Actor Darshan: ಮಹಿಳೆಯರ ಅವಹೇಳನ: ನಟ ದರ್ಶನ್ ವಿರುದ್ಧ 2 ಪ್ರತ್ಯೇಕ ದೂರು
Team Udayavani, Feb 24, 2024, 10:59 AM IST
ಬೆಂಗಳೂರು: ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಹಾಗೂ ನಿರ್ಮಾಪಕ ಉಮಾಪತಿ ಗೌಡಗೆ ನಿಂದನೆ ಆರೋಪದಡಿ ನಟ ದರ್ಶನ್ ವಿರುದ್ಧ ಪುಟ್ಟೇನಹಳ್ಳಿ ಮತ್ತು ರಾಜರಾಜೇಶ್ವರಿನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಶುಕ್ರವಾರ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ಮುಂಭಾಗ 50ಕ್ಕಿಂತಲೂ ಹೆಚ್ಚಿನ ಮಹಿಳೆಯರು ಜಮಾಯಿಸಿ ದರ್ಶನ್ ತಮ್ಮ ನಡವಳಿಕೆ ಸರಿಪಡಿಸಿಕೊಂಡು, ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ, ನಟ ದರ್ಶನ್ ವಿರುದ್ಧ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಪ್ರಕರಣ ಕೂಡ ದಾಖಲಿಸಿದ್ದಾರೆ.
ನಟ ದರ್ಶನ್ ಹಲವು ಬಾರಿ ಮಹಿಳೆಯರ ಘನತೆಗೆ ಅವಮಾನ ಆಗುವ ರೀತಿಯಲ್ಲಿ ಮಾತನಾಡಿದ್ದಾರೆ. ಇತ್ತೀಚೆಗೆ ಶ್ರೀರಂಗಪಟ್ಟಣದಲ್ಲಿ ನಡೆದ 25ನೇ ವರ್ಷದ ಬೆಳ್ಳಿ ಸಂದರ್ಭದಲ್ಲಿ ಮಠಾಧೀಶರು, ಗಣ್ಯ ವ್ಯಕ್ತಿಗಳು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ದರ್ಶನ್, “ಇವತ್ತು ಇವಳಿರ್ತಾಳೆ, ನಾಳೆ ಅವಳಿರ್ತಾಳೆ’ ಎಂದು ಮಹಿಳೆಯರಿಗೆ ಅವಮಾನವಾಗುವ ರೀತಿಯಲ್ಲಿ ನಿಂದಿಸಿ¨ªಾರೆ. ಈ ಹಿಂದೆ ತಮ್ಮ ಪತ್ನಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಜೈಲಿಗೂ ಹೋಗಿದ್ದರು. ಹೀಗಾಗಿ ಪದೇ ಪದೆ ಮಹಿಳೆಯರ ವಿರುದ್ಧ ಹೇಳಿಕೆ ನೀಡುವ ದರ್ಶನ್ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಮಹಿಳೆಯರು ದೂರಿನಲ್ಲಿ ಒತ್ತಾಯಿಸಿದ್ದಾರೆ.
ಮತ್ತೂಂದೆಡೆ ನಿರ್ಮಾಪಕ ಉಮಾಪತಿ ಗೌಡ ವಿರುದ್ಧ ಹೇಳಿಕೆ ನೀಡಿದ ಸಂಬಂಧ ರಾಜರಾಜೇಶ್ವರಿನಗರ ಠಾಣೆಯಲ್ಲಿ ಗಣೇಶ್‌ಗೌಡ ಮತ್ತು ಜಗದೀಶ್ ಎಂಬವರು ದರ್ಶನ್ ವಿರುದ್ಧ ದೂರು ನೀಡಿದ್ದಾರೆ. ಹೆಣ್ಣು ಮಕ್ಕಳ ನಿಂದನೆ ಮತ್ತು ರಾಜ್ಯದ ಪ್ರಭಾವಿ ಸಮುದಾಯದ ನಾಯಕ ಉಮಾಪತಿ ಗೌಡಗೆ ಅವಮಾನ ಮಾಡಿದ ರೀತಿಯಲ್ಲಿ ದರ್ಶನ್ ಮಾತನಾಡಿದ್ದಾರೆ. “ತಗಡೇ’ ಎಂಬ ಪದ ಬಳಸಿ ನಿಂದಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ದೂರಿನಲ್ಲಿ ದೂರುದಾರರು ಆರೋಪಿಸಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳ ಬಗ್ಗೆ ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಡಿ ಕೆಲ ದಿನಗಳ ಹಿಂದೆ ಗೌಡತಿಯರ ಸೇನೆ ರಾಜ್ಯ ಮಹಿಳಾ ಆಯೋಗಕ್ಕೆ ದರ್ಶನ್ ವಿರುದ್ಧ ದೂರು ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.