ಭಾವನೆಗಳೇ ಪಾತ್ರಗಳಾಗಿರುವ ಭಾವಪೂರ್ಣ ಚಿತ್ರ!: “ಮದಿಪು” ನಿರ್ದೇಶಕನ ಕಮರ್ಷಿಯಲ್ ಸಿನಿಮಾ
Team Udayavani, Aug 30, 2022, 3:03 PM IST
“ಮದಿಪು’ ಸಿನಿಮಾಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದ ನಿರ್ದೇಶಕ ಚೇತನ್ ಮುಂಡಾಡಿ, ಶೀಘ್ರದಲ್ಲಿಯೇ ಮತ್ತೂಂದು ಸಿನಿಮಾವನ್ನು ಆರಂಭಿಸುವ ಸಿದ್ಧತೆ ಯಲ್ಲಿದ್ದಾರೆ.
ಅಂದಹಾಗೆ, ಚೇತನ್ ಮುಂಡಾಡಿ ನಿರ್ದೇಶಿಸುತ್ತಿರುವ ಹೊಸ ಸಿನಿಮಾಕ್ಕೆ “ಭಾವಪೂರ್ಣ’ ಎಂದು ಹೆಸರಿಡಲಾಗಿದ್ದು, ಇದೇ ಸೆ. 8 ರಿಂದ ಈ ಸಿನಿಮಾದ ಚಿತ್ರೀಕರಣ ಆರಂಭವಾಗುತ್ತಿದೆ.
ಚಿತ್ರೀಕರಣದ ಆರಂಭಕ್ಕೂ ಮುನ್ನ ಮಾಧ್ಯಮಗಳ ಮುಂದೆ ಬಂದಿದ್ದ ಚಿತ್ರತಂಡ, “ಭಾವಪೂರ್ಣ’ ಸಿನಿಮಾದ ಬಗ್ಗೆ ಒಂದಷ್ಟು ಮಾಹಿತಿಗಳನ್ನು ಹಂಚಿಕೊಂಡಿತು.
ಮೊದಲಿಗೆ ಮಾತನಾಡಿದ ನಿರ್ದೇಶಕ ಚೇತನ್ ಮುಂಡಾಡಿ, “ಇಲ್ಲಿಯವರೆಗೂ ಕಲಾತ್ಮಕ ಸಿನಿಮಾಗಳನ್ನು ನಿರ್ದೇಶಿಸಿರುವ ನನಗೆ ಇದು ಮೊದಲ ಕಮರ್ಷಿಯಲ್ ಸಿನಿಮಾ. ತೊಂಭತ್ತರ ಕಾಲಘಟ್ಟದಲ್ಲಿ ನಡೆಯುವ ಕಥೆಯನ್ನು ತೆರೆಮೇಲೆ ತರುತ್ತಿದ್ದೇವೆ. ಇಲ್ಲಿ ಭಾವನೆಗಳೇ ಪಾತ್ರಗಳು. ಪುಟ್ಟಗ್ರಾಮವೊಂದರಲ್ಲಿ 50ರ ವಯಸ್ಸಿನ ವ್ಯಕ್ತಿಯಲ್ಲಿ ಚಿಗುರುವ ಅನಿವಾರ್ಯ ಬಯಕೆಯನ್ನು ಈಡೇರಿಸಿಕೊಳ್ಳಲು ಆತ ಪಡುವ ಪರಿಪಾಟಗಳೇ ಸಿನಿಮಾದ ಕಥಾವಸ್ತು’ ಎಂದು “ಭಾವಪೂರ್ಣ’ ಸಿನಿಮಾದ ಕಥಾಹಂದರ ಬಿಚ್ಚಿಟ್ಟರು.
ಇದನ್ನೂ ಓದಿ: ನಾಳೆ ಸಿಹಿ ಸುದ್ದಿ ಕೊಡ್ತಾರಂತೆ ನಟಿ ರಮ್ಯಾ: ಚಿತ್ರರಂಗಕ್ಕೆ ಕಂಬ್ಯಾಕ್ ಮಾಡ್ತಾರ ಮೋಹಕ ತಾರೆ?
ಸಿನಿಮಾದ ಬಗ್ಗೆ ಮಾತನಾಡಿದ ನಿರ್ಮಾಪಕ ಪ್ರಶಾಂತ್ ಅಂಜನಪ್ಪ, “ನನಗೆ ಅಳುವ ಹಾಗೂ ಸಂದೇಶ ನೀಡುವ ಚಿತ್ರಗಳಲ್ಲಿ ಆಸಕ್ತಿ ಇಲ್ಲ. ಜನ ಸಿನಿಮಾ ನೋಡಲು ಬರುವುದು ತಮ್ಮ ನಿತ್ಯದ ಕಷ್ಟಗಳನ್ನು ಮರೆಯುವುದಕ್ಕಾಗಿ. ಚಿತ್ರದಲ್ಲೂ ದುಖದ ಸಂಗತಿ ಇದ್ದರೆ ಯಾರು ಇಷ್ಟ ಪಡುವುದಿಲ್ಲ. ಹಾಗಾಗಿ ಚೇತನ್ ಮುಂಡಾಡಿ ಒಳ್ಳೆಯ ಮನೋರಂಜನೆ ಯಿರುವ ಕಥೆ ಮಾಡಿಕೊಂಡಿದ್ದಾರೆ. ಅವರಿಗೆ ಬೇಕಾದನ್ನು ಒದಗಿಸುವುದನ್ನು ನಾನು ಮಾಡುತ್ತೇನೆ’ ಎಂದರು. ಇನ್ನು “ಭಾವಪೂರ್ಣ’ ಸಿನಿಮಾದಲ್ಲಿ ಧರ್ಮಣ್ಣ ಎಂಬ ಮುಖ್ಯಪಾತ್ರದಲ್ಲಿ ಹಿರಿಯ ನಟ ರಮೇಶ್ ಪಂಡಿತ್ ಅಭಿನಯಿಸುತ್ತಿದ್ದಾರೆ. ಮಂಜುನಾಥ್ ಹೆಗಡೆ, ಶೈಲಶ್ರೀ, ಮಂಗಳಾ, ನಾಗೇಂದ್ರ ಶಾ, ಅಥರ್ವ ಪ್ರಕಾಶ್, ವಿ. ಮನೋಹರ್, ಸುಜಯ್ ಶಾಸ್ತ್ರಿ, ಎಂ.ಕೆ ಮಠ, ವಿನ್ಯಾ, ಉಗ್ರಂ ಮಂಜು, ಗೋವಿಂದೇ ಗೌಡ ಮುಂತಾದವರು “ಭಾವಪೂರ್ಣ’ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಇದೇ ಸೆಪ್ಟೆಂಬರ್ 8 ರಿಂದ ಸೌತಡ್ಕ, ಸಾಗರ, ಜೋಗ, ಮುರುಡೇಶ್ವರದಲ್ಲಿ “ಭಾವಪೂರ್ಣ’ ಸಿನಿಮಾದ ಚಿತ್ರೀಕರಣ ನಡೆಯಲಿದೆ. “ಭಾವಪೂರ್ಣ’ ಚಿತ್ರಕ್ಕೆ ಸುಂದರ್ ವೀಣಾ ಸಂಭಾಷಣೆ ಬರೆದಿದ್ದು, ಚಿತ್ರದ ಹಾಡುಗಳಿಗೆ ವಿ. ಮನೋಹರ್ ಸಂಗೀತ ಸಂಯೋಜಿಸಿದ್ದಾರೆ. ಚಿತ್ರಕ್ಕೆ ಪ್ರಸನ್ನ ಛಾಯಾಗ್ರಹಣ, ಕೀರ್ತಿ ಸಂಕಲನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.