ಬೈ 1 ಗೆಟ್ 1 ಫ್ರೀ ಅಂತಿದ್ದಾರೆ ಸಹೋದರರು
Team Udayavani, May 2, 2020, 12:06 PM IST
ಕನ್ನಡದಲ್ಲಿ ಒಂದು ವಿಭಿನ್ನ ಶೀರ್ಷಿಕೆಯ ಚಿತ್ರ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಅದು “ಬೈ 1 ಗೆಟ್ 1 ಫ್ರೀ’. ಚಿತ್ರೀಕರಣ ಮುಗಿಸಿಕೊಂಡು ಪ್ರಚಾರ ಕೆಲಸ ಶುರು ಮಾಡಬೇಕು ಅನ್ನುವಷ್ಟರಲ್ಲಿ ಕೋವಿಡ್ 19 ಆವರಿಸಿದೆ. ಆದರೆ ಈ ಚಿತ್ರದ ಪೋಸ್ಟರ್ ಅನ್ನು ಆನಂದ್ ಆಡಿಯೋ ಯುಟ್ಯೂಬ್ ಅಲ್ಲಿ ಬಿಡುಗಡೆ ಮಾಡಲಾಗಿದೆ.
ಈ ಚಿತ್ರದ ಮತ್ತೂಂದು ಆಕರ್ಷಣೆ ಅಂದರೆ ಅವಳಿ ಸಹೋದರರು ಮಧು ಮಿಥುನ್ ಹಾಗೂ ಮನು ಮಿಲನ್ ಮುಖ್ಯ ಪಾತ್ರ ನಿರ್ವಹಿಸಿರುವುದು. ಜನಪ್ರಿಯ ನಟ ಕಿಶೋರ್ ಇಲ್ಲಿ ಕೇಂದ್ರ ಬಿಂದು. ರಿಷಿತಾ ಮಲ್ನಾಡ್, ಉಷ ಭಂಡಾರಿ, ಗೌರೀಶ್ ಅಕ್ಕಿ, ರೋಷಿಣಿ ತೆಲ್ಕರ್, ಬಲರಜವಾಡಿ ಹಾಗೂ ಇತರರು ತಾರಗಣದಲ್ಲಿದ್ದಾರೆ.
ಮೂಲತಃ ಮೈಸೂರಿನವರಾದ ಮಧು ಹಾಗೂ ಮಿಥುನ್ ಅವಳಿ ಸಹೋದರರಾಗಿ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಕಿರಿ ವಯಸ್ಸಿನ ಕೆಲವು ಘಟನೆಗಳು ಈ ಚಿತ್ರದಲ್ಲಿ ಅಡಕವಾಗಿದೆ. ಅವಳಿ ಸಹೋದರರು ಏನೇನು ಅನುಭವಿಸಬೇಕಾಗುತ್ತದೆ ಎಂಬುದನ್ನೂ ಈ ಸಸ್ಪೆನ್ಸ್-ಥ್ರಿಲ್ಲರ್ ಸಿನಿಮಾದಲ್ಲಿ ಹೇಳಲಾಗಿದೆ. ಎಸ್‌ಬಿಎಸ್‌ಸಿ ಕ್ರಿಯೇಷನ್ಸ್ ಅಡಿಯಲ್ಲಿ ಮದುರಾಜ್ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕ ಹರೀಶ್ ಅನಿಲ್ಗೋಡ್ ಚಿತ್ರದಲ್ಲಿ ಅವಳಿ ಜವಳಿ ಮಕ್ಕಳು ಹುಟ್ಟಿದರೆ ಜರುಗುವ ಪ್ಲಸ್ ಹಾಗೂ ಮೈನಸ್ ವಿಚಾರ ಇಟ್ಟುಕೊಂಡಿದ್ದಾರೆ ಚಿತ್ರಕತೆಯಲ್ಲಿ. ಚಿತ್ರದ ನಾಲ್ಕು ಹಾಡುಗಳಿಗೆ ದಿನೇಶ್ ಕುಮಾರ್ ರಾಗ ಸಂಯೋಜನೆ ಮಾಡಿದ್ದು ವಿಜಯಪ್ರಕಾಶ್, ಅನನ್ಯ ಭಟ್, ಶರತ್ ಹಾಗೂ ಇತರರು ಹಾಡು ಹೇಳಿದ್ದಾರೆ. ಈ ಚಿತ್ರಕ್ಕೆ ಅಭಿಷೇಕ್ ಪಾಂಡೆ ಹಾಗೂ ವಿಶ್ವಜಿತ್ ರಾವ್ ಛಾಯಾಗ್ರಹಣ ಮಾಡಿದ್ದಾರೆ. ಸಂಕಲನವನ್ನು ಸುರೇಶ್ ಅರ್ಮೂಗಮ್ ನಿರ್ವಹಿಸಿದ್ದಾರೆ. ಕೊರೊನಾ ಮುಗಿದ ಬಳಿಕ ಚಿತ್ರ ಬಿಡುಗಡೆ ಮಾಡುವ ಯೋಚನೆ ಚಿತ್ರತಂಡಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
MUST WATCH
ಹೊಸ ಸೇರ್ಪಡೆ
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.