Case of Kondana; ಜ.26ರಂದು ತೆರೆಗೆ ಬರಲಿದೆ ವಿಜಯ್ ರಾಘವೇಂದ್ರ ಚಿತ್ರ
Team Udayavani, Jan 4, 2024, 2:17 PM IST
ವಿಜಯ ರಾಘವೇಂದ್ರ ಅವರು “ಕೇಸ್ ಆಫ್ ಕೊಂಡಾಣ’ ಎಂಬ ಚಿತ್ರ ಮಾಡಿದ್ದು ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ದೇವಿಪ್ರಸಾದ್ ಶೆಟ್ಟಿ ಈ ಚಿತ್ರದ ನಿರ್ದೇಶಕರು. ಈ ಹಿಂದೆ “ಸೀತಾರಾಮ್ ಬಿನೋಯ್’ ಎಂಬ ಚಿತ್ರ ಮಾಡಿದ್ದ ಇವರು ಈಗ ಹೈಪರ್ ಲಿಂಕ್ ಕಥೆ ಇರುವ ಇನ್ವೆಸ್ಟಿಗೇಷನ್ ಜಾನರ್‌ನ ಚಿತ್ರವನ್ನು ಮಾಡಿದ್ದಾರೆ. ಚಿತ್ರ ಜನವರಿ 26ರಂದು ತೆರೆಕಾಣಲಿದೆ.
ಇದು ಬೆಂಗಳೂರಿನಲ್ಲಿ ನಡೆಯುವ ಕಥೆಯಾಗಿದ್ದು, ಮೂರು ಕಥೆಗಳೊಂದಿಗೆ ಆರಂಭವಾಗಿ ಅಂತಿಮವಾಗಿ ಒಂದಕ್ಕೊಂದು ಸೇರಿಕೊಳ್ಳುವುದು ಈ ಚಿತ್ರದ ವಿಶೇಷ. ಈ ಚಿತ್ರದ ಮತ್ತೂಂದು ವಿಶೇಷವೆಂದರೆ ಕೊಂಡಾಣ ಎಂಬ ಕಾಲ್ಪನಿಕ ಸ್ಥಳದಲ್ಲಿ, ರಾತ್ರಿ ನಡೆಯುವ ಘಟನೆಗಳ ಸುತ್ತ ಚಿತ್ರ ಸಾಗಿಬಂದಿದೆ. ಚಿತ್ರದಲ್ಲಿ ವಿಜಯ ರಾಘವೇಂದ್ರ ಅವರ ಪಾತ್ರ ಹಾಗೂ ಗೆಟಪ್ ವಿಭಿನ್ನವಾಗಿದ್ದು, ಚಿತ್ರದಲ್ಲಿ ಸೆಂಟಿಮೆಂಟ್, ಆ್ಯಕ್ಷನ್, ಥ್ರಿಲ್ಲರ್ ಎಲ್ಲಾ ಅಂಶಗಳು ಇರುವುದರಿಂದ ಸಿನಿಮಾ ಪ್ರೇಮಿಗಳಿಗೆ ಈ ಚಿತ್ರ ಇಷ್ಟವಾಗುತ್ತದೆ ಎಂಬ ವಿಶ್ವಾಸ ಚಿತ್ರತಂಡದ್ದು. ಈ ಚಿತ್ರವನ್ನು ದೇವಿಪ್ರಸಾದ್ ಶೆಟ್ಟಿ ಹಾಗೂ ಸಾತ್ವಿಕ್ ಹೆಬ್ಟಾರ್ ನಿರ್ಮಿಸಿದ್ದಾರೆ.
ಚಿತ್ರದಲ್ಲಿ ವಿಜಯ ರಾಘವೇಂದ್ರ, ಭಾವನಾ ಮೆನನ್, ಖುಷಿ ರವಿ, ರಂಗಾಯಣ ರಘು ಸೇರಿದಂತೆ ಬಹು ದೊಡ್ಡ ತಾರಾಬಳಗವಿದೆ. ಚಿತ್ರಕ್ಕೆ ಗಗನ್ ಬಡೇರಿಯಾ ಸಂಗೀತ, ವಿಶ್ವ ಜಿತ್ ರಾವ್ ಛಾಯಾಗ್ರಹಣ, ಭವಾನಿ ಶಂಕರ್ ಆನೆಕಲ್ಲು ಕಲಾ ನಿರ್ದೇಶನ ಹಾಗೂ ಶಶಾಂಕ್ ನಾರಾಯಣ್ ಸಂಕಲನವಿದೆ.
ಪ್ರಮೋದ್ ಮರವಂತೆ, ವಿಶ್ವ ಜಿತ್ ರಾವ್ ಸಾಹಿತ್ಯವಿರುವ ಈ ಚಿತ್ರಕ್ಕೆ ಜೋಗಿ ಯವರು ಸಂಭಾಷಣೆ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.