‘ಮರಳಿ ಬಾ ಮನ್ವಂತರವೇ’ ಆಧಾರಿತ ಚಿತ್ರದಲ್ಲಿ ಬೀದರ್ ಚೆಲುವೆ ಸುಲಕ್ಷಾ ಕೈರಾ

Team Udayavani, Jan 9, 2024, 6:39 PM IST

1-bb-a

ಕಾದಂಬರಿ ಆಧಾರಿ ಚಿತ್ರಗಳ ಕೊರತೆ ಇರುವ ಹೊತ್ತಿನಲ್ಲಿ ಸುಪ್ರಧಾ ಫಿಲ್ಮ್ಸ್ ಲಾಂಛನದಡಿ ನಿರ್ಮಾಪಕ ವಿಜಯೇಂದ್ರ ಒಡೆಯರ್ ಕಾದಂಬರಿ ಆದರಿಸಿ ಕನ್ನಡ ಚಿತ್ರ ನಿರ್ಮಿಸುತ್ತಿದ್ದಾರೆ. ಅವರ ಚೊಚ್ಚಲ ನಿರ್ಮಾಣದ ಸಿನಿಮಾಗೆ ಸಾಹಿತಿ ಪಂಕಜಾ ವಿಜೇಂದ್ರ ಕೃತಿ ‘ಮರಳಿ ಬಾ ಮನ್ವಂತರವೇ’ ಆಯ್ದುಕೊಂಡಿದ್ದಾರೆ.

ಪತ್ರಕರ್ತ ಅರಕಲಗೂಡು ಜಯಕುಮಾರ್ ‘ಮರಳಿ ಬಾ ಮನ್ವಂತರವೇ’ ಚಲನಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸಾಹಿತಿ – ಕವಿ ರೂಪ ಹಾಸನ ಇದೇ ಮೊದಲ ಬಾರಿಗೆ ಈ ಚಿತ್ರಕ್ಕಾಗಿ ಗೀತ ಸಾಹಿತ್ಯ ಬರೆದಿದ್ದಾರೆ. ಈ ಚಿತ್ರದ ಇನ್ನೊಂದು ವಿಶೇಷವೆಂದರೆ ರಾಂಗೋಪಾಲ್ ವರ್ಮಾ ತೆಲುಗು ಚಿತ್ರರಂಗಕ್ಕೆ ಪರಿಚಯಿಸಿದ ಆನೆಂ ವೆಂಕಟರಾವ್, ಛಾಯಾಗ್ರಹಣ ಹಾಗೂ ಡಿಓಪಿ ಹೊಣೆ ಹೊತ್ತಿದ್ದಾರೆ.

ಲಿಂಗತ್ವ ಅಸಮಾನತೆ ಹಾಗೂ ಜಾತಿ ಸೂಕ್ಷ್ಮದ ಎಳೆಯನ್ನು ಹೊಂದಿರುವ ಕಥಾವಸ್ತುವಿನ ಸಿನಿಮಾಗೆ ಕೃತಿಯ ಹೆಸರನ್ನೆ ಇರಿಸಲಾಗಿದೆ. ಮರಳಿ ಬಾ ಮನ್ವಂತರೇ ಚಿತ್ರ ಮಹಿಳಾ ಪ್ರಧಾನ ಕಥಾವಸ್ತುವನ್ನು ಹೊಂದಿದ್ದು ಮುಖ್ಯ ಭೂಮಿಕೆಯಲ್ಲಿ ಬೀದರ್ ಮೂಲದ ಸುಲಕ್ಷಾ ಕೈರಾ ನಟಿಸುತ್ತಿದ್ದಾರೆ.

ಸ್ನೇಹಿತ, ವರ್ಣಿಕಾ ಚಿತ್ರಗಳು ಸೇರಿದಂತೆ ಕನ್ನಡ ಮತ್ತು ತೆಲುಗಿನಲ್ಲಿ ನಿರ್ಮಾಣಗೊಂಡ ಚಿತ್ರ ಸೇಡು, ತಮಿಳಿನಲ್ಲಿ ನಿರ್ಮಾಣವಾಗುತ್ತಿರುವ ಎಬಿ ಪಾಸಿಟೀವ್ ಚಿತ್ರದಲ್ಲಿ ನಟಿಸುತ್ತಿರುವ ಅವರಿಗೆ ‘ಮರಳಿ ಬಾ ಮನ್ವಂತರವೇ… ಚಿತ್ರದ ಪಾತ್ರ ವೃತ್ತಿ ಜೀವನದ ಮಹತ್ವದ ಪಾತ್ರವಾಗಿದೆ. ಇದಕ್ಕಾಗಿ ಸಾಕಷ್ಟು ತಯಾರಿ ನಡೆಸಿರುವ ಅವರು ಇದೀಗ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ಬೀದರ್ ನಿಂದ ಸಿನಿಮಾ ಕ್ಷೇತ್ರಕ್ಕೆ ಸುಲಕ್ಷಾ ಕೈರಾ ಭರವಸೆಯ ಕೊಡುಗೆಯಾಗಿದ್ದಾರೆ. ಇವರ ಜೋಡಿಯಾಗಿ ಹಾಸನ ಜಿಲ್ಲೆಯ ಅರಕಲಗೂಡಿನ ಹೊಸ ಪ್ರತಿಭೆ ಆರ್ಯನ್ ಕನ್ನಡ ಚಿತ್ರರಂಗಕ್ಕೆ ನಾಯಕರಾಗಿ ಪರಿಚಯವಾಗುತ್ತಿದ್ದಾರೆ. ಕಿರು ತೆರೆಯಲ್ಲಿ ಸದ್ದು ಮಾಡಿರುವ ಬಾಲ ನಟಿ ರೀತುಸಿಂಗ್ (ಸಿಹಿ) ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ರಾಮನಗರ ಜಿಲ್ಲೆಯ ಕೆಂಗಲ್ ವೀರಾಂಜನೇಯ ದೇಗುಲದ ಆವರಣದಲ್ಲಿ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆಯಿತು. ದೇಗುಲ ಟ್ರಸ್ಟ್ ಅಧ್ಯಕ್ಷ ಚಂದ್ರು ಹಾಗೂ ಉದ್ಯಮಿ ಜಗದೀಶ್ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭಹಾರೈಸಿದರು. ನಾಯಕ-ನಾಯಕಿ ಮದುವೆ ದೃಶ್ಯಗಳನ್ನು ಈ ಸಂದರ್ಭದಲ್ಲಿ ಚಿತ್ರೀಕರಿಸಿ ಕೊಳ್ಳಲಾಯಿತು. ಕೊಪ್ಪಳ ಜಿಲ್ಲೆಯ ಸಂಗಮೇಶ್ ಗದ್ದಿ ಸಹ ನಿರ್ದೇಶನ, ಮಹೇಶ ಉಣಚಗೇರಿ, ಯುವ ಪತ್ರಕರ್ತೆ ಸಾನಿಯಾ ಶಿವಮೊಗ್ಗ ಸಹಾಯಕ ನಿರ್ದೇಶಕರಾಗಿದ್ಧಾರೆ. ಅನಂತ ಆರ್ಯನ್ ಸಂಗೀತ, ಉದಯ ಜಗಳೂರು ಸಂಕಲನ ಮಾಡುತ್ತಿದ್ದಾರೆ. ಬೆಂಗಳೂರು, ಚನ್ನಪಟ್ಟಣ ತಾಲೂಕಿನ ವಿವಿಧ ಸ್ಥಳಗಳಲ್ಲಿ ಚಿತ್ರೀಕರಣ ಭರದಿಂದ ಸಾಗಿದೆ.

ಚಿತ್ರದ ತಾರಾಗಣದಲ್ಲಿ ಸುಲಕ್ಷಾ ಕೈರಾ , ಆರ್ಯನ್, ಬಾಲ ನಟಿ ರೀತು ಸಿಂಗ್ , ಮೂಗು ಸುರೇಶ್, ಮಯೂರ್, ಶ್ರೀ ಪರಿಣೀತಿ, ಸಾನಿಯಾ, ಜ್ಯೋತಿಕಾ, ಅನ್ನಪೂರ್ಣ, ಎಚ್ ಎಲ್ ಜನಾರ್ಧನ್, ಜಿ ಆರ್ ಜಗದೀಶ್ ಮತ್ತಿತರರು ಇದ್ದಾರೆ.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.