ಬಿಚ್ಚುಗತ್ತಿಗೆ ಸಿನಿಮಾ ರೂಪ

Team Udayavani, Nov 11, 2018, 11:19 AM IST

bichchugatti.jpg

ಕನ್ನಡದಲ್ಲಿ ಕಾದಂಬರಿ ಆಧಾರಿತ ಚಿತ್ರಗಳ ಟ್ರೆಂಡ್‌ ಮತ್ತೆ ಜನಪ್ರಿಯವಾಗುತ್ತಿದ್ದು, ಆ ಸಾಲಿಗೆ ಈಗ “ರಾಜಾ ಬಿಚ್ಚುಗತ್ತಿ ಭರಮಣ್ಣ ನಾಯಕ’ ಐತಿಹಾಸಿಕ ಕಾದಂಬರಿ ಸೇರ್ಪಡೆಯಾಗುತ್ತಿದೆ. ಕನ್ನಡದ ಜನಪ್ರಿಯ ಲೇಖಕ ಮತ್ತು ಕಾದಂಬರಿಕಾರ ಬಿ.ಎಲ್‌ ವೇಣು ಅವರ, ಹದಿನೈದನೇ ಶತಮಾನದ ಚಿತ್ರದುರ್ಗದ ನಾಯಕ ಅರಸರ ಪರಂಪರೆಯನ್ನು ಸಾರುವ ರಾಜಾ ಬಿಚ್ಚುಗತ್ತಿ ಭರಮಣ್ಣ ನಾಯಕ ಐತಿಹಾಸಿಕ ಕಾದಂಬರಿ ಈಗ “ಬಿಚ್ಚುಗತ್ತಿ’ ಹೆಸರಿನಲ್ಲಿ ಚಿತ್ರವಾಗಿ ಬೆಳ್ಳಿತೆರೆಮೇಲೆ ಬರಲು ತಯಾರಾಗುತ್ತಿದೆ.

ಬಿ.ಎಲ್‌ ವೇಣು ಅವರೇ “ಬಿಚ್ಚುಗತ್ತಿ’ ಚಿತ್ರಕ್ಕೆ ಚಿತ್ರಕಥೆ ಮತ್ತು ಸಂಭಾಷಣೆಯನ್ನು ಬರೆಯುತ್ತಿದ್ದು, “ಡವ್‌’, “ಕಾಲೇಜ್‌ ಕುಮಾರ’, “ವಿಕ್ಟರಿ-2′ ಚಿತ್ರಗಳನ್ನು ನಿರ್ದೇಶಿಸಿರುವ ಯುವ ನಿರ್ದೇಶಕ ಹರಿ ಸಂತೋಷ್‌ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸುಮಾರು ಒಂದೂವರೆ ವರ್ಷಗಳಿಂದ “ಬಿಚ್ಚುಗತ್ತಿ’ ಚಿತ್ರದ ಕಥೆ, ಚಿತ್ರಕಥೆ ಮತ್ತು ಇನ್ನಿತರ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಭರದಿಂದ ನಡೆಯುತ್ತಿದ್ದು, ಚಿತ್ರತಂಡ ಯೋಜನೆಯ ಪ್ರಕಾರ ಮುಂದಿನ ಡಿಸೆಂಬರ್‌ ವೇಳೆಗೆ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.

ಸಾಯಿಕೃಷ್ಣ ಪ್ರೊಡಕ್ಷನ್ಸ್‌ ಬ್ಯಾನರ್‌ನಲ್ಲಿ ಬಿಗ್‌ ಬಜೆಟ್‌ನಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದ್ದು, ಹದಿನೈದನೇ ಶತಮಾನದ ಚಿತ್ರದುರ್ಗದ ಅರಸರ ಜೀವನ ಚಿತ್ರಣ ತೆರೆಮೇಲೆ ಅನಾವರಣವಾಗಲಿದೆ. ಇನ್ನು “ಬಿಚ್ಚುಗತ್ತಿ’ ಚಿತ್ರದ ಬಗ್ಗೆ ಒಂದಷ್ಟು ಸಂಗತಿಗಳನ್ನು ಬಿಚ್ಚಿಟ್ಟಿರುವ ನಿರ್ದೇಶಕ ಹರಿ ಸಂತೋಷ್‌, “ಗಂಡುಗಲಿ ಮದಕರಿ ನಾಯಕನಿಗಿಂತ ಸುಮಾರು ಎರಡು ತಲೆಮಾರು ಹಿಂದಿನ ಕಥೆ ಈ ಚಿತ್ರದಲ್ಲಿದೆ.

ಹದಿನೈದನೇ ಶತಮಾನದ ದುರ್ಗದ ಜನ-ಜೀವನ, ಪರಿಸರ, ಸಂಸ್ಕೃತಿ-ಶೈಲಿ ಎಲ್ಲವೂ ತೆರೆಮೇಲೆ ಬರುತ್ತದೆ. ಈ ಕಥೆಯನ್ನು ರಜನಿಕಾಂತ್‌, ಉಪೇಂದ್ರ, ಪ್ರಕಾಶ್‌ ರೈ ಅವರಂಥ ನಟರು ಮೆಚ್ಚಿಕೊಂಡಿದ್ದರು. ಟಿ.ಎಸ್‌ ನಾಗಾಭರಣ ಅವರಂಥ ನಿರ್ದೇಶಕರು ಈ ಕಥೆಯನ್ನು ಚಿತ್ರ ಮಾಡಲು ಯೋಚಿಸಿದ್ದರು. ಸುಮಾರು ಎಂಟು ವರ್ಷಗಳಿಂದ ಈ ಕಥೆಯನ್ನು ಚಿತ್ರ ಮಾಡಲು ಹಲವು ಪ್ರಯತ್ನಗಳು ನಡೆದಿದ್ದರೂ, ಕಾರಣಾಂತರಗಳಿಂದ ಚಿತ್ರವಾಗಿರಲಿಲ್ಲ.

ಆದರೆ ಈಗ ಇಂಥ ಅಪರೂಪದ ಕಥೆಯನ್ನು ಚಿತ್ರರೂಪದಲ್ಲಿ ನಿರ್ದೇಶನ ಮಾಡುವ ಅವಕಾಶ, ಅದೃಷ್ಟ ನನಗೆ ಸಿಕ್ಕಿದೆ’ ಎನ್ನುತ್ತಾರೆ. ಚಿತ್ರದ ಪೂರ್ವ ತಯಾರಿ ಬಗ್ಗೆ ಮಾತನಾಡುವ ಸಂತು, “ಇದೊಂದು ಐತಿಹಾಸಿಕ ಕಥೆಯಾಗಿದ್ದರಿಂದ ಚಿತ್ರದ ಸ್ಕ್ರಿಪ್ಟ್ ಕೆಲಸಕ್ಕೆ ಸುಮಾರು ಒಂದೂವರೆ ವರ್ಷ ಸಮಯ ತೆಗೆದುಕೊಂಡಿದ್ದೇವೆ. ಚಿತ್ರದ ಚಿತ್ರಕಥೆ ಮತ್ತು ಸಂಭಾಷಣೆಯನ್ನು ಮೂಲ ಲೇಖಕರಾದ ಬಿ.ಎಲ್‌ ವೇಣು ಅವರೆ ಬರೆಯುತ್ತಿದ್ದಾರೆ.

ಸದ್ಯಕ್ಕೆ ಚಿತ್ರದ ಸ್ಕ್ರಿಪ್ಟ್ ಕೆಲಸಗಳು ಅಂತಿಮವಾಗಿದ್ದು, ಚಿತ್ರದ ಕಲಾವಿದರು ಮತ್ತು ತಂತ್ರಜ್ಞರ ಆಯ್ಕೆ ಅಂತಿಮ ಹಂತದಲ್ಲಿದೆ. ಕೆಲ ದಿನಗಳಲ್ಲಿ ಚಿತ್ರತಂಡದ ಸಂಪೂರ್ಣ ಮಾಹಿತಿ ನೀಡಲಿದ್ದೇವೆ’ ಎನ್ನುತ್ತಾರೆ. ಮೂಲಗಳ ಪ್ರಕಾರ ಹಿರಿಯ ಹಾಸ್ಯನಟ ಡಿಂಗ್ರಿ ನಾಗರಾಜ್‌ ಪುತ್ರ ರಾಜವರ್ಧನ್‌ ಈ ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದ್ದು, ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಂದ ಮೇಲಷ್ಟೆ  ಚಿತ್ರದ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ. 

ಇತ್ತೀಚೆಗಷ್ಟೆ ಬಿ.ಎಲ್‌ ವೇಣು ಅವರ ಗಂಡುಗಲಿ ಮದಕರಿ ನಾಯಕ ಕಾದಂಬರಿ ಚಲನಚಿತ್ರವಾಗಿ ತೆರೆಗೆ ಬರಲು ಘೋಷಣೆಯಾಗಿತ್ತು. ಅದರ ಬೆನ್ನಲ್ಲೆ ಬಿ.ಎಲ್‌ ವೇಣು ಅವರ ಮತ್ತೂಂದು ಕಾದಂಬರಿ ಚಿತ್ರರೂಪ ಪಡೆದುಕೊಳ್ಳುತ್ತಿದೆ. ಒಟ್ಟಾರೆ ಕಾದಂಬರಿಗಳು ದೃಶ್ಯರೂಪದಲ್ಲಿ ತೆರೆಗೆ ಬರುತ್ತಿರುವುದು ಕನ್ನಡದ ಮಟ್ಟಿಗೆ ಸ್ವಾಗತಾರ್ಹ ಬೆಳವಣಿಗೆ ಎನ್ನುವುದರಲ್ಲಿ ಎರಡು ಮಾತಿಲ್ಲ. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

Vijay Raghavendra is in Rudrabhishekam Movie

Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್‌ ರಾಘವೇಂದ್ರ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.