Bhuvanam Gaganam; ಚಿತ್ರೀಕರಣ ಮುಗಿಸಿದ ಪೃಥ್ವಿ – ಪ್ರಮೋದ್ ಸಿನಿಮಾ
Team Udayavani, Jan 10, 2024, 1:02 PM IST
ನಟರಾದ ಪ್ರಮೋದ್ ಹಾಗೂ ಪೃಥ್ವಿ ಅಂಬಾರ್ ನಾಯಕರಾಗಿ ಅಭಿನಯಿಸುತ್ತಿರುವ “ಭುವನಂ ಗಗನಂ’ ಸಿನಿಮಾದ ಚಿತ್ರೀಕರಣ ಇತ್ತೀಚೆಗೆ ಪೂರ್ಣಗೊಂಡಿತು. ಬೆಂಗಳೂರಿನ ಹೆಸರಘಟ್ಟದಲ್ಲಿ ಹಾಕಲಾಗಿದ್ದ ಅದ್ಧೂರಿ ಸೆಟ್‌ನಲ್ಲಿ “ಭುವನಂ ಗಗನಂ’ ಸಿನಿಮಾದ ಅಂತಿಮ ದೃಶ್ಯಗಳನ್ನು ಚಿತ್ರತಂಡ ಚಿತ್ರೀಕರಿಸಿಕೊಂಡಿತು.
ಇದೇ ವೇಳೆ ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ಮಾಧ್ಯಮಗಳನ್ನು ಆಹ್ವಾನಿಸಿದ್ದ ಚಿತ್ರತಂಡ, ಸಿನಿಮಾದ ಬಗ್ಗೆ ಒಂದಷ್ಟು ಮಾಹಿತಿಗಳನ್ನು ಹಂಚಿಕೊಂಡಿತು.
ಈ ಸಂದರ್ಭದಲ್ಲಿ ಮಾತನಾಡಿದ ನಟ ಪ್ರಮೋದ್ ಮಾತನಾಡಿ, “ಸಿನಿಮಾದಲ್ಲಿ ನನ್ನ ಭಾಗದ ಶೂಟಿಂಗ್ ಕಳೆದ ಅಕ್ಟೋಬರ್ ತಿಂಗಳಲ್ಲಿಯೇ ಮುಗಿದಿತ್ತು. ಅದ್ಭುತ ಸೆಟ್‌ನಲ್ಲಿ ಇಡೀ ಸಿನಿಮಾವನ್ನು ಅದ್ಧೂರಿಯಾಗಿ ಚಿತ್ರೀಕರಿಸಲಾಗಿದೆ. ಈ ಚಿತ್ರದಲ್ಲಿ ನಾನು ಸ್ಟೈಲೀಶ್ ಆಗಿ, ಲವ್ ಬಾಯ್ ಆಗಿ ಕಾಣಿಸಿಕೊಂಡಿದ್ದೇನೆ’ ಎಂದು ತಮ್ಮ ಪಾತ್ರ ಪರಿಚಯ ಮಾಡಿಕೊಟ್ಟರು.
ಮತ್ತೂಬ್ಬ ನಟ ಪೃಥ್ವಿ ಅಂಬಾರ್ ಮಾತನಾಡಿ, “ಇತ್ತೀಚಿನ ದಿನಗಳಲ್ಲಿ ಸಿನಿಮಾ ಮಾಡಲು ಒಬ್ಬ ಸ್ಟ್ರಾಂಗ್ ಪ್ರೊಡ್ಯೂಸರ್ ಸಿಗುವುದು ಕಷ್ಟ. ಆದರೆ ಈ ಸಿನಿಮಾಕ್ಕೆ ಒಬ್ಬ ಸ್ಟ್ರಾಂಗ್ ಪ್ರೊಡ್ನೂಸರ್ ಸಿಕ್ಕಿದ್ದಾರೆ. ಸಿನಿಮಾದ ಕಂಟೆಂಟ್ ಗೆ ಏನು ಬೇಕೋ ಅದೆಲ್ಲವನ್ನೂ ಮನಸಾರೆ, ತುಂಬಾ ಪ್ರೀತಿಯಿಟ್ಟು ಕೊಟ್ಟಿದ್ದಾರೆ. ಇಲ್ಲಿಯವರೆಗೆ ನಾನು ಕಾಣಿಸಿಕೊಂಡಿರದ ಪಾತ್ರ ಈ ಸಿನಿಮಾದಲ್ಲಿ ಸಿಕ್ಕಿದೆ’ ಎಂದರು.
ಇದನ್ನೂ ಓದಿ:Ballari municipal corporation; ಇಬ್ಬರಿಂದ ನಾಮಪತ್ರ ವಾಪಸ್; ಮೇಯರ್ ಆಗಿ ಶ್ವೇತಾ ಆಯ್ಕೆ
ನಿರ್ದೇಶಕ ಗಿರೀಶ್ ಮೂಲಿಮನಿ, ನಿರ್ಮಾಪಕ ಎಂ. ಮುನೇಗೌಡ ಸಿನಿಮಾದ ಚಿತ್ರೀಕರಣದ ಅನುಭವಗಳನ್ನು ಹಂಚಿಕೊಂಡರು. ಸುಮಾರು 75 ದಿನಗಳ ಕಾಲ ಮೈಸೂರು, ಹಾವೇರಿ, ಕುದುರೆಮುಖ, ಕಳಸ, ಕನ್ಯಾಕುಮಾರಿ. ಬೆಂಗಳೂರು ಮುಂತಾದ ಕಡೆಗಳಲ್ಲಿ “ಭುವನಂ ಗಗನಂ’ ಸಿನಿಮಾದ ಚಿತ್ರೀಕರಣ ಮಾಡಲಾಗಿದೆ. ಲವ್, ರೋಮ್ಯಾನ್ಸ್, ಫ್ಯಾಮಿಲಿ ಎಮೋಷನ್ ಕಥಾಹಂದರ ಹೊಂದಿರುವ “ಭುವನಂ ಗಗನಂ’ ಸಿನಿಮಾದಲ್ಲಿ ನಾಯಕರಾದ ಪ್ರಮೋದ್ ಮತ್ತು ಪೃಥ್ವಿ ಅವರಿಗೆ ರೆಚೆಲ್ ಡೇವಿಡ್, ಅಶ್ವಥಿ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.
ಉಳಿದಂತೆ ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮ್ಮಿನಾಡು, ಸಿದ್ಲಿಂಗು ಶ್ರೀರ್ಧ, ಹರಿಣಿ, ಸ್ಪರ್ಶ ರೇಖಾ, ಪ್ರಜ್ವಲ್ ಶೆಟ್ಟಿ, ಚೇತನ್ ದುರ್ಗ ಮುಂತಾ ದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಸಿನಿಮಾದ ಹಾಡುಗಳಿಗೆ ಗುಮ್ಮಿನೇನಿ ವಿಜಯ್ ಸಂಗೀತ ಸಂಯೋಜಿಸಿದ್ದು, ಉದಯ್ ಲೀಲಾ ಛಾಯಾಗ್ರಹಣ, ಸುನೀಲ್ ಕಶ್ಯಪ್ ಸಂಕಲನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.