ಕಾಮಿಡಿ ಮಾಡಲು ಬೋಜರಾಜ ರೆಡಿ
Team Udayavani, Feb 14, 2022, 2:37 PM IST
ಇತ್ತ ಕನ್ನಡ ಚಿತ್ರರಂಗದಲ್ಲಿ ಸಿನಿಮಾಗಳ ರಿಲೀಸ್ ಚಟುವಟಿಕೆ ಗರಿಗೆದರಿದಂತೆ, ಅತ್ತ ತುಳು ಚಿತ್ರರಂಗದಲ್ಲೂ ರಿಲೀಸ್ ಭರಾಟೆ ಜೋರಾಗುತ್ತಿದೆ. ಕೋವಿಡ್ ನಿಂದಾಗಿ ಕಳೆದ 2 ವರ್ಷಗಳಿಂದ ಸ್ತಬ್ಧವಾಗಿದ್ದ ತುಳು ಚಿತ್ರರಂಗದಲ್ಲಿ, ಲಾಕ್ಡೌನ್ ಬಳಿಕ ಮೊದಲ ಬಾರಿಗೆ ಔಟ್ ಆ್ಯಂಡ್ ಔಟ್ ಕಾಮಿಡಿ ಕಥಾ ಹಂದರದ “ಬೋಜರಾಜ್ ಎಂಬಿಬಿಎಸ್’ ಚಿತ್ರ ಬಿಡುಗಡೆಯಾಗುತ್ತಿದ್ದು, ಇದೇ ಫೆ. 18ಕ್ಕೆ ಚಿತ್ರ ತೆರೆ ಕಾಣುತ್ತಿದೆ.
ಕೋಸ್ಟಲ್ವುಡ್ನ ನವರಸರಾಜ ಖ್ಯಾತಿಯ ಬೋಜರಾಜ್ ವಾಮಂಜೂರು “ಬೋಜರಾಜ್ ಎಂಬಿಬಿಎಸ್’ ಚಿತ್ರದಲ್ಲಿ ನಾಯಕನಾಗಿ ತೆರೆಮೇಲೆ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಶೀತಲ್ ನಾಯಕ್, ನವ್ಯಾ ಪೂಜಾರಿ ನಾಯಕಿಯರಾಗಿ ಅಭಿನಯಿಸಿದ್ದಾರೆ. ಅರವಿಂದ್ ಬೋಳಾರ್ ಚಿತ್ರದಲ್ಲಿ 3 ವಿಭಿನ್ನ ಶೈಲಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವರೊಂದಿಗೆ ತುಳು ಚಿತ್ರರಂಗ, ರಂಗಭೂಮಿ ದಿಗ್ಗಜರಾದ ದೇವದಾಸ್ ಕಾಪಿಕಾಡ್ ಮತ್ತು ವಿಜಯಕುಮಾರ್ ಕೊಡಿಯಾಲ್ಬೈಲ್ ಇದೇ ಮೊದಲ ಬಾರಿಗೆ “ಬೋಜರಾಜ್ ಎಂಬಿಬಿಎಸ್’ ಚಿತ್ರದಲ್ಲಿ ತೆರೆಮೇಲೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.
ಇದನ್ನೂ ಓದಿ:ವಿದೇಶಿ ಕನ್ನಡಿಗರಿಂದ ‘ತೋತಾಪುರಿ’ಗೆ ಬಹುಪರಾಕ್
ಉಳಿದಂತೆ ತುಳು ಚಿತ್ರರಂಗದ ಅನೇಕ ಕಲಾವಿದರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. “ದರ್ಬಾರ್ ಸಿನೆಮಾಸ್’ ಬ್ಯಾನರಿನಲ್ಲಿ ರಫೀಕ್ ದರ್ಬಾರ್ ನಿರ್ಮಿಸಿರುವ ಈ ಚಿತ್ರಕ್ಕೆ ಇಸ್ಮಾಯಿಲ್ ಮೂಡುಶೆಡ್ಡೆ ನಿರ್ದೇಶನವಿದೆ. ಕಳೆದ ಕೆಲ ದಿನಗಳಿಂದ ಭರ್ಜರಿಯಾಗಿ ಚಿತ್ರದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, “ಬೋಜರಾಜ್ ಎಂಬಿಬಿಎಸ್’ ಚಿತ್ರವನ್ನು ಈ ವಾರ ತುಳು ಸಿನಿಪ್ರಿಯರ ಮುಂದೆ ತರುತ್ತಿದೆ. ಆರಂಭದಲ್ಲಿ ಕರ್ನಾಟಕದಲ್ಲಿ ಬಿಡುಗಡೆಯಾಗಲಿರುವ “ಬೋಜರಾಜ್ ಎಂಬಿಬಿಎಸ್’ ಚಿತ್ರವನ್ನು ಬಳಿಕ ಗಲ್ಫ್ ಮತ್ತು ಇತರ ದೇಶಗಳಲ್ಲೂ ಬಿಡುಗಡೆ ಮಾಡುವ ಯೋಜನೆಯಲ್ಲಿದೆ ಚಿತ್ರತಂಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.