಖುಷಿಯಾಗಿದೆ. ಡಿ ಬಿಟ್ಸ್ ಮೂಲಕ ಈ ಚಿತ್ರದ ಹಾಡುಗಳು ಹೊರಗಡೆ ಬಂದಿವೆ. “ಭರ್ಜರಿ ಸೌಂಡು …’ ಎಂದು ಆರಂಭವಾಗುವ ಈ ಟೈಟಲ್ ಟ್ರ್ಯಾಕ್ ಅನ್ನು ನಿರ್ದೇಶಕ ಚೇತನ್ ಬರೆದಿದ್ದು, ಶಶಾಂಕ್ ಶೇಷಗಿರಿ ಹಾಡಿದ್ದಾರೆ. ಚಿತ್ರಕ್ಕೆ ಹರಿಕೃಷ್ಣ ಸಂಗೀತ ನೀಡಿದ್ದಾರೆ.
ಇದು ನಾಯಕನ ಇಂಟ್ರೋಡಕ್ಷನ್ ಸಾಂಗ್ ಆಗಿದ್ದು, ಹರ್ಷ ಈ ಹಾಡಿನ ನೃತ್ಯ ಸಂಯೋಜನೆ ಮಾಡಿದ್ದಾರೆ. ಸದ್ಯ ಈ ಹಾಡು ಯುಟ್ಯೂಬ್‌ನಲ್ಲಿ ಸೌಂಡ್ ಮಾಡುತ್ತಿದ್ದು, 65 ಗಂಟೆಗಳಲ್ಲಿ 13 ಲಕ್ಷ ಜನ ಈ ಹಾಡನ್ನು ವೀಕ್ಷಿಸಿದ್ದು, ಇದು ಚಿತ್ರತಂಡದ ವಿಶ್ವಾಸವನ್ನು ಹೆಚ್ಚಿಸಿದೆ. “ಇಷ್ಟು ಕಡಿಮೆ ಅವಧಿಯಲ್ಲಿ ಈ ತರಹದ ದಾಖಲೆ ಯಾವ ಕನ್ನಡ ಸಿನಿಮಾಕ್ಕೂ ಆಗಿಲ್ಲ. 65 ಗಂಟೆಗಳಲ್ಲಿ 13 ಲಕ್ಷ ಮಂದಿ ನಮ್ಮ ಚಿತ್ರದ ಟೈಟಲ್ ಟ್ರ್ಯಾಕ್ ಅನ್ನು ವೀಕ್ಷಿಸಿದ್ದಾರೆ’ ಎನ್ನುವುದು ನಿರ್ದೇಶಕ ಚೇತನ್ ಮಾತು.
ಅಂದಹಾಗೆ, ಹರಿಕೃಷ್ಣ ಹಾಗೂ ಧ್ರುವ ಸರ್ಜಾ ಕಾಂಬಿನೇಶನ್‌ನ ಮೂರನೇ ಚಿತ್ರ ಇದಾಗಿದೆ. ಈ ಹಿಂದೆ “ಅದ್ಧೂರಿ’, “ಬಹದ್ದೂರ್’ ಚಿತ್ರಗಳಿಗೂ ಹರಿಕೃಷ್ಣ ಸಂಗೀತ ನೀಡಿದ್ದು, ಆ ಚಿತ್ರಗಳ ಹಾಡುಗಳ ಬಗ್ಗೆಯೂ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ “ಭರ್ಜರಿ’ ಚಿತ್ರದ ಹಾಡಿಗೂ ಉತ್ತಮ ಪ್ರತಿಕ್ರಿಯೆ ಸಿಗುತ್ತಿರೋದರಿಂದ ಚಿತ್ರತಂಡ ಖುಷಿಯಾಗಿದೆ. ಚಿತ್ರದಲ್ಲಿ ಧ್ರುವ ಸರ್ಜಾಗೆ ನಾಯಕಿಯರಾಗಿ ರಚಿತಾ ರಾಮ್ ಹಾಗೂ ಹರಿಪ್ರಿಯಾ ನಟಿಸಿದ್ದಾರೆ. ಚಿತ್ರ ಮುಂದಿನ ತಿಂಗಳು ಬಿಡುಗಡೆಯಾಗಲಿದ್ದು, ಕನಕಪುರ ಶ್ರೀನಿವಾಸ್ ಈ ಚಿತ್ರದ ನಿರ್ಮಾಪಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.